BEL Recruitment 2025: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿದೆ 350 ಹುದ್ದೆ; ಹೀಗೆ ಅಪ್ಲೈ ಮಾಡಿ
BEL Recruitment 2025: ಭಾರತದ ಪ್ರಮುಖ ವಾಣಿಜ್ಯ ಎಲೆಕ್ಟ್ರಾನಿಕ್ಸ್ ಕಂಪನಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜ. 31.
Ramesh B
January 13, 2025
ಬೆಂಗಳೂರು: ಭಾರತದ ಪ್ರಮುಖ ವಾಣಿಜ್ಯ ಎಲೆಕ್ಟ್ರಾನಿಕ್ಸ್ ಕಂಪನಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (BEL Recruitment 2025). ಒಟ್ಟು 350 ಪ್ರೊಬೆಷನರಿ ಎಂಜಿನಿಯರ್ ಹುದ್ದೆ ಖಾಲಿ ಇದ್ದು, ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜ. 31 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಪ್ರೊಬೆಷನರಿ ಎಂಜಿನಿಯರ್ (ಎಲೆಕ್ಟ್ರಾನಿಕ್ಸ್) - 200 ಹುದ್ದೆ, ಪ್ರೊಬೆಷನರಿ ಎಂಜಿನಿಯರ್ (ಮೆಕ್ಯಾನಿಕಲ್) - 150 ಹುದ್ದೆಗಳಿವೆ. ಭಾರತದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಇಎಸ್‌ಎಂ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಇಡಬ್ಲ್ಯುಎಸ್ / ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿ ಅರ್ಜಿ ಶುಲ್ಕವಾಗಿ 1,180 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 40,000 ರೂ. - 1,40,000 ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರು, ಗಾಜಿಯಾಬಾದ್ (ಉತ್ತರ ಪ್ರದೇಶ), ಪುಣೆ, ನವಿ ಮುಂಬೈ (ಮಹಾರಾಷ್ಟ್ರ), ಹೈದರಾಬಾದ್ (ತೆಲಂಗಾಣ), ಚೆನ್ನೈ (ತಮಿಳುನಾಡು), ಮಚಿಲಿಪಟ್ಟನಂ (ಆಂಧ್ರ ಪ್ರದೇಶ), ಪಂಚಕುಲ (ಹರಿಯಾಣ) ಮತ್ತು ಕೊಟ್‌ದ್ವಾರ (ಉತ್ತರಖಂಡ)ದಲ್ಲಿ ನೇಮಿಸಲಾಗುತ್ತದೆ. ಮೊದಲಿಗೆ ಅಭ್ಯರ್ಥಿಗಳನ್ನು 6 ತಿಂಗಳಿಗೆ ನೇಮಕ ಮಾಡಲಾಗುತ್ತದೆ. ಬಳಿಕ 2 ವರ್ಷಗಳಿಗೆ ವಿಸ್ತರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
BEL Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ(https://test.cbexams.com/EDPSU/BEL/Apps/Registration/RegStep.aspx)
ಹೆಸರು ನೋಂದಾಯಿಸಿ.
ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ ವಿಳಾಸ: bel-india.inಗೆ ಭೇಟಿ ನೀಡಿ ಅಥವಾ ಟೋಲ್-ಫ್ರೀ ನಂಬರ್ +919741729267ಕ್ಕೆ ಕರೆ ಮಾಡಿ.
ಈ ಸುದ್ದಿಯನ್ನೂ ಓದಿ: Job Guide: ಇಂಡಿಯನ್ ಮರ್ಚೆಂಟ್ ನೇವಿಯಲ್ಲಿದೆ 1,800 ಹುದ್ದೆ; 10, 12ನೇ ತರಗತಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಿ