ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bandekavi Movie: ಪುನರ್ಜನ್ಮದ ಕಥೆ ಹೇಳಲು ʼಬಂಡೆಕವಿʼ ಆಗಮನ; ಫೆಬ್ರವರಿಯಿಂದ ಚಿತ್ರೀಕರಣ ಆರಂಭ

Bandekavi Movie: ಮೋಹನ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ʼಬಂಡೆಕವಿʼ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಇದೊಂದು ಪುನರ್ಜನ್ಮದ ಕಥೆಯಾಗಿದ್ದು, ಸಸ್ಪೆನ್ಸ್, ಥ್ರಿಲ್ಲಿಂಗ್ ಲವ್ ಸ್ಟೋರಿ ಕೂಡ ಇದೆ‌. ಈ ಕುರಿತ ವಿವರ ಇಲ್ಲಿದೆ.

Bandekavi Movie: ಪುನರ್ಜನ್ಮದ ಕಥೆ ಹೇಳಲು ʼಬಂಡೆಕವಿʼ ಆಗಮನ; ಫೆಬ್ರವರಿಯಿಂದ ಚಿತ್ರೀಕರಣ ಆರಂಭ

ʼಬಂಡೆಕವಿʼ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು.

Profile Siddalinga Swamy Jan 17, 2025 10:41 PM

ಬೆಂಗಳೂರು, ಜ. 17, 2025: ವರಮಹಾಲಕ್ಷ್ಮೀ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಸಿ.ಜಿ. ಗಂಗರಾಜು ದಿಬ್ಬೂರು ಹಾಗೂ ಮೇಕೆ ಶಿವು ನಿರ್ಮಿಸುತ್ತಿರುವ, ಶ್ರೀರಜನಿ ಪರಿಸರ ಪ್ರೇಮಿ ನಿರ್ದೇಶನದ ಹಾಗೂ ಮೋಹನ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ʼಬಂಡೆಕವಿʼ ಚಿತ್ರದ (Bandekavi movie) ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮೀ ಲೇಔಟ್‌ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ವರಮಹಾಲಕ್ಷ್ಮೀ ಅವರು ಆರಂಭ ಫಲಕ ತೋರಿದರು. ರವಿಶಂಕರ್ ರೆಡ್ಡಿ ಆರ್. ಅವರು ಕ್ಯಾಮರಾ ಚಾಲನೆ ಮಾಡಿ ಶುಭ ಹಾರೈಸಿದರು. ನಾಗೇಂದ್ರ ಅರಸ್ ಸೇರಿದಂತೆ ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಹಿಂದೆ ʼನವ ಇತಿಹಾಸʼ, ʼಗುಳ್ಳೆ ನರಿʼ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀರಜನಿ ಪರಿಸರಪ್ರೇಮಿ ಅವರ ಮೂರನೇ ನಿರ್ದೇಶನದ ಚಿತ್ರ ಇದಾಗಿದೆ. ಇದೊಂದು ಪುನರ್ಜನ್ಮದ ಕಥೆಯಾಗಿದ್ದು, ಸಸ್ಪೆನ್ಸ್, ಥ್ರಿಲ್ಲಿಂಗ್ ಲವ್ ಸ್ಟೋರಿ ಕೂಡ ಇದೆ‌. ಈ ಹಿಂದೆ ʼಅಡವಿʼ ಚಿತ್ರದಲ್ಲಿ ನಟಿಸಿದ್ದ ಮೋಹನ್ ಕುಮಾರ್ ಅವರಿಗೆ ನಾಯಕನಾಗಿ ಇದು ಎರಡನೇ ಚಿತ್ರ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ಪ್ರಗತಿಯಲ್ಲಿದೆ. ಅನೇಕ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದೆಂದು ನಿರ್ದೇಶಕರು ತಿಳಿಸಿದ್ದಾರೆ.

ಫೆಬ್ರವರಿಯಿಂದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು, ತುಮಕೂರು, ರಾಮನಗರ ಹಾಗೂ ಚಾಮರಾಜನಗರದಲ್ಲಿ ಚಿತ್ರೀಕರಣ ನಡೆಯಲಿದೆ.

ಈ ಸುದ್ದಿಯನ್ನೂ ಓದಿ | Reliance: ಡಿಸೆಂಬರ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ಗೆ ದಾಖಲೆಯ 21,930 ಕೋಟಿ ರೂ. ಲಾಭ!

ಹರ್ಷ ಕಾಗೋಡು ಸಂಗೀತ ನಿರ್ದೇಶನ, ಸಂದೀಪ್ ಹೊನ್ನಳ್ಳಿ ಛಾಯಾಗ್ರಹಣ ಹಾಗೂ ಸುನಯ್ ಜೈನ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಸಮರ್ಥ್ ಎಂ. ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.