ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BJP president: 10 ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರ ಬದಲಾವಣೆ

ದೇಶಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ 2ನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದು ಬಿಜೆಪಿಯ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

10 ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರ ಬದಲಾವಣೆ

ಹರೀಶ್‌ ಕೇರ ಹರೀಶ್‌ ಕೇರ Jun 12, 2025 6:42 AM

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (BJP) ಮಹತ್ವದ ಬದಲಾವಣೆಯ ಮೇಜರ್ ಸರ್ಜರಿ ಮಾಡಲಾಗಿದೆ. 10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು (District president) ನೇಮಕ ಮಾಡಲಾಗಿದೆ. ಈ ಸಂಬಂಧ 2024-25ರ ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ (Ganesh Karnik) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ 2ನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದಿದ್ದಾರೆ.

ರಾಜ್ಯ ಚುನಾವಣಾಧಿಕಾರಿಯಾದ ನಾನು ಈ ಕೆಳಕಂಡ ಜಿಲ್ಲಾಧ್ಯಕ್ಷರನ್ನು ಅಭಿನಂದಿಸುತ್ತಾ, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ಸೂಚಿಸಿದ್ದಾರೆ.

ಹೀಗಿದೆ 10 ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಲಿಸ್ಟ್

ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ

ಹಾಸನ- ಸಿದ್ದೇಶ್ ನಾಗೇಂದ್ರ

ಕೊಡಗು- ರವಿ ಕಾಳಪ್ಪ

ಉಡುಪಿ – ಕುತ್ಯಾರು ನವೀನ್ ಶೆಟ್ಟಿ

ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ

ದಾವಣಗೆರೆ- ಎನ್ ರಾಜಶೇಖರ

ಚಿತ್ರದುರ್ಗ- ಕೆ.ಟಿ ಕುಮಾರಸ್ವಾಮಿ

ತುಮಕೂರು – ಹೆಚ್ ಎಸ್ ರವಿಶಂಕರ್ (ಹೆಬ್ಬಾಕ)

ಮಧುಗಿರಿ- ಚಿದಾನಂದ ಗೌಡ

ಚಿಕ್ಕಬಳ್ಳಾಪುರ- ಎಸ್ ವಿ ರಾಮಚಂದ್ರ ಗೌಡ (ಸೀಕಲ್)

ಇದನ್ನೂ ಓದಿ: DK Suresh: ಆರ್‌ಸಿಬಿ ಮೆರವಣಿಗೆಗೆ ಅವಕಾಶ ನೀಡಲು ಒತ್ತಾಯಿಸಿದ್ದ ಬಿಜೆಪಿ-ದಳ ಈಗ ಯೂ ಟರ್ನ್: ಡಿ.ಕೆ.ಸುರೇಶ್ ಆರೋಪ