Assault Case: ಮಾಡೆಲ್ ಮೇಲೆ ಖಾಸಗಿ ಬಸ್ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತುಗಳ ಸುಲಿಗೆ
Assault Case: ತನ್ನ ದುಬಾರಿ ಬೆಲೆಯ ಶೂ, ಏರ್ ಬಡ್ಸ್, 44 ಸಾವಿರ ರೂ ಬೆಲೆ ಸನ್ ಗ್ಲಾಸ್, 1.85 ಲಕ್ಷ ರೂ ಬೆಲೆಯ ಪ್ಲಾಟಿನಂ ಪೆಂಡೆಂಟ್ ಇರುವ ಸಿಲ್ವರ್ ಚೈನ್, ಪಾಸ್ಪೋರ್ಟ್, 45 ಸಾವಿರ ರೂ ಬೆಲೆಯ ವಾಚ್, 40 ಸಾವಿರ ರೂ ಮೌಲ್ಯದ ಪ್ಲಾಟಿನಂ ರಿಂಗ್ ಹಾಗೂ ಪರ್ಸ್ನಲ್ಲಿದ್ದ 10 ಸಾವಿರ ರೂ. ಹಣ ಕೂಡ ಕದ್ದಿರುವುದಾಗಿ ಮಾಡೆಲ್ ಧ್ರುವ್ ನಾಯ್ಕ್ ಆರೋಪಿಸಿದ್ದಾರೆ.

ಹಲ್ಲೆಗೊಳಗಾದ ಧ್ರುವ್ ನಾಯ್ಕ್

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಖಾಸಗಿ ಬಸ್ (private bus) ಸಿಬ್ಬಂದಿಗಳು ಮಾಡೆಲ್ (Model) ಒಬ್ಬನ ಮೇಲೆ ಹಲ್ಲೆ (assault case) ಮಾಡಿ, ದೇಹದ ಭಾಗಗಳಿಗೆ ಪರಚಿ ಬಾಸುಂಡೆ ಬರುವಂತೆ ರಾಡು, ದೊಣ್ಣೆಯಿಂದ ಥಳಿಸಿ, ಆತನ ಬಳಿಯಿದ್ದ ಬೆಲೆ ಬಾಳುವ ವಸ್ತುಗಳನ್ನು ದೋಚಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ (Bengaluru Crime news) ಆನಂದರಾವ್ ಸರ್ಕಲ್ನಲ್ಲಿ ಘಟನೆ ನಡೆದಿದೆ. ಮಾಡೆಲ್ ಧ್ರುವ ನಾಯ್ಕ್ ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.
ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್ಗೆ ಹೋಗಿ ಜುಲೈ 1ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ದರು. ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದು, ರಾತ್ರಿ 11.30ಕ್ಕೆ ಬೆಂಗಳೂರಿನಿಂದ ತಮ್ಮೂರು ಹುಬ್ಬಳ್ಳಿಗೆ ಹೋಗಲು ಸೀಬರ್ಡ್ ಬಸ್ ಬುಕ್ ಮಾಡಿದ್ದಾರೆ. ರಾತ್ರಿ 1 ಗಂಟೆಗೆ ಸ್ನೇಹಿತರ ಜೊತೆಗೆ ಊರಿಗೆ ತೆರಳಲು ಆನಂದ್ ರಾವ್ ಸರ್ಕಲ್ ಬಳಿಗೆ ಬಂದ ಧ್ರುವ ನಾಯ್ಕ್ ಸ್ನೇಹಿತನ ಜೊತೆ ಕೆಳಗೆ ನಿಂತು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಬಸ್ ಬಾಗಿಲು ಬಂದ್ ಮಾಡಿದ ಚಾಲಕ ನಿಧಾನವಾಗಿ ಬಸ್ಸು ಮೂವ್ ಮಾಡಿದ್ದ.
ಈ ವೇಳೆ ಧ್ರುವ ನಾಯಕ್ ಕೈ ಅಡ್ಡಗಟ್ಟಿ ನಾನು ಬರೋದಿದೆ ಬಸ್ ನಿಲ್ಲಿಸಿ ಎಂದಿದ್ದಾರೆ. ಈ ವೇಳೆ ಸೀಬರ್ಡ್ ಸಿಬ್ಬಂದಿ ಮತ್ತು ಧ್ರುವ ನಾಯ್ಕ್ ನಡುವೆ ಮಾತಿನ ಚಕಮಕಿ ನಡೆದಿದೆ. ಕೆರಳಿದ ಬಸ್ ಸಿಬ್ಬಂದಿ ಧ್ರುವ್ ನಾಯ್ಕ್ ಮೇಲೆ ಹಲ್ಲೆ ಮಾಡಿದ್ದಾರೆ. ಮುಖ, ಕತ್ತು, ಎದೆ, ಭಾಗಕ್ಕೆ ಪರಚಿದ ಗುರುತಾಗಿದ್ದು, ಬೆನ್ನು ಮತ್ತು ಭುಜದ ಮೇಲೆ ಬಾಸುಂಡೆ ಬರುವಂತೆ ಥಳಿಸಿದ್ದಾರೆ. ಧ್ರುವ್ ಅವರ ದುಬಾರಿ ಬೆಲೆಯ ಶೂ, ಏರ್ ಬಡ್ಸ್, 44 ಸಾವಿರ ರೂ ಬೆಲೆ ಸನ್ ಗ್ಲಾಸ್, 1.85 ಲಕ್ಷ ರೂ ಬೆಲೆಯ ಪ್ಲಾಟಿನಂ ಪೆಂಡೆಂಟ್ ಇರುವ ಸಿಲ್ವರ್ ಚೈನ್, ಪಾಸ್ಪೋರ್ಟ್, 45 ಸಾವಿರ ರೂ ಬೆಲೆಯ ವಾಚ್, 40 ಸಾವಿರ ರೂ ಮೌಲ್ಯದ ಪ್ಲಾಟಿನಂ ರಿಂಗ್ ಹಾಗೂ ಪರ್ಸ್ನಲ್ಲಿದ್ದ 10 ಸಾವಿರ ರೂ. ಹಣ ಕೂಡ ಕದ್ದಿರುವುದಾಗಿ ಧ್ರುವ್ ನಾಯ್ಕ್ ಆರೋಪಿಸಿದ್ದಾರೆ.
ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸದೇ, ಸಿಸಿಟಿವಿ ಪರಿಶೀಲನೆ ಕೂಡ ನಡೆಸದೇ ಬೇಜವಾಬ್ದಾರಿ ತೋರಿದ್ದಾರೆ ಎಂದು ಧ್ರುವ್ ನಾಯ್ಕ್ ಪರ ವಕೀಲರು ಆರೋಪಿಸಿದ್ದು, ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Viral Video: ಫ್ಲೈಟ್ನಲ್ಲಿ ಸಹಪ್ರಯಾಣಿಕನ ಮೇಲೆ ಹಲ್ಲೆ; ಭಾರತೀಯ ಮೂಲದ ವ್ಯಕ್ತಿ ಬಂಧನ