ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಭಾರತ ತಂಡದಲ್ಲಿ ಶ್ರೇಯಸ್‌ ಅಯ್ಯರ್‌ಗೆ ಸ್ಥಾನ ನೀಡಬೇಕೆಂದ ಆಕಾಶ್‌ ಚೋಪ್ರಾ!

ಮುಂಬರುವ 2025ರ ಏಷ್ಯಾ ಕಪ್‌ ಟೂರ್ನಿಯ ಭಾರತ ತಂಡದಲ್ಲಿ ಶ್ರೇಯಸ್‌ ಅಯ್ಯರ್‌ ಅವರಿಗೆ ಅವಕಾಶ ನೀಡಬೇಕೆಂದು ಟೀಮ್‌ ಇಂಡಿಯಾ ಮಾಜಿ ಆರಂಭಿಕ ಆಕಾಶ್‌ ಚೋಪ್ರಾ ಸಲಹೆ ನೀಡಿದ್ದಾರೆ. 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿನ ಪ್ರದರ್ಶನವನ್ನು ಪರಿಗಣಿಸಿ ಅಯ್ಯರ್‌ಗೆ ತಂಡದಲ್ಲಿ ಸ್ಥಾನವನ್ನು ನೀಡಬೇಕೆಂದು ಚೋಪ್ರಾ ಆಗ್ರಹಿಸಿದ್ದಾರೆ.

ಶ್ರೇಯಸ್‌ ಅಯ್ಯರ್‌ ಪರ ಬ್ಯಾಟ್‌ ಬೀಸಿದ ಆಕಾಶ್‌ ಚೋಪ್ರಾ.

ನವದೆಹಲಿ: ಮುಂಬರುವ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿಯ ಭಾರತ ತಂಡದಲ್ಲಿ ಶ್ರೇಯಸ್‌ ಅಯ್ಯರ್‌ (Shreyas Iyer) ಆಡಲಿದ್ದಾರೆಂದು ಟೀಮ್‌ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಕ್ರಿಕೆಟ್‌ ಕಾಮೆಂಟೇಟರ್‌ ಆಕಾಶ್‌ ಚೋಪ್ರಾ (Aakash Chopra) ಬಲವಾಗಿ ನಂಬಿದ್ದಾರೆ. ಏಕೆಂದರೆ ಕಳೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿಯೂ ಶ್ರೇಯಸ್‌ ಅಯ್ಯರ್‌ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದರು ಹಾಗೂ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ನೆರವು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶ್ರೇಯಸ್‌ ಅಯ್ಯರ್‌ಗೆ ಅವಕಾಶ ನೀಡಬೇಕೆಂದು ಚೋಪ್ರಾ ಹೇಳಿದ್ದಾರೆ.

ಏಷ್ಯಾ ಕಪ್‌ ಟೂರ್ನಿಯು ಸೆಪ್ಟಂಬರ್‌ 9 ರಂದು ಆರಂಭವಾಗಲಿದ್ದು, 28 ರಂದು ಮುಗಿಯಲಿದೆ. ಆಗಸ್ಟ್‌ 19 ರಂದು ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಗಸ್ಟ್‌ 19 ರಂದು ಭಾರತ ತಂಡವನ್ನು ಪ್ರಕಟಿಸಲಿದೆ. ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಬಳಿಕ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿಯೂ ಮುಂದುವರಿಸಿದ್ದರು. ಆ ಮೂಲಕ ಪಂಜಾಬ್‌ ಕಿಂಗ್ಸ್‌ ತಂಡವನ್ನು ಫೈನಲ್‌ಗೆ ಕರೆದೊಯ್ದಿದ್ದರು. ಆ ಮೂಲಕ ಇದೀಗ ಏಷ್ಯಾ ಕಪ್‌ ಭಾರತ ತಂಡದ ಆಯ್ಕೆಯ ರೇಸ್‌ನಲ್ಲಿದ್ದಾರೆ.

Asia Cup ಭಾರತ ತಂಡದಲ್ಲಿ 14ರ ವಯಸ್ಸಿನ ಬಾಲಕನಿಗೆ ಅವಕಾಶ ನೀಡಬೇಕೆಂದ ಕೆ ಶ್ರೀಕಾಂತ್!

ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿದ ವಿಡಿಯೊದಲ್ಲಿ ಮಾತನಾಡಿದ ಆಕಾಶ್‌ ಚೋಪ್ರಾ, "ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರು. ಈ ಕಾರಣದಿಂದಾಗಿ ಶ್ರೇಯಸ್‌ ಅಯ್ಯರ್‌ ಅವರ ಜತೆಗೆ ಆಯ್ಕೆದಾರರು ಮಾತನಾಡಬೇಕಾದ ಅಗತ್ಯವಿದೆ. ಎದುರಾಳಿ ತಂಡದ ವಿರುದ್ಧ ಆಕ್ರಮಣಕಾರಿಯಾಗಿ ಬ್ಯಾಟ್‌ ಮಾಡಬಲ್ಲ ಆಟಗಾರ ಅಯ್ಯರ್‌. ಅವರ ಬೇಕೆಂದಾಗ ಬೌಂಡರಿ ಬಾರಿಸಬಲ್ಲ ಆಟಗಾರ ಹಾಗೂ ಮತ್ತೊಂದು ಕ್ರಮಾಂಕದ ಬ್ಯಾಟ್ಸ್‌ಮನ್‌ ಮೇಲಿನ ಒತ್ತಡವನ್ನು ಕಡಿಮೆ ಮಾಡಬಲ್ಲರು," ಎಂದು ತಿಳಿಸಿದ್ದಾರೆ.

2025ರ ಐಪಿಎಲ್‌ ಟೂರ್ನಿಯಲ್ಲಿನ ಫಾರ್ಮ್‌ ಬಗ್ಗೆಯೂ ಆಕಾಶ್ ಚೋಪ್ರಾ ಉಲ್ಲೇಖಿಸಿದ್ದಾರೆ. ಇವರ ನಾಯಕತ್ವದ ಪಂಜಾಬ್‌ ಕಿಂಗ್ಸ್‌ ರನ್ನರ್‌ ಅಪ್‌ ಆಗಿತ್ತು. 2014ರ ಬಳಿಕ ಇದೇ ಮೊದಲ ಬಾರಿ ಪಂಜಾಬ್‌ ಫೈನಲ್‌ಗೆ ಪ್ರವೇಶ ಮಾಡಿತ್ತು. ಶ್ರೇಯಸ್‌ ಅಯ್ಯರ್‌ ಅವರು ನಾಯಕತ್ವದ ಜೊತೆಗೆ ಆಟಗಾರನಾಗಿಯೂ ಉತ್ತಮ ಪ್ರದರ್ಶನವನ್ನು ತೋರಿದ್ದರು. ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಅವರು ಅಜೇಯ 87 ರನ್‌ಗಳನ್ನು ಬಾರಿಸಿದ್ದರು.

Asia Cup squad: ಏಷ್ಯಾಕಪ್‌ಗೆ ಭಾರತ ಪ್ಲೇಯಿಂಗ್ ಇಲೆವೆನ್ ಅಂತಿಮ; ಹೀಗಿದೆ ತಂಡ

"ಐಪಿಎಲ್‌ ಟೂರ್ನಿಯಿಂದ ಬಂದ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ಮೇಲೆ ಹೆಚ್ಚಿನ ಒತ್ತಡವಿತ್ತು. ಇದು ಶ್ರೇಯಸ್‌ ಅಯ್ಯರ್‌ ಅವರ ಶ್ರೇಷ್ಠ ಐಪಿಎಲ್‌ ಸೀಸನ್‌ ಆಗಿದೆ. ಐಪಿಎಲ್‌ ಪ್ರದರ್ಶನದ ಆಧಾರದ ಮೇಲೆ ಟಿ20ಐ ತಂಡವನ್ನು ಆಯ್ಕೆ ಮಾಡುವುದನ್ನು ನಾವು ಈ ಹಿಂದೆ ನೋಡಿದ್ದೇವೆ. ನಾವು ವರುಣ್‌ ಚಕ್ರವರ್ತಿ, ರಿಂಕು ಸಿಂಗ್‌, ಹರ್ಷಿತ್‌ ರಾಣಾ, ಅಭಿಷೇಕ್‌ ಶರ್ಮಾ, ಸಂಜು ಸ್ಯಾಮ್ಸನ್‌ ಹಾಗೂ ಎಲ್ಲರನ್ನೂ ವೀಕ್ಷಿಸಿದ್ದೇವೆ. ಇದನ್ನು ಗಮನಿಸಿದರೆ, ಶ್ರೇಯಸ್‌ ಅಯ್ಯರ್‌ ಟಿ20ಐ ತಂಡಕ್ಕೆ ಆಯ್ಕೆಯಾಗಲು ಅರ್ಹರು," ಎಂದು ಆಕಾಶ್‌ ಚೋಪ್ರಾ ತಿಳಿಸಿದ್ದಾರೆ.

ಶ್ರೇಯಸ್‌ ಅಯ್ಯರ್‌ ಅವರು 47 ಟಿ20ಐ ಪಂದ್ಯಗಳಿಂದ 136.12ರ ಸ್ಟ್ರೈಕ್‌ ರೇಟ್‌ನಲ್ಲಿ 1104 ರನ್‌ಗಳನ್ನು ಬಾರಿಸಿದ್ದಾರೆ. ಭಾರತ ತಂಡದಲ್ಲಿನ ಸಕ್ರಿಯ ಆಟಗಾರರ ಪೈಕಿ ಅತಿ ಹೆಚ್ಚು ರನ್‌ ಗಳಿಸಿದ ಐದನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.