ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Bengaluru Chennai Expressway: ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ, 4 ಗಂಟೆಯಲ್ಲಿ ಬೆಂಗಳೂರಿನಿಂದ ಚೆನ್ನೈಗೆ

ಇದು ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಮೂಲಕ ಹಾದುಹೋಗುವ ನಾಲ್ಕು-ಲೇನ್ ಪ್ರವೇಶ-ನಿಯಂತ್ರಿತ ಎಕ್ಸ್‌ಪ್ರೆಸ್‌ವೇ. ಈ ಹೆದ್ದಾರಿಯು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಮಿಸುತ್ತಿರುವ 26 ಹೊಸ ಹಸಿರು ಎಕ್ಸ್‌ಪ್ರೆಸ್‌ವೇಗಳಲ್ಲಿ ಒಂದು. ಇದರ ಒಟ್ಟಾರೆ 262 ಕಿಲೋಮೀಟರ್‌ಗಳಲ್ಲಿ 85 ಕಿಮೀ ತಮಿಳುನಾಡಿನಲ್ಲಿ, 71 ಕಿಮೀ ಆಂಧ್ರಪ್ರದೇಶದಲ್ಲಿ ಮತ್ತು 106 ಕಿಮೀ ಕರ್ನಾಟಕದಲ್ಲಿ ಬರುತ್ತದೆ.

4 ಗಂಟೆ ಸಾಕು! ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ವೇ

ಹರೀಶ್‌ ಕೇರ ಹರೀಶ್‌ ಕೇರ Feb 26, 2025 7:37 AM

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ (bengaluru chennai expressway) ಸಂಚಾರಕ್ಕೆ ಮುಕ್ತವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ (toll) ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕರ್ನಾಟಕ (Karnataka) ಭಾಗದ ಮಾರ್ಗದ ಕೆಲಸಗಳು ಸಂಪೂರ್ಣವಾಗಿದ್ದು, ಸಂಚಾರಕ್ಕೆ ಮುಕ್ತವಾಗಿದೆ.

ಮೂರು ರಾಜ್ಯಗಳನ್ನು ಒಳಗೊಂಡ ಎಕ್ಸ್‌ಪ್ರೆಸ್‌ ವೇ ಮಾರ್ಗವಿದು. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ರಾಜ್ಯ ಭಾಗದ 71 ಕಿಲೋಮೀಟರ್‌ನ ಸಂಪೂರ್ಣ ಕಾರ್ಯ ಮುಕ್ತಾಯವಾಗಿದೆ. ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಚೆನ್ನೈವರೆಗೆ 280 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇ ಇದಾಗಿದ್ದು, ಸದ್ಯ ಹೊಸಕೋಟೆ ಸ್ಯಾಟ್‌ಲೈಟ್ ರಿಂಗ್ ರಸ್ತೆಯಿಂದ ಆಂಧ್ರ ಗಡಿ ಸುಂದರಪಾಳ್ಯವರೆಗೆ ಸಂಚಾರಕ್ಕೆ ರಸ್ತೆ ರೆಡಿಯಾಗಿದೆ. ವೇಗದ ಮಿತಿ 100 ಕಿ.ಮೀಗೆ ಸೀಮಿತಗೊಳಿಸಲಾಗಿದೆ.

ಆಂಧ್ರಪ್ರದೇಶ, ತಮಿಳುನಾಡು ಭಾಗದಲ್ಲಿ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿ ಇನ್ನೂ ಮುಂದುವರೆದಿದೆ. ಈ ವರ್ಷಾಂತ್ಯಕ್ಕೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇ ಸಂಚಾರಕ್ಕೆ ಸಂಪೂರ್ಣ ಮುಕ್ತವಾಗುವ ಸಾಧ್ಯತೆ ಇದೆ. ಈ ಎಕ್ಸ್‌ಪ್ರೆಸ್‌ ವೇಗೆ ಕರ್ನಾಟಕದಲ್ಲಿ ಮಾಲೂರು, ಬಂಗಾರಪೇಟೆ ಮತ್ತು ಆಂಧ್ರ ಗಡಿ ಸುಂದರ ಪಾಳ್ಯದಲ್ಲಿ ಮೂರು ಇಂಟರ್ ಚೇಂಜ್‌ಗಳಿವೆ. ಸಂಪೂರ್ಣ ಕಾಮಗಾರಿ‌ ಮುಕ್ತಾಯದ ಬಳಿಕ ಟೋಲ್ ಸಂಗ್ರಹ ಆರಂಭವಾಗುವ ಸಾಧ್ಯತೆ ಇದೆ.

ಇನ್ನೂ ಸ್ಥಳೀಯರು ಓಡಾಟ ಮಾಡುತ್ತಿದ್ದು, ಸದ್ಯಕ್ಕೆ ಟೋಲ್ ದರ ನಿಗದಿಪಡಿಸಿಲ್ಲ. ಸರ್ವೀಸ್ ರಸ್ತೆಗಳಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಸರ್ವೀಸ್ ರಸ್ತೆಗಳನ್ನು ನೀಡಿಲ್ಲ. ಯಾವುದೇ ಅಡಚಣೆಯಿಲ್ಲದೆ ಚೆನ್ನೈವರೆಗೆ ನೆಮ್ಮದಿಯಾಗಿ ಈ ರಸ್ತೆಯಲ್ಲಿ ಪ್ರಯಾಣಿಸಬಹುದು. ಮೂರ್ನಾಲ್ಕು ಗಂಟೆಗಳಲ್ಲಿ ಚೆನ್ನೈ ತಲುಪಬಹುದಾಗಿದೆ. ಹಾಗಾಗಿ ಬೇರೆ ಹೆದ್ದಾರಿಗಳಿಗೆ ಹೋಲಿಸಿದರೆ ಈ ರಸ್ತೆಯ ಟೋಲ್‌ ಶುಲ್ಕ ಕೂಡ ಅಧಿಕವಾಗಿರುವ ಸಾಧ್ಯತೆ ಹೆಚ್ಚಿದೆ.

ಎಕ್ಸ್‌ಪ್ರೆಸ್‌ವೇ ಕುರಿತು:

ಇದು ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಮೂಲಕ ಹಾದುಹೋಗುವ ನಾಲ್ಕು-ಲೇನ್ ಪ್ರವೇಶ-ನಿಯಂತ್ರಿತ ಎಕ್ಸ್‌ಪ್ರೆಸ್‌ವೇ. ಈ ಹೆದ್ದಾರಿಯು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಮಿಸುತ್ತಿರುವ 26 ಹೊಸ ಹಸಿರು ಎಕ್ಸ್‌ಪ್ರೆಸ್‌ವೇಗಳಲ್ಲಿ ಒಂದು. ಇದರ ಒಟ್ಟಾರೆ 262 ಕಿಲೋಮೀಟರ್‌ಗಳಲ್ಲಿ 85 ಕಿಮೀ ತಮಿಳುನಾಡಿನಲ್ಲಿ, 71 ಕಿಮೀ ಆಂಧ್ರಪ್ರದೇಶದಲ್ಲಿ ಮತ್ತು 106 ಕಿಮೀ ಕರ್ನಾಟಕದಲ್ಲಿ ಬರುತ್ತದೆ.

ಯೋಜನೆಯ ಅಂದಾಜು ವೆಚ್ಚ 16,700 ಕೋಟಿ. 2022ರ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೆ ಅಡಿಪಾಯ ಹಾಕಿದರು. ಈ ಹೈ-ಸ್ಪೀಡ್ ಕಾರಿಡಾರ್ ಎರಡೂ ಮೆಗಾಸಿಟಿಗಳ ಆರ್ಥಿಕ ಚಟುವಟಿಕೆಗಳನ್ನು ಮತ್ತು ಹೆದ್ದಾರಿಯ ಉದ್ದಕ್ಕೂ 3ನೇ ಹಂತದ ನಗರಗಳನ್ನು ಬಲಪಡಿಸಲಿದೆ. ಇದು ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಕೇಂದ್ರಗಳನ್ನು ಚೆನ್ನೈ ಬಂದರಿಗೆ ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿರುವ ನಗರಗಳಲ್ಲಿ ಕರ್ನಾಟಕದ ಹೊಸಕೋಟೆ, ಮಾಲೂರು, ಬಂಗಾರಪೇಟೆ, ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್), ಆಂಧ್ರದ ಪಲಮನೇರ್, ಚಿತ್ತೂರು ಮತ್ತು ತಮಿಳುನಾಡಿನ ರಾಣಿಪೇಟ್ ಬರುತ್ತವೆ.

ಇದನ್ನೂ ಓದಿ: Expressway: ಬೆಂಗಳೂರಿನ ಬನಶಂಕರಿಯಿಂದ ನೈಸ್‌ ರಸ್ತೆಗೆ 10 ಕಿಮೀ ಎಕ್ಸ್‌ಪ್ರೆಸ್‌ವೇ