ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬೈಕ್‌ ಅಪಘಾತ, ಹಬ್ಬಕ್ಕೆ ಬಟ್ಟೆ ಖರೀದಿಸಿ ಮರಳುತ್ತಿದ್ದ ಇಬ್ಬರು ಬಲಿ

ಇಬ್ಬರೂ ಬಿಇಎಲ್‌ನ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ ಶಾಪಿಂಗ್‌ಗೆ ಹೋದವರು ನಸುಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ. ಮೃತರು ಅಸ್ಸಾಂ ಹಾಗೂ ಮೇಘಾಲಯದವರು.

ಬೈಕ್‌ ಅಪಘಾತ, ಹಬ್ಬಕ್ಕೆ ಬಟ್ಟೆ ಖರೀದಿಸಿ ಮರಳುತ್ತಿದ್ದ ಇಬ್ಬರು ಬಲಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 1, 2025 3:06 PM

ಬೆಂಗಳೂರು: ರಂಜಾನ್ ಹಬ್ಬಕ್ಕೆ (Ramadan festival) ಬಟ್ಟೆ ಖರೀದಿಸಿ ಮನೆಗೆ ಮರಳುವಾಗ ಬೈಕ್‌ ಅಪಘಾತಕ್ಕೀಡಾಗಿ (Road Accident) ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಅಸ್ಸಾಂ ಮೂಲದ ವಿಜಯ್ (25), ಮೇಘಾಲಯದ ಆತನ ಸ್ನೇಹಿತ ಸುಹೈಲ್ (20) ಎಂದು ಗುರ್ತಿಸಲಾಗಿದೆ. ಇಬ್ಬರೂ ಬಿಇಎಲ್‌ನ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ ಶಾಪಿಂಗ್‌ಗೆ ಹೋದವರು ನಸುಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ವಿಜಯ್ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ್ದರು. ಈ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಹೇಲ್ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಗದಗದಲ್ಲಿ ದರೋಡಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ (Gadag News) ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ್ ಕಾಲಿಗೆ ಗುಂಡೇಟು ಬಿದ್ದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರ್‌ನ ಕರೆದುಕೊಂಡು ಬರುವಾಗ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳಾದ ಜಯಸಿಂಹ ಮೊಡಕೆರ್, ಮಂಜುನಾಥ ಮೊಡಕೆರ್ ರಾಜ್ಯ ಮತ್ತು ಅಂತಾರಾಜ್ಯ ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರರು. ನೆನ್ನೆ ವಿಜಯನಗರ ಜಿಲ್ಲೆಯ ಬಳಿ ಜಯಸಿಂಹನನ್ನು ವಶಕ್ಕೆ ಪಡೆಯಲಾಗಿತ್ತು. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿರುವಾಗ ಪೊಲೀಸ್ ವಾಹನದಲ್ಲಿ ಕೈಗೆ ಹಾಕಿದ್ದ ಬೇಡಿಯಿಂದ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದ. ಈ ವೇಳೆ ಸಿಪಿಐ ಮಂಜುನಾಥ ಕುಸುಗಲ್​​​, ಆರೋಪಿ ಜಯಸಿಂಹ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಮನೆ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಈ ನಟೋರಿಯಸ್ ದರೋಡೆಕೋರರು ಭಾಗಿಯಾಗಿದ್ದರು. ಇನ್ನು ಗದಗ ಎಸ್​ಪಿ ಬಿಎಸ್ ನೇಮಗೌಡ ಆಸ್ಪತ್ರೆಗೆ ಭೇಟಿ ನೀಡಿ, ಆರೋಪಿ ಜಯಸಿಂಹ ಮೊಡಕೆರ್ ಹಾಗೂ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: Honey Trap Case: ಕಿಸ್‌ ಕೊಟ್ಟು ‌ಹನಿಟ್ರ್ಯಾಪ್‌ ಮಾಡಿದ ‌ಪ್ರಿಸ್ಕೂಲ್ ಮಿಸ್! ಬ್ಲ್ಯಾಕ್‌ಮೇಲ್‌ ಗ್ಯಾಂಗ್‌ ಸೆರೆ