K Annamalai: ಮುಂದಿನ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ: ಅಣ್ಣಾಮಲೈ ಘೋಷಣೆ
K Annamalai: ತಮಿಳುನಾಡು ಬಿಜೆಪಿಯಲ್ಲಿ ಯಾವುದೇ ಸ್ಪರ್ಧೆ ಇಲ್ಲ. ನಾವು ಸರ್ವಾನುಮತದಿಂದ ನಾಯಕನನ್ನು ಆಯ್ಕೆ ಮಾಡುತ್ತೇವೆ. ಆದರೆ ನಾನು ಸ್ಪರ್ಧೆಯಲ್ಲಿಲ್ಲ. ನಾನು ಬಿಜೆಪಿ ರಾಜ್ಯ ನಾಯಕತ್ವ ಸ್ಪರ್ಧೆಯಲ್ಲಿಲ್ಲ. ನಾವೆಲ್ಲರೂ ಜಂಟಿಯಾಗಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಆ ಹುದ್ದೆಗೆ ನಾನು ಸ್ಪರ್ಧೆಯಲ್ಲಿಲ್ಲ ಎಂದು ಅಣ್ಣಾಮಲೈ ಹೇಳಿದರು.


ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ (K Annamalai) ಘೋಷಿಸಿದ್ದಾರೆ. ಪಕ್ಷದ ಮುಂದಿನ ಬಿಜೆಪಿ ಅಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗುವುದು ಮತ್ತು ಅವರಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅಣ್ಣಾಮಲೈ ಶುಕ್ರವಾರ ಹೇಳಿದ್ದಾರೆ. ತಮಿಳುನಾಡು ಬಿಜೆಪಿಯಲ್ಲಿ ಯಾವುದೇ ಸ್ಪರ್ಧೆ ಇಲ್ಲ. ನಾವು ಸರ್ವಾನುಮತದಿಂದ ನಾಯಕನನ್ನು ಆಯ್ಕೆ ಮಾಡುತ್ತೇವೆ. ನಾನು ಸ್ಪರ್ಧೆಯಲ್ಲಿಲ್ಲ. ನಾನು ಬಿಜೆಪಿ ರಾಜ್ಯ ನಾಯಕತ್ವದ ಸ್ಪರ್ಧೆಯಲ್ಲಿಲ್ಲ ಎಂದು ಅವರು ಹೇಳಿದರು. ಬಿಜೆಪಿಯಲ್ಲಿ, ನಾಯಕರು ಪಕ್ಷದ ನಾಯಕ ಹುದ್ದೆಗೆ ಸ್ಪರ್ಧಿಸುವುದಿಲ್ಲ. ನಾವೆಲ್ಲರೂ ಜಂಟಿಯಾಗಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಆ ಹುದ್ದೆಗೆ ನಾನು ಸ್ಪರ್ಧಿಸುವುದಿಲ್ಲ” ಎಂದು ಕೆ. ಅಣ್ಣಾಮಲೈ ದೃಢವಾಗಿ ಹೇಳಿದರು.
ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ಪಕ್ಷಕ್ಕೆ ಉಜ್ವಲ ಭವಿಷ್ಯವಿರಬೇಕೆಂದು ನಾನು ಬಯಸುತ್ತೇನೆ. ಈ ಪಕ್ಷದ ಬೆಳವಣಿಗೆಗಾಗಿ ಅನೇಕರು ತಮ್ಮ ಪ್ರಾಣವನ್ನೇ ನೀಡಿದ್ದಾರೆ. ಈ ಪಕ್ಷಕ್ಕೆ ನಾನು ಯಾವಾಗಲೂ ಶುಭ ಹಾರೈಸುತ್ತೇನೆ ಎಂದಿದ್ದಾರೆ.
ಈ ಸುದ್ದಿಯನ್ನೂ ಓದಿ: K Annamalai: ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ- DMK ಸರ್ಕಾರದ ವಿರುದ್ಧ ವಿನೂತನ ಪ್ರೊಟೆಸ್ಟ್
ದಿಢೀರ್ ರಾಜೀನಾಮೆ ಘೋಷಿಸಲು ಕಾರಣ ಏನು?
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಸಾಧ್ಯತೆ ಚಿಗುರೊಡೆದಿದೆ. ಆದರೆ ಎಐಎಡಿಎಂಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯಲು ಇಷ್ಟಪಡುತ್ತಿಲ್ಲ. ಇದು ಅಣ್ಣಾಮಲೈ ಅಧಿಕಾರಕ್ಕೆ ಕುತ್ತು ಬಂದಿದೆ ಎನ್ನಲಾಗಿದೆ. ಇನ್ನು 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಕಾರಣ ಎಂಬುದು ಎಐಎಡಿಎಂಕೆ ಪಕ್ಷದ ಅಸಮಾಧಾನಕ್ಕೆ ಪ್ರಮುಖ ಕಾರಣ. ಅಲ್ಲದೇ ಜಾತಿ ಸಮೀಕರಣಗಳ ಕಾರಣದಿಂದಲೂ ಅಣ್ಣಾಮಲೈ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುವ ಸಾಧ್ಯತೆಗಳಿವೆ. ಅಣ್ಣಾಮಲೈ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾದ ಸಂದರ್ಭದಲ್ಲಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.