ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Heart Failure: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಇತ್ತೀಚೆಗೆ ದಿಡೀರ್‌ ಹೃದಯ ವೈಫಲ್ಯದಿಂದ ಆಗುತ್ತಿರುವ ಸಾವು ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆಯಾಗಿದೆ. ಚಾಮರಾಜನಗರದಲ್ಲಿ ಬೇಕರಿಯಲ್ಲಿ ಗ್ರಾಹಕರಿಗೆ ಸ್ವೀಟ್‌ ಕಟ್ಟಿ ಕೊಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೇರಳ ಮೂಲದ ವೇಣುಗೋಪಾಲ್​(56) ಎಂದು ಗುರುತಿಸಲಾಗಿದೆ.

ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಬೇಕರಿಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

ಹರೀಶ್‌ ಕೇರ ಹರೀಶ್‌ ಕೇರ Feb 15, 2025 8:15 AM

ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹೃದಯಾಘಾತವಾಗಿ (Heart Failure) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ (Chamarajanagara news) ವರದಿಯಾಗಿದೆ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್​ ಹೃದಯಾಘಾತ (heart attack) ಉಂಟಾಗಿರುವ ಘಟನೆ ಚಾಮರಾಜನಗರದ ಕೇಕ್ ವರ್ಲ್ಡ್‌ ಬೇಕರಿಯಲ್ಲಿ ನಡೆದಿದೆ.

ಗ್ರಾಹಕರಿಗೆ ಸ್ವೀಟ್ಸ್​ ಪಾರ್ಸಲ್ ​ಮಾಡುವ ವೇಳೆ ಹೃದಯಾಘಾತ ಉಂಟಾಗಿ ವ್ಯಕ್ತಿ ಸ್ಥಳದಲ್ಲೇ ಕುಸಿದಿದ್ದಾರೆ. ಮೃತ ವ್ಯಕ್ತಿಯನ್ನು ಕೇರಳ ಮೂಲದ ವೇಣುಗೋಪಾಲ್​(56) ಎಂದು ಗುರುತಿಸಲಾಗಿದೆ. ವೇಣುಗೋಪಾಲ್ ಕಳೆದ 5 ವರ್ಷದಿಂದ ಈ ಕೇಕ್​ವಲ್ಡ್​​ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಬೇಕರಿಯಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತಕ್ಕೀಡಾಗಿ ಕುಸಿದು ಸಾವನ್ನಪ್ಪಿದ್ದಾರೆ.

ಫೆಬ್ರವರಿ 12ರ ಸಂಜೆ 7.30ರ ಸುಮಾರಿಗೆ ಗ್ರಾಹಕರಿಗೆ ಸ್ವೀಟ್ ಪಾರ್ಸಲ್ ಮಾಡಿ ಕೊಡುವಾಗ ವೇಣುಗೋಪಾಲ್ ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರಿಶೀಲನೆ ನಡೆಸಿ, ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: Drowned: ಜಲಪಾತದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು