ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

AUS vs ENG: ಆಸ್ಟ್ರೇಲಿಯಾ ವಿರುದ್ಧ 165 ರನ್‌ ಸಿಡಿಸಿ ಇತಿಹಾಸ ಸೃಷ್ಟಿಸಿದ ಬೆನ್‌ ಡಕೆಟ್‌!

Ben Duckett Creates History in CT 2025: ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಬೆನ್‌ ಡಕೆಟ್‌ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ನೂತನ ದಾಖಲೆಯನ್ನು ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 165 ರನ್‌ ಗಳಿಸುವ ಮೂಲಕ ಅವರು ಈ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ.

ಭರ್ಜರಿ ಶತಕ ಸಿಡಿಸಿ ನೂತನ ಮೈಲುಗಲ್ಲು ಸ್ಥಾಪಿಸಿದ ಬೆನ್‌ ಡಕೆಟ್‌!

ಶತಕ ಸಿಡಿಸಿ ಸಂಭ್ರಮಿಸಿದ ಬೆನ್‌ ಡಕೆಟ್‌.

Profile Ramesh Kote Feb 22, 2025 8:13 PM

ಲಾಹೋರ್‌: ಆಸ್ಟ್ರೇಲಿಯಾ ವಿರುದ್ದದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ 165 ರನ್‌ಗಳನ್ನು ಸಿಡಿಸುವ ಮೂಲಕ ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ನೂತನ ದಾಖಲೆಯನ್ನು ಬರೆದಿದ್ದಾರೆ. ತಮ್ಮ ಸೊಗಸಾದ ಇನಿಂಗ್ಸ್‌ನಲ್ಲಿ ಬೆನ್‌ ಡಕೆಟ್‌ 3 ಸಿಕ್ಸರ್‌ ಹಾಗೂ 17 ಬೌಂಡರಿಗಳನ್ನು ಸಿಡಿಸಿದರು. ಇದರಲ್ಲಿ ಅವರ 115ರ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ಗಳನ್ನು ಗಳಿಸಿದ್ದಾರೆ. ಆ ಮೂಲಕ ಇಂಗ್ಲೆಂಡ್‌ ತಂಡ ತನ್ನ ಪಾಲಿನ 50 ಓವರ್‌ಗಳಿಗೆ 351 ರನ್‌ಗಳನ್ನು ಕಲೆ ಹಾಕಿತು ಹಾಗೂ ಆಸ್ಟ್ರೇಲಿಯಾ ತಂಡಕ್ಕೆ 352 ರನ್‌ಗಳ ಗುರಿಯನ್ನು ನೀಡಿತು.

ಆರಂಭಿಕ ಎರಡು ವಿಕೆಟ್‌ಗಳನ್ನು ಬಹುಬೇಗ ಕಳೆದುಕೊಂಡಿದ್ದ ಇಂಗ್ಲೆಂಡ್‌ ತಂಡದ ಪರ ಮೂರನೇ ವಿಕೆಟ್‌ಗೆ ಜೊತೆಯಾದ ಬೆನ್‌ ಡಕೆಟ್‌ ಮತ್ತು ಜೋ ರೂಟ್‌ ಅವರು 158 ರನ್‌ಗಳನ್ನು ಕಲೆ ಹಾಕಿದರು. ಇಂಗ್ಲೆಂಡ್‌ ಮಾಜಿ ನಾಯಕ ಜೋ ರೂಟ್‌ 78 ಎಸೆತಗಳಲ್ಲಿ 68 ರನ್‌ಗಳನ್ನು ಕಲೆ ಹಾಕಿ ವಿಕೆಟ್‌ ಒಪ್ಪಿಸಿದರು. ಕೊನೆಯಲ್ಲಿ ಕೇವಲ10 ಎಸೆತಗಳಲ್ಲಿ ಅಜೇಯ 21 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಇಂಗ್ಲೆಂಡ್‌ ತಂಡ 350 ರನ್‌ಗಳನ್ನು ಕಲೆ ಹಾಕಲು ನೆರವು ನೀಡಿದ್ದರು.

IND vs PAK: ವರುಣ್‌ ಚಕ್ರವರ್ತಿ ಇನ್‌? ಭಾರತದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ನಿರೀಕ್ಷೆ!

