Gruhalakshmi Scheme: ‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ
ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಐರಣಿ ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ 24,000 ರೂ. ಹಣವನ್ನು ಕೂಡಿಟ್ಟು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ನೀಡಿದ್ದಾರೆ.
ಹಾವೇರಿ: ಆಶಾ ಕಾರ್ಯಕರ್ತೆಯೊಬ್ಬರು (Asha Worker) ತಮಗೆ ಗೃಹಲಕ್ಷ್ಮಿ ಯೋಜನೆಯಿಂದ (Gruha Lakshmi Scheme) ಒಂದು ವರ್ಷದಲ್ಲಿ ಬಂದ 24 ಸಾವಿರ ರೂ.ಗಳನ್ನು ಸರ್ಕಾರಿ ಶಾಲೆಯ (Government School) ಅಭಿವೃದ್ಧಿಗೆ ನೀಡಿ ಮಾದರಿ ಆಗಿದ್ದಾರೆ. ಹಾವೇರಿ (Haveri news) ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಐರಣಿ ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ 24,000 ರೂ. ಹಣವನ್ನು ಕೂಡಿಟ್ಟು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ನೀಡಿದ್ದಾರೆ. ಗಂಗಮ್ಮಳ ಕಾರ್ಯವನ್ನು ಮೆಚ್ಚಿದ ಶಾಲೆಯ ಎಸ್‌ಡಿಎಂಸಿಯವರು ದಂಪತಿಯನ್ನು ಸನ್ಮಾನಿಸಿ ಗೌರವಿಸಿದ್ದಾರೆ.
ಗ್ರಾಮಸ್ಥರು ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅದನ್ನು ಕಂಡು ನನಗೂ ಶಾಲೆಗೆ ದೇಣಿಗೆ ಕೊಡಬೇಕೆಂದು ಪ್ರೇರಣೆ ಬಂತು. ಹೀಗಾಗಿ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು 24 ಸಾವಿರ ರೂ.ಗಳನ್ನು ನೀಡಿದ್ದೇನೆ ಎಂದು ಗಂಗಮ್ಮ ತಿಳಿಸಿದ್ದಾರೆ.
ಚಳಿಯ ಬಾಣಲೆಯಿಂದ ಬಿಸಿಲಿನ ಬೆಂಕಿಗೆ ರಾಜ್ಯದ ಜನ, ಫೆಬ್ರವರಿಯಲ್ಲೇ ಧಗೆ
ಬೆಂಗಳೂರು: ರಾಜ್ಯದ ವಾತಾವರಣ ದಿಡೀರ್ ಬದಲಾಗಿದೆ. ಕಳೆದ ವಾರದವರೆಗೂ ಅತಿ ಚಳಿಯಿಂದ ಮರಗಟ್ಟಿಹೋಗಿದ್ದ ರಾಜ್ಯದ ಜನ ನಿಧಾನವಾಗಿ ಬಿಸಿಲಿನ ಧಗೆ ಎದುರಿಸತೊಡಗಿದ್ದಾರೆ. ಈ ಬಾರಿ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಫೆಬ್ರವರಿ ತಿಂಗಳಿಂದಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಈ ಬಾರಿ ರಣಬಿಸಿಲಿನ ಬೇಸಿಗೆ ಇರುವುದು ನಿಚ್ಚಳವಾಗಿದೆ. ಜತೆಗೆ, ಉಷ್ಣ ಅಲೆ ಬೀಸುವ ಎಲ್ಲ ಲಕ್ಷಣ ದಟ್ಟವಾಗಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಕಲಬುರಗಿಯಲ್ಲಿ ಅತಿ ಹೆಚ್ಚು 36.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ವಾಡಿಕೆಗಿಂತ 3.6 ಡಿ.ಸೆ. ಅಧಿಕವಾಗಿದೆ. ಅದೇ ರೀತಿ ಬಾಗಲಕೋಟೆಯಲ್ಲಿ 34.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ವಾಡಿಕೆ ಪ್ರಮಾಣಕ್ಕಿಂತ 4.5 ಡಿ.ಸೆ. ಹೆಚ್ಚಾಗಿದೆ. ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಬಿಸಿಲು ದಾಖಲಾಗುತ್ತಿದೆ. ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 4 ಡಿ.ಸೆ. ವರೆಗೆ ಹೆಚ್ಚಾಗಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಬಿಸಿಲು ಹೆಚ್ಚಾಗಿದೆ.
ಇಷ್ಟು ದಿನ ಬಿಸಿಲು ಕಡಿಮೆ ಇತ್ತು. ಇದೀಗ ಗರಿಷ್ಠ ಉಷ್ಣಾಂಶದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್ ಹೆಚ್ಚಾದರೂ ಭಾರೀ ಬಿಸಿಲಿನ ಅನುಭವ ಆಗಲಿದೆ. ಪೂರ್ಣ ಪ್ರಮಾಣದಲ್ಲಿ ಬೇಸಿಗೆ ಶುರುವಾಗುತ್ತಿದಂತೆ ಇನ್ನಷ್ಟು ಹೆಚ್ಚಾಗಲಿದೆ. ಇದರ ಪರಿಣಾಮದಿಂದ ರಾಜ್ಯದಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಭಾರತೀಯ ಹವಾಮಾನ ಇಲಾಖೆ ದೇಶದ ಎಲ್ಲ ರಾಜ್ಯದ ಅಧಿಕಾರಿಗಳಿಗೆ ಉಷ್ಣ ಅಲೆ ಕುರಿತು ಜಾಗೃತಿ, ಕ್ರಿಯಾಯೋಜನೆ ಸಿದ್ದಪಡಿಸಲು ಕಾರ್ಯಾಗಾರ ನಡೆಸುತ್ತಿದೆ. ಭಾರೀಬಿಸಿಲು ಇದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಬಿಸಿಲಿನ ತಾಪಕ್ಕೆ ಮೋಡ ಕಟ್ಟಿ ಏಕಾಏಕಿ ಮಳೆ ಸುರಿಯುವ ಸಾಧ್ಯತೆಯೂ ಇರಲಿದೆ ಎಂದು ವಿವರಿಸಿದ್ದಾರೆ.
ಇದನ್ನೂ ಓದಿ: SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ: ಗೃಹ ಸಚಿವರ ಪ್ರತಿಕ್ರಿಯೆ