ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Balaramana Dinagalu Movie: ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 'ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ

Balaramana Dinagalu Movie: ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ʼಬಲರಾಮನ ದಿನಗಳುʼ ಚಿತ್ರದ ಶೂಟಿಂಗ್‌ ಮೈಸೂರಿನಲ್ಲಿ ಬಿರುಸಿನ ನಡೆಯುತ್ತಿದ್ದು, ಬಹುನಿರೀಕ್ಷಿತ ಈ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ ಅಭಿನಯಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಅತುಲ್ ಕುಲಕರ್ಣಿ, ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿದ್ದಾರೆ.

Balaramana Dinagalu Movie: ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 'ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ

ಬಹುಭಾಷಾ ನಟ ಅತುಲ್ ಕುಲಕರ್ಣಿ -

Profile
Siddalinga Swamy Jan 15, 2025 8:15 PM

ಬೆಂಗಳೂರು, ಜ. 15, 2025: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ ʼಆ ದಿನಗಳುʼ ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ʼಬಲರಾಮನ ದಿನಗಳುʼ ಚಿತ್ರ (Balaramana Dinagalu Movie)ಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬಹುನಿರೀಕ್ಷಿತ ಈ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ ಅಭಿನಯಿಸುತ್ತಿದ್ದಾರೆ.

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಮರಾಠಿ ಹಾಗೂ ಇಂಗ್ಲಿಷ್‌ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿರುವ ಅತುಲ್ ಕುಲಕರ್ಣಿ ಅವರು ʼಬಲರಾಮನ ದಿನಗಳುʼ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅತುಲ್ ಕುಲಕರ್ಣಿ ಅವರಿಗೆ ಸ್ವಾಗತ ಕೋರಿದೆ.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ʼಬಲರಾಮನ ದಿನಗಳುʼ ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | KUWJ awards: ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ; ಯಾರಿಗೆ ಯಾವ ಪ್ರಶಸ್ತಿ?

ʼಬಲರಾಮನ ದಿನಗಳುʼ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿದೆ. ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ನೀಡುತ್ತರುವ 50ನೇ ಹಾಗೂ ಕನ್ನಡದಲ್ಲಿ ಮೊದಲ ಚಿತ್ರ ಇದಾಗಿದೆ.