Bengaluru Palace Ground: ಅರಮನೆ ಮೈದಾನ ಸ್ವಾಧೀನ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ
ಬೆಂಗಳೂರಿನ ಅರಮನೆ ಮೈದಾನ ಕುರಿತಂತೆ ಮೈಸೂರು ರಾಜ ಮನೆತನ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ನಡುವೆ ಕಾನೂನು ಸಮರ ದಶಕಗಳಿಂದ ನಡೆಯುತ್ತಿದೆ. ಇದರ ಸ್ವಾಮ್ಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯವಿದ್ದು, ಅಂತಿಮ ತೀರ್ಪು ಇನ್ನೂ ಬಂದಿಲ್ಲ.

ಬೆಂಗಳೂರು ಅರಮನೆ ಮೈದಾನ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನ (Bengaluru Palace Ground) ಪ್ರದೇಶದ 472 ಎಕರೆ 16 ಗುಂಟೆ ಜಮೀನು ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ʼಕ್ಕೆ ವಿಧಾನಸಭೆ (Vidhana sabha) ಹಾಗೂ ವಿಧಾನ ಪರಿಷತ್ತಿನಲ್ಲಿ (Vidhana Parishat) ನಿನ್ನೆ ಅಂಗೀಕಾರ ನೀಡಲಾಯಿತು. ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆಯೇ ವಿಧೇಯಕವನ್ನು ಮಂಡಿಸಿ ಅಂಗೀಕರಿಸಲಾಗಿದೆ.
ಬೆಂಗಳೂರಿನ ಅರಮನೆ ಮೈದಾನ ಕುರಿತಂತೆ ಮೈಸೂರು ರಾಜಮನೆತನ ಹಾಗೂ ರಾಜ್ಯ ಸರ್ಕಾರದ ನಡುವೆ ಕಾನೂನು ಸಮರ ದಶಕಗಳಿಂದ ನಡೆಯುತ್ತಿದೆ. ಇದರ ಸ್ವಾಮ್ಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯವಿದ್ದು, ಅಂತಿಮ ತೀರ್ಪು ಇನ್ನೂ ಬಂದಿಲ್ಲ. ಇದರ ನಡುವೆಯೇ, ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಮೈಸೂರು ರಾಜಮನೆತನದ ವಾರಸುದಾರರಿಗೆ 3 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ, ಅಷ್ಟು ದುಬಾರಿ ಮೌಲ್ಯದ ಟಿಡಿಆರ್ ನೀಡಲು ಜನವರಿ 24ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರಾಕರಿಸಲಾಗಿತ್ತು. ತದನಂತರ ಜನವರಿ 29 ರಂದು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು
ಬೆಂಗಳೂರು ಅರಮನೆ ಮೈದಾನಕ್ಕೆ ಟಿಡಿಆರ್ ನೀಡುವುದು ರಾಜ್ಯದ ಹಿತದೃಷ್ಟಿಗೆ ಸರಿಹೊಂದುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಬೆಂಗಳೂರು ಅರಮನೆ ಮೈದಾನದ 1217.41 ಚದರ ಮೀಟರ್ ಪ್ರದೇಶದಲ್ಲಿ 15.39 ಎಕರೆ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಬಳಸಲು ಉದ್ದೇಶಿಸಲಾಗಿದೆ.
ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ 1996 ರ ಅನುಸಾರವಾಗಿ ಸರ್ಕಾರವು ಹೊಂದಿರುವ ಭೂಮಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯ ಸೆಕ್ಷನ್ 14 ಬಿ ಅಡಿಯಲ್ಲಿ ಯಾವುದೇ ಟಿಡಿಆರ್ ಅನ್ವಯಿಸುವುದಿಲ್ಲ ಎಂದು ಅದು ಹೇಳಿದೆ.
ಇದನ್ನೂ ಓದಿ: Bangalore Palace Land Bill: ಬೆಂಗಳೂರು ಅರಮನೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ; ಗೆಜೆಟ್ ಅಧಿಸೂಚನೆ ಪ್ರಕಟ