'ಜವಾಬ್ದಾರಿಯಿಂದ ಆಡಬೇಕು'; ರೋಹಿತ್‌ಗೆ ಪರೋಕ್ಷ ಎಚ್ಚರಿಕೆ ನೀಡಿದ ಹಾರ್ದಿಕ್
ನಿಷೇಧ ಶಿಕ್ಷೆ ಮುಗಿಸಿ ಆಡಿದ ಮರು ಪಂದ್ಯದಲ್ಲೇ ಮತ್ತೆ ಹಾರ್ದಿಕ್ ಪಾಂಡ್ಯ ನಿಧಾನಗತಿ ಓವರ್ ರೇಟ್ ತಪ್ಪಿಗಾಗಿ 12 ಲಕ್ಷ ರೂ. ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಕಳೆದ ಆವೃತ್ತಿಯಲ್ಲಿ ಮೂರು ಸಲ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲರಾದ ಕಾರಣಕ್ಕೆ ಹಾರ್ದಿಕ್ ಮೇಲೆ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು.


ಅಹಮದಾಬಾದ್: ಶನಿವಾರ ನಡೆದ ಐಪಿಎಲ್(IPL 2025) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್(Gujarat Titans) ವಿರುದ್ಧ 36 ರನ್ ಅಂತರದಿಂದ ಮುಗ್ಗರಿಸಿತ್ತು. ಸೋಲಿನ ಬಳಿಕ ನಾಯಕ ಹಾರ್ದಿಕ್ ಪಾಂಡ್ಯ (Hardik Pandya)ಹಿರಿಯ ಆಟಗಾರ ರೋಹಿತ್ ಶರ್ಮ(Rohit Sharma)ಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟಾನ್ಸ್ 197 ರನ್ ಬಾರಿಸಿದರೆ, ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 6 ವಿಕೆಟ್‌ಗಳ ನಷ್ಟಕ್ಕೆ 160 ರನ್‌ಗಳಿಗೆ ಸೀಮಿತವಾಗಿ ಸೋಲೊಪ್ಪಿಕೊಂಡಿತು.
ಪಂದ್ಯದ ಬಳಿಕ ಮಾತನಾಡಿದ ಹಾರ್ದಿಕ್, 'ನಾವು ಮೈದಾನದಲ್ಲಿ ವೃತ್ತಿಪರರಾಗಿರಲಿಲ್ಲ ಆಡಿಲ್ಲ. ಗುಜರಾತ್ ತಂಡ ಆರಂಭಿಕ ಆಟಗಾರರು ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಸದ್ಯ, ನಾವೆಲ್ಲರೂ ಜವಾಬ್ದಾರಿಯಿಂದ ಆಡಬೇಕಿದೆ. ಆರಂಭಿಕ ಬ್ಯಾಟರ್‌ಗಳು ಉತ್ತಮ ರನ್ ಗಳಿಸಿ ತಂಡಕ್ಕೆ ಮುನ್ನಡೆ ತಂದುಕೊಡಬೇಕಿದೆ. ಮುಂದಿನ ಪಂದ್ಯಲ್ಲಿ ಈ ತಪ್ಪುಗಳು ಮರುಕಳಿಸದಂತೆ ಆಡಿಬೇಕಿದೆ' ಎಂದು ಹೇಳಿದರು. ಅವರ ಈ ಹೇಳಿಕೆ ಸತತ ಎರಡು ಪಂದ್ಯಗಳಲ್ಲಿ ವೈಫಲ್ಯ ಕಂಡ ರೋಹಿತ್‌ಗೆ ಪರೋಕ್ಷವಾಗಿ ಟಾಂಗ್ ಮತ್ತು ಎಚ್ಚರಿಕೆ ನೀಡಿದಂತಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.
ಹಾರ್ದಿಕ್ ಪಾಂಡ್ಯ ಗುಜರಾತ್ ವಿರುದ್ಧ ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರೂ ಬೌಲಿಂಗ್‌ನಲ್ಲಿ 2 ವಿಕೆಟ್ ಕಿತ್ತರು. ಬ್ಯಾಟಿಂಗ್‌ನಲ್ಲಿ 11 ರನ್ ಮಾತ್ರ ಗಳಿಸಿದರು.
ಇದನ್ನೂ ಓದಿ IPL 2025: ಚೆನ್ನೈ ಸೂಪರ್ ಕಿಂಗ್ಸ್‌ಗೆ ಮತ್ತೆ ಎಂಎಸ್ ಧೋನಿ ನಾಯಕನಾಗಬೇಕೆಂದ ಸಂಜಯ್ ಮಾಂಜ್ರೇಕರ್!
12 ಲಕ್ಷ ದಂಡ
ನಿಷೇಧ ಶಿಕ್ಷೆ ಮುಗಿಸಿ ಆಡಿದ ಮರು ಪಂದ್ಯದಲ್ಲೇ ಮತ್ತೆ ಹಾರ್ದಿಕ್ ಪಾಂಡ್ಯ ನಿಧಾನಗತಿ ಓವರ್ ರೇಟ್ ತಪ್ಪಿಗಾಗಿ 12 ಲಕ್ಷ ರೂ. ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಕಳೆದ ಆವೃತ್ತಿಯಲ್ಲಿ ಮೂರು ಸಲ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲರಾದ ಕಾರಣಕ್ಕೆ ಹಾರ್ದಿಕ್ ಮೇಲೆ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು. ಹೀಗಾಗಿ ಅವರು ಈ ಬಾರಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದರು.