ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

AR Rahman: ಸಂಗೀತ ಮಾಂತ್ರಿಕ ಎ.ಆರ್‌. ರೆಹಮಾನ್‌ ಎದೆನೋವಿನಿಂದ ಆಸ್ಪತ್ರೆಗೆ ದಾಖಲು

ಸಂಗೀತ ಮಾಂತ್ರಿಕ ಎ.ಆರ್‌. ರೆಹಮಾನ್‌(AR Rahman) ತೀವ್ರ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಪರೀಕ್ಷೆಗೊಳಪಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಎ.ಆರ್‌. ರೆಹಮಾನ್‌ ಎದೆನೋವಿನಿಂದ ಆಸ್ಪತ್ರೆಗೆ ದಾಖಲು

Profile Rakshita Karkera Mar 16, 2025 10:13 AM

ಚೆನ್ನೈ: ಸಂಗೀತ ಮಾಂತ್ರಿಕ ಎ.ಆರ್‌. ರೆಹಮಾನ್‌(AR Rahman)ಭಾನುವಾರ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡ ನಂತರ ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ. ಬೆಳಿಗ್ಗೆ 7:30 ರ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಪರೀಕ್ಷೆಗೊಳಪಡಿಸಿದ್ದಾರೆ. ಆಸ್ಪತ್ರೆಯ ನಿಕಟ ಮೂಲಗಳು ಅವರಿಗೆ ಆಂಜಿಯೋಗ್ರಾಮ್‌ಗೆ ಒಳಗಾಗಬಹುದು ಎಂದು ತಿಳಿಸಿವೆ. ವರದಿಗಳ ಪ್ರಕಾರ, ರೆಹಮಾನ್ ಅವರನ್ನು ಆಸ್ಪತ್ರೆಯ ತುರ್ತು ವಾರ್ಡ್‌ಗೆ ದಾಖಲಿಸಲಾಗಿದೆ, ಅಲ್ಲಿ ಅವರು ಪ್ರಸ್ತುತ ಆಂಜಿಯೋಪ್ಲಾಸ್ಟಿಗೆ ಒಳಗಾಗುತ್ತಿದ್ದಾರೆ. ಸಮರ್ಪಿತ ವೈದ್ಯರ ತಂಡವು ಅವರ ಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: AR Murugadoss: ಸಲ್ಮಾನ್‌-ರಶ್ಮಿಕಾ ನಟನೆಯ ʼಸಿಕಂದರ್‌ʼ ರಿಮೇಕ್‌ ಚಿತ್ರವ? ನಿರ್ದೇಶಕ ಎ.ಆರ್‌.ಮುರುಗದಾಸ್‌ ಹೇಳಿದ್ದೇನು?

ಎ.ಆರ್ ರೆಹಮಾನ್ ಪತ್ನಿ ಸೈರಾ ಬಾನು ಪತಿಯಿಂದ ವಿಚ್ಛೇದನ (Divorce) ಪಡೆದು ಬೇರ್ಪಡುವುದಾಗಿ ಘೋಷಿಸಿದ ನಂತರ ದೇಶಾದ್ಯಂತ ಭಾರೀ ಸುದ್ದಿಯಾಗಿದ್ದರು. 29 ವರ್ಷಗಳ ದಾಂಪತ್ಯಕ್ಕೆ ಇಬ್ಬರು ತೆರೆ ಎಳೆದಿದ್ದಾರೆ. ಮದುವೆಯಾದ ಹಲವು ವರ್ಷಗಳ ನಂತರ ಸೈರಾ ಅವರು ತಮ್ಮ ಪತಿ ಎಆರ್ ರೆಹಮಾನ್ ನಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದರು. ಒತ್ತಡ ಮತ್ತು ತೊಂದರೆಗಳು ತಮ್ಮ ನಡುವೆ ಸರಿಪಡಿಸಲಾಗದ ಅಂತರ ಸೃಷ್ಟಿಸಿವೆ.

ಎ.ಆರ್​ ರೆಹಮಾನ್ 1995 ರಲ್ಲಿ ಸೈರಾ ಅವರನ್ನು ವಿವಾಹವಾದರು. ಇವರ ಮದುವೆ ಅರೇಂಜ್ಡ್ ಮ್ಯಾರೇಜ್ ಆಗಿತ್ತು. ಸಿಮಿ ಗರೆವಾಲ್ ಅವರೊಂದಿಗಿನ ಚಾಟ್‌ನಲ್ಲಿ, ರೆಹಮಾನ್ ತನ್ನ ತಾಯಿ ಈ ಮದುವೆಯನ್ನು ನಿಶ್ಚಯ ಮಾಡಿದ್ರು ಎಂದು ಹೇಳಿಕೊಂಡಿದ್ರು. ನನಗಾಗಿ ಹುಡುಗಿಯನ್ನ ಹುಡುಕುವಷ್ಟು ಸಮಯ ನನಗೆ ಇರಲಿಲ್ಲ ಎಂದು ಎ.ಆರ್ ರೆಹಮಾನ್ ಹೇಳಿದ್ರು. ಅಮ್ಮ ಒಪ್ಪಿ ಮಾಡಿದೆ ಮದುವೆ ಇದು ಎಂದು ಸಂದರ್ಶನದಲ್ಲಿ ಹೇಳಿದ್ದರು. ಎಆರ್ ರೆಹಮಾನ್ ಹಾಗೂ ಸೈರಾ ಬಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟು 29 ವರ್ಷಗಳಾಗಿವೆ. ಇಬ್ಬರಿಗೂ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.

ಇತ್ತೀಚೆಗಷ್ಟೇ ರೆಹಮಾನ್‌ ಛಾವಾ ಮತ್ತು ಕಾದಲಿಕ್ಕನ್‌ ನೇರಮಿಲ್ಲೈ ಎಂಬ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು. ಸದ್ಯ ಮಣಿರತ್ನಂ ನಿರ್ದೇಶನದ ಮತ್ತು ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಿತ್ರಕ್ಕೆ ಸಂಗೀತ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದರು. ಈ ಚಿತ್ರ ಜೂನ್ 10 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ.