ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಟಿಮ್‌ ಡೇವಿಡ್‌ ಶತಕದ ಬಲದಿಂದ ವಿಂಡೀಸ್‌ ಎದುರು ಟಿ20ಐ ಸರಣಿ ಗೆದ್ದ ಆಸ್ಟ್ರೇಲಿಯಾ!

AUS vs WI Match Highlights: ಟಿಮ್‌ ಡೇವಿಡ್‌ ಅವರ ದಾಖಲೆ ಶತಕದ ಬಲದಿಂದ ಆಸ್ಟ್ರೇಲಿಯಾ ತಂಡ ಮೂರನೇ ಟಿ20ಐ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಮೂರು ಪಂದ್ಯಗಳ ಟಿ20ಐ ಸರಣಿಯನ್ನು 3-0 ಅಂತದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿದೆ.

ವೆಸ್ಟ್‌ ಇಂಡೀಸ್‌ ವಿರುದ್ಧ ದಾಖಲೆಯ ಶತಕ ಬಾರಿಸಿದ ಟಿಮ್‌ ಡೇವಿಡ್‌.

ಸೇಂಟ್‌ ಕಿಟ್ಸ್‌: ಇಲ್ಲಿನ ವಾರ್ನರ್‌ ಪಾರ್ಕ್‌ನಲ್ಲಿ ನಡೆದಿದ್ದ ಹೈಸ್ಕೋರಿಂಗ್‌ ಪಂದ್ಯದಲ್ಲಿ(AUS vs WI) ಟಿಮ್‌ ಡೇವಿಡ್‌ (Tim David) ಅವರ ಸ್ಪೋಟಕ ಶತಕದ ಬಲದಿಂದ ಆಸ್ಟ್ರೇಲಿಯಾ ತಂಡ, ಎದುರಾಳಿ ವೆಸ್ಟ್‌ ಇಂಡೀಸ್‌ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಪ್ರವಾಸಿ ಆಸ್ಟ್ರೇಲಿಯಾ ತಂಡ ಮೂರು ಪಂದ್ಯಗಳ ಟಿ20ಐ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿದೆ. ಅಂದ ಹಾಗೆ ಶೇಯ್‌ ಹೋಪ್‌ (Shai Hope) ಅವರ ಶತಕದ ಹೊರತಾಗಿಯೂ ಆತಿಥೇಯ ವೆಸ್ಟ್‌ ಇಂಡೀಸ್‌ ತಂಡ ಬೌಲಿಂಗ್‌ ವೈಫಲ್ಯದಿಂದ ಮೂರನೇ ಪಂದ್ಯದಲ್ಲಿ ಸೋಲು ಒಪ್ಪಿಕೊಂಡಿತು. ಅಲ್ಲದೆ ಈ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ವಿಫಲವಾಯಿತು.

ಈ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ನೀಡಿದ್ದ 215 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಮಿಚೆಲ್‌ ಮಾರ್ಷ್‌ (22) ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ (20) ಅವರು ಉತ್ತಮ ಆರಂಭ ಪಡೆದರೂ ಇದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ವಿಫಲರಾದರು. ಜಾಶ್‌ ಇಂಗ್ಲಿಸ್‌ (15) ಹಾಗೂ ಕ್ಯಾಮೆರಾನ್‌ ಗ್ರೀನ್‌ (11) ಅವರನ್ನು ರೊಮ್ಯಾರಿಯೊ ಶೆಫರ್ಡ್‌ ಔಟ್‌ ಮಾಡಿ ಆಸ್ಟ್ರೇಲಿಯಾಗೆ ಆರಂಭಿಕ ಆಘಾತ ನೀಡಿದರು. ಈ ವೇಳೆ ಆಸ್ಟ್ರೇಲಿಯಾ ತಂಡ 87ಕ್ಕೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

IND vs ENG 4th Test: ಜೋ ರೂಟ್‌ ಶತಕ, ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಇಂಗ್ಲೆಂಡ್‌!

