BHEL Recruitment 2025: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ನಲ್ಲಿದೆ 400 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
BHEL Recruitment 2025: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಎಂಜಿನಿಯರ್ ಟ್ರೈನಿ ಸೇರಿ ಒಟ್ಟು 400 ಹುದ್ದೆಗಳಿವೆ. ಎಂಜಿನಿಯರಿಂಗ್ ಪದವಿ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಫೆ. 1ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 28.
ಬೆಂಗಳೂರು: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (Bharat Heavy Electricals Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಎಂಜಿನಿಯರ್ ಟ್ರೈನಿ ಸೇರಿ ಒಟ್ಟು 400 ಹುದ್ದೆಗಳಿವೆ. ಎಂಜಿನಿಯರಿಂಗ್ ಪದವಿ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (BHEL Recruitment 2025). ಉದ್ಯೋಗದ ಸ್ಥಳ: ಬೆಂಗಳೂರು ಸೇರಿ ಭಾರತಾದ್ಯಂತ. ಆಸಕ್ತರು ಆನ್ಲೈನ್ ಮೂಲಕ ಫೆ. 1ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 28 (Job Guide).
ಹುದ್ದೆಗಳ ವಿವರ ವಿದ್ಯಾರ್ಹತೆ
ಎಂಜಿನಿಯರ್ ಟ್ರೈನಿ - 150 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್, ಸ್ನಾತಕೋತ್ತರ ಪದವಿ
ಸೂಪರ್ವೈಸರ್ ಟ್ರೈನಿ - 250 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮ ಇನ್ ಎಂಜಿನಿಯರಿಂಗ್
ವಯೋಮಿತಿ
ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು ಎಂಜಿನಿಯರ್ ಟ್ರೈನಿ ಹುದ್ದೆಗೆ 29 ವರ್ಷ ಮತ್ತು ಸೂಪರ್ವೈಸರ್ ಟ್ರೈನಿ ಹುದ್ದೆಗೆ 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್ಸಿ/ಎಸ್ಟಿ/ಪಿಡಬ್ಲ್ಯುಡಿ/ಮಾಜಿ ಸೈನಿಕ ಅಭ್ಯರ್ಥಿಗಳು 472 ರೂ. ಮತ್ತು ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು 1,072 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್ಲೈನ್.
ಈ ಸುದ್ದಿಯನ್ನೂ ಓದಿ: Central Bank of India Recruitment 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ 266 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಎಂಜಿನಿಯರ್ ಟ್ರೈನಿ ಹುದ್ದೆಗೆ 50,000 ರೂ. - 1,80,000 ರೂ. ಮತ್ತು ಸೂಪರ್ವೈಸರ್ ಟ್ರೈನಿ ಹುದ್ದೆಗೆ 32,000 ರೂ. - 1,20,000 ರೂ. ಮಾಸಿಕ ವೇತನ ದೊರೆಯಲಿದೆ. ಏಪ್ರಿಲ್ 11, 12 ಮತ್ತು 13ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯುವ 1 ವಾರದ ಮೊದಲು ಹಾಲ್ ಟಿಕೆಟ್ ದೊರೆಯಲಿದೆ.
BHEL Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://careers.bhel.in/index.jsp#openings)
* ಹೆಸರು ನೋಂದಾಯಿಸಿ.
* ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ.
* ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ವೆಬ್ಸೈಟ್ ವಿಳಾಸ:careers.bhel.inಗೆ ಭೇಟಿ ನೀಡಿ.