ಬೆಂಗಳೂರು: ಬೃಹತ್ ಬೆಂಗಳೂರು (Bengaluru) ಮಹಾನಗರ ಪಾಲಿಕೆಯ (bbmp budget) 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 29ರಂದು ಮಂಡಿಸಲಾಗುತ್ತಿದೆ. ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್ ಮಾರ್ಚ್ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ. ಪಾಲಿಕೆಯ ಆಡಳಿತಗಾರ ಎಸ್.ಆರ್.ಉಮಾಶಂಕರ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಬಜೆಟ್ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ ಹರೀಶ್‌ಕುಮಾರ್ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ.
ಸುಮಾರು ₹19 ಸಾವಿರ ಕೋಟಿ ಬಜೆಟ್ ಮಂಡಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಬಿಬಿಎಂಪಿಯ ಅಧಿಕಾರಿಗಳು ಈಗಾಗಲೇ ಸರ್ಕಾರದ ₹7 ಸಾವಿರ ಕೋಟಿ ಅನುದಾನ ನಿರೀಕ್ಷೆ ಇಟ್ಟುಕೊಂಡು ಬಜೆಟ್ ಮಂಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸೋಮವಾರ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಶಾಸಕರ ಸಭೆ ನಡೆಸಲಾದ ಬಳಿಕ ಬಜೆಟ್‌ನಲ್ಲಿ ಸಾಕಷ್ಟು ಬದಲಾವಣೆಗೆ ಸೂಚಿಸಲಾಗಿದೆ. ಬಜೆಟ್ ಪ್ರಸ್ತುತಿಯು ಯೂಟ್ಯೂಬ್‌ನಲ್ಲಿ ಲೈವ್ ಬರಲಿದ್ದು, https://youtube.com/live/eydr2vyROL8… ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ.
ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್ ಮಾರ್ಚ್ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ.
— DIPR Karnataka (@KarnatakaVarthe) March 27, 2025
ಪಾಲಿಕೆಯ ಆಡಳಿತಗಾರ ಎಸ್.ಆರ್. ಉಮಾಶಂಕರ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಬಜೆಟ್ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ… pic.twitter.com/2NyM4UVQE5
ಕಳೆದ 2024-25ನೇ ಸಾಲಿನಲ್ಲಿ ಬಿಬಿಎಂಪಿಯು ₹12,369 ಕೋಟಿ ಗಾತ್ರದ ಬಜೆಟ್ ಮಂಡಿಸಲಾಗಿತ್ತು. ಸರ್ಕಾರ ಅನುಮೋದನೆ ವೇಳೆ ಹೆಚ್ಚುವರಿ ₹745 ಕೋಟಿ ನೀಡುವ ಭರವಸೆಯೊಂದಿಗೆ ₹13,114 ಕೋಟಿ ಗಾತ್ರಕ್ಕೆ ಹೆಚ್ಚಿಸಿ ಅನುಮೋದನೆ ನೀಡಿತ್ತು. ಸಾಮಾನ್ಯವಾಗಿ ಶೇ.5 ರಿಂದ 8ರಷ್ಟು ಬಜೆಟ್ ಗಾತ್ರ ವಾರ್ಷಿಕವಾಗಿ ಹೆಚ್ಚಿಸಲಾಗುತ್ತದೆ. ರಾಜ್ಯ ಸರ್ಕಾರ ಈ ಬಾರಿ ಹೆಚ್ಚುವರಿಯಾಗಿ ₹4 ಸಾವಿರ ಕೋಟಿ ಅನುದಾನ ನೀಡಿರುವುದರಿಂದ ಆಯವ್ಯಯ ಗಾತ್ರ ₹19 ಸಾವಿರ ಕೋಟಿ ಇರಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: milk price hike: ಗ್ರಾಹಕರಿಗೆ ಗಾಯದ ಮೇಲೆ ಬರೆ; ನಂದಿನಿ ಹಾಲಿನ ನಂತರ ಕಾಫಿ ಟೀ ದರ ಏರಿಕೆ ಫಿಕ್ಸ್