ಪತಿಯ ಶತಕ ಸಾಹಸಕ್ಕೆ ಮನಸೋತ ಪತ್ನಿ ಅನುಷ್ಕಾ; ಇನ್‌ಸ್ಟಾಗ್ರಾಮ್‌ನಲ್ಲಿ ವಿಶೇಷ ಪೋಸ್ಟ್
ಪಂದ್ಯದ ಬಳಿಕ ಕೊಹ್ಲಿ, ಅನುಷ್ಕಾ ಶರ್ಮ(Anushka Sharma) ವಿವಾಹದ ವೇಳೆ ನೀಡಿದ್ದ ಅಮೂಲ್ಯ ಉಂಗುರಕ್ಕೆ ಮುತ್ತು ನೀಡಿ ಶತಕವನ್ನು ಪತ್ನಿಗೆ ಅರ್ಪಿಸಿ ಪತ್ನಿಯ ಮೇಲಿನ ಪ್ರೀತಿಯನ್ನು ತೋರಿದರು. ಅತ್ತ ಇನ್‌ಸ್ಟಾಗ್ರಾಮ್‌ನಲ್ಲಿ ಅನುಷ್ಕಾ, ತಮ್ಮ ಪತಿಯ ಮೇಲಿನ ಪ್ರೀತಿಯನ್ನು ಪೋಸ್ಟ್ ಮೂಲಕ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊಹ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ತಮ್ಮ ಶತಕವನ್ನು ಪತ್ನಿ ಅನುಷ್ಕಾ ಶರ್ಮಾಗೆ(virat-anushka) ಅರ್ಪಿಸಿದ್ದಾರೆ. ಅತ್ತ ಪತಿಯ ಸಾಧನೆಗೆ ಅನುಷ್ಕಾ ಕೂಡ ಮೆಚ್ಚುಗೆ ಸೂಚಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾನುವಾರ ನಡೆದಿದ್ದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 242 ರನ್ ಗಳ ಗುರಿಯನ್ನು ಬೆನ್ನಟ್ಟುವ ವೇಳೆ ಪ್ರಚಂಡ ಬ್ಯಾಟಿಂಗ್ ನಡೆಸಿದ ಕೊಹ್ಲಿ ಅಜೇಯ ಶತಕ ಬಾರಿಸಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಪಂದ್ಯದ ಬಳಿಕ ಕೊಹ್ಲಿ, ಅನುಷ್ಕಾ ಶರ್ಮ(Anushka Sharma) ವಿವಾಹದ ವೇಳೆ ನೀಡಿದ್ದ ಅಮೂಲ್ಯ ಉಂಗುರಕ್ಕೆ ಮುತ್ತು ನೀಡಿ ಶತಕವನ್ನು ಪತ್ನಿಗೆ ಅರ್ಪಿಸಿ ಪತ್ನಿಯ ಮೇಲಿನ ಪ್ರೀತಿಯನ್ನು ತೋರಿದರು. ಅತ್ತ ಇನ್‌ಸ್ಟಾಗ್ರಾಮ್‌ನಲ್ಲಿ ಅನುಷ್ಕಾ, ತಮ್ಮ ಪತಿಯ ಮೇಲಿನ ಪ್ರೀತಿಯನ್ನು ಪೋಸ್ಟ್ ಮೂಲಕ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊಹ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Actor Anushka Sharma posted husband Virat Kohli's screengrab after he made a century, leading India's win against Pakistan on Sunday!
— HT City (@htcity) February 23, 2025
A doting wife forever! @AnushkaSharma @imVkohli #anushkasharma #viratkohli #Indiawins #indiavspakistan #Bollywood #INDvsPAK #India l pic.twitter.com/Iig7Ovt6WS
ಕಳೆದ 14 ತಿಂಗಳಿನಿಂದ ತೀವ್ರ ರನ್ ಬರಗಾಲ ಅನುಭವಿಸಿದ್ದ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಿ ಶತಕ ಬಾರಿಸಿ ಸಂಭ್ರಮಿಸಿದರು. ಜತೆಗೆ ತಮ್ಮ ನಿವೃತ್ತಿ ಬಗ್ಗೆ ಮಾತನಾಡುತ್ತಿದ್ದವರಿಗೆ ನನ್ನಲ್ಲಿ ಇನ್ನೂ ಆಡುವ ಸಾಮರ್ಥ್ಯವಿದೆ ಎನ್ನುವ ಸ್ಪಷ್ಟ ಸಂದೇಶ ನೀಡಿದರು. ಇದು ಕೊಹ್ಲಿ ಬಾರಿಸಿದ 51ನೇ ಏಕದಿನ ಶತಕ. ಒಟ್ಟಾರೆಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 82ನೇ ಶತಕ.
ಲೀಲಾಜಾಲವಾಗಿ ಬ್ಯಾಟ್ ಬೀಸಿದರು. ಕೊಹ್ಲಿ ಅಂತಿಮ ಹಂತದವರೆಗೂ ಬ್ಯಾಟಿಂಗ್ ನಡೆಸಿ 111 ಎಸೆತಗಳಿಂದ ಭರ್ತಿ 100 ರನ್ ಬಾರಿಸಿ ಅಜೇಯರಾಗಿ ಉಳಿದರು. ಕೊಹ್ಲಿ(287 ಇನಿಂಗ್ಸ್) 15 ರನ್ ಗಳಿಸುತ್ತಿದ್ದಂತೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 14 ಸಾವಿರ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡರು. ಸವಿನ್ ತೆಂಡೂಲ್ಕರ್(350 ಇನಿಂಗ್ಸ್) ಮತ್ತು ಕುಮಾರ ಸಂಗಕ್ಕರ (378 ಇನಿಂಗ್ಸ್) ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ Anand Mahindra: ಪಾಕ್ ವಿರುದ್ಧ ಸ್ಫೋಟಕ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿಯನ್ನು ಶ್ಲಾಘಿಸಿದ ಆನಂದ್ ಮಹೀಂದ್ರ
ಫೀಲ್ಡಿಂಗ್‌ನಲ್ಲಿಯೂ ಮಿಂಚಿದ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ಕ್ಯಾಚ್ ಪಡೆದ ಮೊದಲ ಭಾರತೀಯ ಹಾಗೂ ವಿಶ್ವದ ಮೂರನೇ ಫೀಲ್ಡರ್ ಎನಿಸಿಕೊಂಡರು. ಇದೇ ವೇಳೆ ಮಾಜಿ ನಾಯಕ ಹಾಗೂ ಆಟಗಾರ ಮೊಹಮ್ಮದ್ ಅಜರುದ್ದೀನ್(156) ದಾಖಲೆ ಪತನಗೊಂಡಿತು. ಕೊಹ್ಲಿ 158* ಕ್ಯಾಚ್ ಹಿಡಿದಿದ್ದಾರೆ. ವಿಶ್ವ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(218) ಹೆಸರಿನಲ್ಲಿದೆ.