ನೂತನ ಮೈಲುಗಲ್ಲು ಸ್ಥಾಪಿಸಿದ ಬೆನ್‌ ಡಕೆಟ್‌

ತಮ್ಮ ವೃತ್ತಿ ಜೀವನದ ಶ್ರೇಷ್ಠ ಇನಿಂಗ್ಸ್‌ ಮೂಲಕ ಬೆನ್‌ ಡಕೆಟ್‌ ಅವರು ನೂತನ ಮೈಲುಗಲ್ಲು ತಲುಪಿದ್ದಾರೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿಯೇ ವೈಯಕ್ತಿಕ ಗರಿಷ್ಠ ಮೊತ್ತವನ್ನು ಕಲೆ ಹಾಕಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಬೆನ್‌ ಡಕೆಟ್‌ ಬರೆದಿದ್ದಾರೆ. ಆ ಮೂಲಕ 23 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಆಂಡಿ ಫ್ಲವರ್‌ ಮತ್ತು ನೇಥನ್‌ ಆಶ್ಲೆ ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡಿದ್ದರು. ಆಂಡಿ ಫ್ಲವರ್‌ ಅವರು 2002ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ 164 ಎಸೆತಗಳಲ್ಲಿ 145 ರನ್‌ಗಳನ್ನು ಕಲೆ ಹಾಕಿದ್ದರು. ಇನ್ನು ನೇಥನ್‌ ಆಶ್ಲೇ ಅವರು 2004ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಯುಎಸ್‌ಎ ವಿರುದ್ದದ ಪಂದ್ಯದಲ್ಲಿ 151 ಎಸೆತಗಳಲ್ಲಿ ಅಜೇಯ 145 ರನ್‌ಗಳನ್ನು ದಾಖಲಿಸಿದ್ದರು.

IND vs PAK: ಇಂಡೋ-ಪಾಕ್‌ ಪಂದ್ಯದ ಪಿಚ್‌ ರಿಪೋರ್ಟ್‌, ಸಂಭಾವ್ಯ ತಂಡ, ಹವಾಮಾನ ವರದಿ ಹೇಗಿದೆ?

ಜೋ ರೂಟ್‌ ದಾಖಲೆ ಮುರಿದ ಡಕೆಟ್‌

ತಮ್ಮ ಅಮೋಘ ಇನಿಂಗ್ಸ್‌ ಮೂಲಕ ಬೆನ್‌ ಡಕೆಟ್‌, ಜೋ ರೂಟ್‌ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. 2017ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಜೋ ರೂಟ್‌ 133 ರನ್‌ಗಳನ್ನು ಕಲೆ ಹಾಕಿದ್ದರು. 2002ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಜಿಂಬಾಬ್ವೆ ವಿರುದ್ದದ ಪಂದ್ಯದಲ್ಲಿ ಮಾರ್ಕಸ್‌ ಟ್ರೆಸ್ಕೋಥಿಕ್‌ 119 ರನ್‌ಗಳನ್ನು ಗಳಿಸಿದ್ದರು. ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ವೈಯಕ್ತಿಕ ಗರಿಷ್ಠ ಮೊತ್ತ ಕಲೆ ಹಾಕಿದ ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಬೆನ್‌ ಡಕೆಟ್‌ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.

ಕಳೆದ ಸರಣಿಗಳ ಸೋಲಿನೊಂದಿಗೆ ಟೂರ್ನಿಗೆ ಆಗಮಿಸಿರುವ ಇಂಗ್ಲೆಂಡ್‌-ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ತಂಡಗಳು ಕಳೆದ ಏಕದಿನ ಸರಣಿಗಳಲ್ಲಿ ಸೋಲು ಅನುಭವಿಸಿದ್ದವು. ಭಾರತದ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್‌ ತಂಡ 0-3 ಅಂತರದಲ್ಲಿ ವೈಟ್‌ ವಾಷ್‌ ಆಘಾತ ಅನುಭವಿಸಿತ್ತು. ಇನ್ನು ಆಸ್ಟ್ರೇಲಿಯಾ ತಂಡ, ಶ್ರೀಲಂಕಾ ಎದುರು ಎರಡು ಪಂದ್ಯಗಳ ಏಕದಿನ ಸರೆಣಿಯಲ್ಲಿ 0-2 ಅಂತರದಲ್ಲಿ ಸೋಲು ಅನುಭವಿಸಿತ್ತು.