ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ ವಿಕೃತನ ಬಂಧನ

Crime News: ಕಳೆದ ಮಂಗಳವಾರ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ- ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ತೆರಳಿದ್ದರು. ಇದನ್ನು ಗಮನಿಸಿದ ಕಾಮುಕ ಹಾಜ ಮೊಯಿನುದ್ದಿನ್ ಕಿಟಕಿ ಮೂಲಕ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ.

ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ ವಿಕೃತನ ಬಂಧನ

ಆರೋಪಿ ಹಾಜ ಮೊಯಿನುದ್ದಿನ್

ಹರೀಶ್‌ ಕೇರ ಹರೀಶ್‌ ಕೇರ Jul 12, 2025 10:15 AM

ಬೆಂಗಳೂರು: ಬೆಂಗಳೂರಿನಲ್ಲಿ (Bengaluru crime news) ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡುತ್ತಿದ್ದ (videotaping) ಮತ್ತೊಬ್ಬ ವಿಕೃತ ಕಾಮುಕನನ್ನು (Pervert) ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸರು ಹಾಜ ಮೊಯಿನುದ್ದಿನ್ ಎಂಬಾತನನ್ನು ಬಂಧಿಸಿದ್ದಾರೆ. ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್, ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ.

ಕಳೆದ ಮಂಗಳವಾರ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ- ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ತೆರಳಿದ್ದರು. ಇದನ್ನು ಗಮನಿಸಿದ ಕಾಮುಕ ಮೊಯಿನುದ್ದಿನ್ ಕಿಟಕಿ ಮೂಲಕ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ. ಈ ವೇಳೆ ಈತ ವಿಡಿಯೋ ಮಾಡುವುದನ್ನು ಮಗಳು ಗಮನಿಸಿದ್ದಾಳೆ. ಬಳಿಕ ಹೊರಗೆ ಬಂದು ತಂದೆಗೆ ಹೇಳಿದ್ದಾಳೆ. ತಂದೆ ಹೋಗಿ ನೋಡುವಷ್ಟರಲ್ಲಿ ಕಾಮುಕ ಅಲ್ಲಿಂದ ಎಸ್ಕೇಪ್‌ ಆಗಿದ್ದ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.

ಸಾಲ ತೀರಿಸಲು 20 ದಿನಗಳ ಮಗುವಿನ ಮಾರಾಟ

ದಾಂಡೇಲಿ: ರಾಜ್ಯದಲ್ಲಿ ಮತ್ತೊಂದು ಶಾಕಿಂಗ್‌ ಘಟನೆ (Shocking new) ಬೆಳಕಿಗೆ ಬಂದಿದ್ದು, ಸಾಲ ತೀರಿಸಲು ತಂದೆಯೇ 20 ದಿನದ ಮಗುವನ್ನು 3 ಲಕ್ಷ ರೂ.ಗೆ ಮಾರಾಟ (baby sale) ಮಾಡಿರುವ ಘಟನೆ ಉತ್ತರ ಕನ್ನಡ (Uttara kannada) ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಆನಗೋಳದ ನೂರ್ ಅಹಮದ್ ಅಬ್ದುಲ್ ಮಜೀದ್ ನಾಯ್ಕ, ಎಸ್.ವಿ.ರೋಡ್‌ನ ಚಾಲಕ ಕಿಶನ್ ಶ್ರೀಕಾಂತ ಐರೇಕರ್ ಬಂಧಿತರು.

ಹಳೇ ದಾಂಡೇಲಿ ಸಾಮಿಲ್ ರೋಡ್ ಮಾಹಿನ್ ವಸೀಂ ಎಂಬಾಕೆ ಜೂ.17 ರಂದು ಗಂಡು ಮಗುವಿಗೆ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದರು. ಆದರೆ, ಮಗುವನ್ನು ಜು.8ರಂದು ಆನಗೋಳದ ನೂರ್ ಅಹಮದ್ ಎಂಬವರಿಗೆ 3 ಲಕ್ಷ ರೂ.ಗೆ ಮಾರಾಟ ಮಾಡಿದ್ದರು ಎನ್ನಲಾಗಿದೆ. ಸದ್ಯ ಮಗುವನ್ನು ಶಿರಸಿಯ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆ. ದಂಪತಿ ನಾಪತ್ತೆಯಾಗಿದ್ದಾರೆ. ಕಾನೂನಿಗೆ ವಿರುದ್ಧವಾಗಿ ಮಗು ಖರೀದಿಸಿದ ವ್ಯಕ್ತಿ ಹಾಗೂ ಅದಕ್ಕೆ ಸಹಕರಿಸಿದ ಚಾಲಕನನ್ನು ದಾಂಡೇಲಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Assault Case: ಮೈಸೂರಿನಲ್ಲಿ ನಡುರಸ್ತೆಯಲ್ಲೇ ಕುಟುಂಬದ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