ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Cabinet Meeting: ಬೆಂಗಳೂರು-ಹೈದರಾಬಾದ್ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ಸಚಿವ ಸಂಪುಟ ಅನುಮೋದನೆ

Bengaluru-Hyderabad high-speed rail corridor project: ಸುಸ್ಥಿರ ಪ್ರಯಾಣಿಕ ಸಾರಿಗೆ ವ್ಯವಸ್ಥೆ ಬಲಪಡಿಸುವ ಉದ್ದೇಶಿತ ಹೈದರಾಬಾದ್ - ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯ ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಬೆಂ-ಹೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ಸಚಿವ ಸಂಪುಟ ಅನುಮೋದನೆ

ಸಾಂದರ್ಭಿಕ ಚಿತ್ರ -

Prabhakara R
Prabhakara R May 1, 2026 4:32 PM

ಬೆಂಗಳೂರು: ಕೇಂದ್ರ ಸರಕಾರದ ಹೈದರಾಬಾದ್-ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ (Bengaluru-Hyderabad high-speed rail corridor) ಅನುಷ್ಠಾನಗೊಳಿಸಲು ರಾಜ್ಯ ಸರಕಾರ ತಾತ್ವಿಕ ಅನುಮೋದನೆ ನೀಡಿದೆ. ಇದರೊಂದಿಗೆ ಬೆಂಗಳೂರು ಸಮಗ್ರ ಉಪನಗರ ಯೋಜನೆ ಸಂಬಂಧ 18,133 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ದಕ್ಷಿಣದ ಎರಡು ಮಹಾನಗರಗಳನ್ನು ಒಗ್ಗೂಡಿಸಿ ಆರ್ಥಿಕ ಬೆಳವಣಿಗೆಗೆ ದೊಡ್ಡ ಮಟ್ಟದಲ್ಲಿ ಬೂಸ್ಟ್ ನೀಡುವ ಮಹತ್ವಾಕಾಂಕ್ಷೆಯ ಯೋಜನೆ ಅನುಷ್ಠಾನಗೊಳಿಸಲು ಸರಕಾರ ತಾತ್ವಿಕ ಅನುಮೋದನೆ ಕೊಟ್ಟಿದೆ.

ಕೇಂದ್ರ ಸರಕಾರ 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಬೆಂಗಳೂರಿಗೆ ಸಂಬಂಧಿಸಿದ ಹೈಸ್ಪೀಡ್ ರೈಲು ಕಾರಿಡಾರ್ ಕುರಿತು ಮಹತ್ವದ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರಕಾರ ಈ ಮಹತ್ವಾಕಾಂಕ್ಷೆಯ ಯೋಜನೆಗೆ ತಾತ್ವಿಕ ಅನುಮೋದನೆ ನೀಡಿದೆ. ಸುಮಾರು 607 ಕಿಮೀ ಉದ್ದದ ಹೈದರಾಬಾದ್-ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಕಾರಿಡಾ‌ರ್ ಭಾಗವಾಗಿ ರಾಜ್ಯದಲ್ಲಿ 15 ನಿಲ್ದಾಣಗಳು ಇರಲಿವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಮಾಹಿತಿ ನೀಡಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜ್ಯ ಸರಕಾರ ಬಂಪರ್ ಕೊಡುಗೆ ನೀಡಿದ್ದು, 600 ಕೋಟಿ ರುಪಾಯಿ ಮೊತ್ತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. 2026-27 ಮತ್ತು 2027-28ನೇ ಸಾಲಿಗೆ 600 ಕೋಟಿ ರುಪಾಯಿಗಳ ಕ್ರಿಯಾಯೋಜನೆ ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

Auto LPG price Hike: ವಾಣಿಜ್ಯ ಸಿಲಿಂಡರ್‌ ಬೆನ್ನಲ್ಲೇ ಆಟೋ ಎಲ್‌ಪಿಜಿ ದರ ಭಾರಿ ಹೆಚ್ಚಳ; ವಿದ್ಯುತ್‌ ಗ್ರಾಹಕರಿಗೂ ತಟ್ಟಿದ ಬೆಲೆ ಏರಿಕೆ ಬಿಸಿ!

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • ಕೆಎಸ್‌ಡಿಎಲ್‌ ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ಕೈಗಾರಿಕಾ ಪ್ರದೇಶದಲ್ಲಿ 50 ಎಕರೆ ಜಮೀನು ಖರೀದಿಸಲು ಮತ್ತು ಅಗತ್ಯ ಮೂಲಸೌಕರ್ಯದೊಂದಿಗೆ ಸೋಪು ಮತ್ತು ಮಾರ್ಜಕ ಉತ್ಪಾದನಾ ಘಟಕವನ್ನು ₹227.91 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಒಪ್ಪಿಗೆ
  • ನವಜಾತ ಶಿಶುಗಳಲ್ಲಿ ಅಪರೂಪದ ಜನ್ಮಜಾತ ಮತ್ತು ಚಯಾಪಚಯ ಅಸ್ವಸ್ಥತೆಗಳಿಗಾಗಿ ₹5.58 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ನವಜಾತ ಶಿಶು ತಪಾಸಣೆ ಯೋಜನೆ ಜಾರಿಗೆ ಸಮ್ಮತಿ
  • ನೋ೦ದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್‌ಗಳನ್ನು ₹115.84 ಕೋಟಿ ವೆಚ್ಚದಲ್ಲಿ ವಿತರಿಸಲು ತೀರ್ಮಾನ
  • ಸುಸ್ಥಿರ ಪ್ರಯಾಣಿಕ ಸಾರಿಗೆ ವ್ಯವಸ್ಥೆ ಬಲಪಡಿಸುವ ಉದ್ದೇಶಿತ ಹೈದರಾಬಾದ್ - ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ
  • ರಾಷ್ಟ್ರೀಯ ಉಚಿತ ಆರೋಗ್ಯ ಪತ್ತೆ ಕಾರ್ಯಕ್ರಮದಡಿ 6 ಜಿಲ್ಲಾಸ್ಪತ್ರೆಗಳಿಗೆ 6 ಎಂಆರ್‌ಐ ಯಂತ್ರಗಳನ್ನು ₹81 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
  • ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ₹73.75 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಒಪ್ಪಿಗೆ
  • ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ನಿರ್ಮಾಣದ ಹೆಚ್ಚುವರಿ ಕಾಮಗಾರಿಯನ್ನು ₹20 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ
  • ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಅಗತ್ಯವಿರುವ 80 ನಗರ ಸಾರಿಗೆ ಬಸ್‌ಗಳನ್ನು ₹32 ಕೋಟಿಗಳ ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
  • ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 2026-27 ಮತ್ತು 2027-28ನೇ ಸಾಲಿಗೆ ₹600 ಕೋಟಿಗಳ ಕ್ರಿಯಾ ಯೋಜನೆಯನ್ನು ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅನುಮೋದನೆ
  • ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ -ಉಪ್ಪಿನ೦ಗಡಿಯ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ₹13 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಕೆಲು ಆಡಳಿತಾತ 3ಕೋಟಿ ವೆಚ್ಚದಲ್ಲಿ ಕೈಗೊಳ್ಳಲ ಅನುಮೋದನೆ