ಟಿಮ್‌ ಡೇವಿಡ್‌ ದಾಖಲೆಯ ಶತಕ

ಐದನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಟಿಮ್‌ ಡೇವಿಡ್‌ ವೆಸ್ಟ್‌ ಇಂಡೀಸ್‌ ಬೌಲರ್‌ಗಳನ್ನು ಸೆದೆ ಬಡಿದರು. ಸ್ಪೋಟಕ ಬ್ಯಾಟ್‌ ಮಾಡಿದ ಟಿಮ್‌ ಡೇವಿಡ್‌, ಕೇವಲ 37 ಎಸೆತಗಳಲ್ಲಿ ಬರೋಬ್ಬರಿ 11 ಸಿಕ್ಸರ್‌ ಹಾಗೂ 6 ಬೌಂಡರಿಗಳೊ೦ದಿಗೆ ಅಜೇಯ 102 ರನ್‌ಗಳನ್ನು ಸಿಡಿಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ ಶತಕ ಸಿಡಿಸಿದ ಆಸ್ಟ್ರೇಲಿಯಾದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಅಲ್ಲದೆ ಮಿಚೆಲ್‌ ಒವೆನ್‌ ಅವರ ಜೊತೆ ಐದನೇ ವಿಕೆಟ್‌ಗೆ ಡೇವಿಡ್‌ 128 ರನ್‌ಗಳನ್ನು ಕಲೆ ಹಾಕಿದರು. ಡೇವಿಡ್‌ ಅವರ ಜೊತೆ ಮತ್ತೊಂದು ತುದಿಯಲ್ಲಿ ಸಾಥ್‌ ನೀಡಿದ್ದ ಮಿಚೆಲ್‌ ಒವೆನ್‌ ಕೇವಲ 16 ಎಸೆತಗಳಲ್ಲಿ 36 ರನ್‌ ಸಿಡಿಸಿದರು. ಈ ಇಬ್ಬರ ಸ್ಪೋಟಕ ಬ್ಯಾಟಿಂಗ್‌ ಬಲದಿಂದ ಆಸ್ಟ್ರೇಲಿಯಾ ತಂಡ ಕೇವಲ 16.1 ಓವರ್‌ಗಳಿಗೆ 215 ರನ್‌ ಗಳಿಸಿ ಗೆಲುವಿನ ದಡ ಸೇರಿತು.



ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ವೆಸ್ಟ್‌ ಇಂಡೀಸ್‌ ತಂಡ, ಶೇಯ್‌ ಹೋಪ್‌ (102) ಶತಕ ಹಾಗೂ ಬ್ರೆಂಡನ್‌ ಕಿಂಗ್‌ (62) ಅವರ ಅರ್ದಶತಕದ ತನ್ನ ಪಾಲಿನ 20 ಓವರ್‌ಗಳಿಗೆ 4 ವಿಕೆಟ್‌ಗಳ ನಷ್ಟಕ್ಕೆ 214 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 215 ರನ್‌ಗಳ ಗುರಿಯನ್ನು ನೀಡಿತು.

ವಿಂಡೀಸ್‌ಗೆ ಭರ್ಜರಿ ಆರಂಭ

ವಿಂಡೀಸ್‌ ಪರ ಇನಿಂಗ್ಸ್‌ ಆರಂಭಿಸಿದ ಬ್ರೆಂಡನ್‌ ಕಿಂಗ್‌ ಹಾಗೂ ಶೇಯ್‌ ಹೋಪ್‌ ಅವರು ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರು. ಈ ಇಬ್ಬರೂ ಮೊದಲನೇ ವಿಕೆಟ್‌ಗೆ 125 ರನ್‌ಗಳನ್ನು ಕಲೆ ಹಾಕಿದ್ದರು. ಆ ಮೂಲಕ ವೆಸ್ಟ್‌ ಇಂಡೀಸ್‌ಗೆ ಭರ್ಜರಿ ಆರಂಭವನ್ನು ತಂದುಕೊಟ್ಟಿದ್ದರು. ಸ್ಪೋಟಕ ಬ್ಯಾಟ್‌ ಮಾಡಿದ್ದ ಬ್ರೆಂಡನ್‌ ಕಿಂಗ್‌, ಕೇವಲ 36 ಎಸೆತಗಳಲ್ಲಿ 62 ರನ್‌ ಚಚ್ಚಿದ್ದರು.

IND vs ENG: ರಾಹುಲ್‌ ದ್ರಾವಿಡ್‌ ಬೆನ್ನಲ್ಲೆ ರಿಕಿ ಪಾಂಟಿಂಗ್‌ ದಾಖಲೆ ಮುರಿದ ಜೋ ರೂಟ್‌!

ಶೇಯ್‌ ಹೋಪ್‌ ಭರ್ಜರಿ ಶತಕ

ಆರಂಭದಿಂದಲೂ ಸ್ಪೋಟಕ ಬ್ಯಾಟ್‌ ಮಾಡಿದ್ದ ಶೇಯ್‌ ಹೋಪ್‌ ಆಸೀಸ್‌ ಬೌಲರ್‌ಗಳನ್ನು ದಂಡಿಸಿದರು. ಅವರು ಆಡಿದ 57 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 8 ಬೌಂಡರಿಗಳೊಂದಿಗೆ 102 ರನ್‌ಗಳನ್ನು ಸಿಡಿಸಿದರು. ಆ ಮೂಲಕ ತಮ್ಮ ಟಿ20ಐ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕವನ್ನು ಸಿಡಿಸಿದರು. ಆ ಮೂಲಕ ವೆಸ್ಟ್‌ ಇಂಡೀಸ್‌ ತಂಡದ ಮೊತ್ತ 200ರ ಗಡಿ ದಾಟಲು ನೆರವು ನೀಡಿದರು.