ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಭಾರತದ ಧ್ವಜ ಹಾರಿಸಿದ ಯುವಕನ ಬಂಧನ!

ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ್ದ ಯುವಕನನ್ನು ಅಲ್ಲಿನ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆಂದು ವರದಿಯಾಗಿದೆ. ಅಂದ ಹಾಗೆ ವೈರಲ್‌ ಆಗಿರುವ ವಿಡಿಯೊದಲ್ಲಿ ಕ್ರೀಡಾಂಗಣದ ಭದ್ರತಾ ಸಿಬ್ಬಂದಿ, ಯುವಕನನ್ನು ಎಳೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ.

AUS vs ENG ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಯುವಕನ ಬಂಧನ!

ಲಾಹೋರ್‌ನಲ್ಲಿ ಭಾರತದ ಧ್ವಜ ಹಾರಿಸಿದ ಇಬ್ಬರ ಬಂಧನ!

Profile Ramesh Kote Feb 25, 2025 6:55 PM

ಲಾಹೋರ್‌: ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಯುವಕನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಫೆಬ್ರವರಿ 22 ರಂದು ನಡೆದಿದ್ದ ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ವೈರಲ್‌ ಆಗಿರುವ ವಿಡಿಯೊದಲ್ಲಿ ಮೈದಾನದ ಭದ್ರತಾ ಸಿಬ್ಬಂದಿ, ಯುವಕನಿಂದ ಭಾರತದ ಧ್ವಜವನ್ನು ಕಿತ್ತುಕೊಂಡು, ಆತನನ್ನು ಎಳದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ.

ಕಪ್ಪು ಪ್ಯಾಂಟ್, ಕಪ್ಪು ಜಾಕೆಟ್ ಮತ್ತು ಏವಿಯೇಟರ್ ಸನ್ ಗ್ಲಾಸ್ ಧರಿಸಿದ್ದ ಯುವಕ ಭಾರತದ ಧ್ವಜವನ್ನು ಹಾರಿಸುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿತು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಘಟನೆಯ ವಿಡಿಯೋದಲ್ಲಿ ಅಧಿಕಾರಿಗಳು ಆ ವ್ಯಕ್ತಿ ಕುಳಿತಿದ್ದ ಸ್ಥಳದಿಂದ ಬಲವಂತವಾಗಿ ಕರೆದೊಯ್ದಿರುವುದು ಕಂಡುಬಂದಿದೆ. ಅಧಿಕಾರಿಗಳು ಆ ವ್ಯಕ್ತಿಯ ಗುರುತು ಅಥವಾ ರಾಷ್ಟ್ರೀಯತೆಯನ್ನು ಬಹಿರಂಗಪಡಿಸಿಲ್ಲ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

AUS vs ENG: ಜಾಶ್‌ ಇಂಗ್ಲಿಸ್‌ ಶತಕ, ಇಂಗ್ಲೆಂಡ್‌ ವಿರುದ್ಧ ಹೈಸ್ಕೋರಿಂಗ್‌ ಪಂದ್ಯ ಗೆದ್ದ ಆಸ್ಟ್ರೇಲಿಯಾ!

ರಾಜಕೀಯ ಭಿನ್ನಾಭಿಪ್ರಾಯಗಳಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವಣ ದ್ವಿಪಕ್ಷೀಯ ಸರಣಿಗಳು ಕೂಡ ಕಳೆದ ಒಂದೂವರೆ ದಶಕದಿಂದ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಏಷ್ಯಾ ಅಥವಾ ಐಸಿಸಿ ಅಡಿಯಲ್ಲಿ ನಡೆಯುವ ಟೂರ್ನಿಗಳಲ್ಲಿ ಮಾತ್ರ ಈ ಎರಡೂ ತಂಡಗಳು ಕಾದಾಟ ನಡೆಸಲಿವೆ. ಅಪರೂಪಕ್ಕೆ ನಡೆಯುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಇಡೀ ವಿಶ್ವದಾದ್ಯಂತ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.



ಇಂಗ್ಲೆಂಡ್‌ ವಿರುದ್ಧ ಗೆಲುವು ಪಡೆದಿದ್ದ ಆಸ್ಟ್ರೇಲಿಯಾ

ಅಂದ ಹಾಗೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡ 5 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಕಾಂಗರೂ ಪಡೆ ಶುಭಾರಂಭ ಕಂಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಇಂಗ್ಲೆಂಡ್‌ ತಂಡ, ತನ್ನ ಪಾಲಿನ 50 ಓವರ್‌ಗಳಿಗೆ 8 ವಿಕೆಟ್‌ಗಳನ್ನು ಕಳೆದುಕೊಂಡು 351 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 352 ರನ್‌ಗಳ ಗುರಿಯನ್ನು ನೀಡಿತ್ತು. ಇಂಗ್ಲೆಂಡ್‌ ಪರ ಬೆನ್‌ ಡಕೆಟ್‌ ಭರ್ಜರಿ ಶತಕ ಸಿಡಿಸಿದ್ದರು.



ಬಳಿಕ ಗುರಿ ಹಿಂಬಾಲಿಸಿದ್ದ ಆಸ್ಟ್ರೇಲಿಯಾ ತಂಡ, ಆರಂಭಿಕ ಆಘಾತ ಅನುಭವಿಸಿತ್ತು.ಆದರೆ, ಮಧ್ಯಮ ಕ್ರಮಾಂಕದಲ್ಲಿ ಜಾಶ್‌ ಹೇಝಲ್‌ವುಡ್‌ ಶತಕ, ಅಲೆಕ್ಸ್‌ ಕೇರಿ ಮತ್ತು ಮ್ಯಾಥ್ಯೂ ಶಾರ್ಟ್‌ ಅರ್ಧಶತಕಗಳ ಬಲದಿಂದ ಆಸ್ಟ್ರೇಲಿಯಾ ತಂಡ, 47.3 ಓವರ್‌ಗಳಿಗೆ ಐದು ವಿಕೆಟ್‌ ನಷ್ಟಕ್ಕೆ 356 ರನ್‌ಗಳನ್ನು ಕಲೆ ಹಾಕಿ 5 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು.