#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Road Accident: ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು

ಎತ್ತಿನ ಗಾಡಿಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದೆ. ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡಗುರು ಕ್ರಾಸ್ ಬಳಿ ಸಂಭವಿಸಿದೆ. ಎತ್ತುಗಳಿಗೂ ಗಾಯಗಳಾಗಿವೆ. ರಾಣೆಬೆನ್ನೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Feb 11, 2025 11:55 AM

ಹಾವೇರಿ: ಹಾವೇರಿಯಲ್ಲಿ (Haveri news) ಒಂದು ಭೀಕರವಾದ ಅಪಘಾತ (Road Accident) ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಎತ್ತಿನ ಬಂಡಿಗೆ ಬೈಕ್ ವೇಗವಾಗಿ ಬಂದು ಡಿಕ್ಕಿ ಹೊಡೆದ (bike hit to bullock cart) ಪರಿಣಾಮ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡಗುರು ಕ್ರಾಸ್ ಬಳಿ ಸಂಭವಿಸಿದೆ.

ಶಶಿಕುಮಾರ್ (25) ಆಕಾಶ್ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮೃತ ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಶಶಿಕುಮಾರ್ ಹನುಮನಟ್ಟಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದ ಕುರಿತಂತೆ ರಾಣೆಬೆನ್ನೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಡಿಯ ಎತ್ತುಗಳಿಗೂ ಗಾಯಗಳಾಗಿವೆ.

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ, 17 ಮಂದಿಗೆ ಗಾಯ

ಕಾರವಾರ: ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ 17 ಜನ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಸಂಭವಿಸಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.

ಇದನ್ನೂ ಓದಿ: Santosh Lad: ಅಪಘಾತದ ಗಾಯಾಳುವನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದ ಸಚಿವ ಸಂತೋಷ್‌ ಲಾಡ್‌