ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್; ಸರ್ಕಾರದ ನಡೆಗೆ ಸಿಡಿದೆದ್ದ ಬಿಜೆಪಿ
Karnataka withdraws 2022 uniform order: ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಆದರೆ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.
hijab karnataka -
ಬೆಂಗಳೂರು, ಮೇ 14: 2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯ ಮಾತ್ರವಲ್ಲದೆ ದೇಶದ ಹಲವೆಡೆ ಭಾರೀ ಸದ್ದು ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಆದರೆ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ ರಾಜ್ಯವು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು, ಮುಸ್ಲಿಮರ ಅತಿಯಾದ ಓಲೈಕೆಗಾಗಿ ಹಿಜಾಬ್ ಜಾರಿಗೊಳಿಸಿದ್ದಾರೆ ಎಂದು ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ; ಸಚಿವ ಮಧು ಬಂಗಾರಪ್ಪ ಘೋಷಣೆ
'ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಜಾಬ್ ನಿಷೇಧಿಸಲಾಗಿತ್ತು, ಪಶ್ಚಿಮ ಬಂಗಾಳದಲ್ಲಿ ಅತಿ ಓಲೈಕೆ ಮಾಡಿ ಮಮತಾ ಬ್ಯಾನರ್ಜಿ ಸೋತು ಮನೆಗೆ ಸೇರಿದ್ದಾರೆ, ತಮಿಳುನಾಡಲ್ಲಿ ಹಿಂದುಗಳನ್ನು ಬೈದು ಸ್ಟಾಲಿನ್ ಸೋತರು. ಇದೇ ರೀತಿ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸೋಲುತ್ತದೆ. ರಾಜ್ಯ ಸರ್ಕಾರ ಹಿಂದುಗಳಿಗೆ ಯಾವಾಗಲೂ ವಂಚನೆ ಹಾಗೂ ದ್ರೋಹ ಮಾಡುತ್ತಿದೆ" ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.
Hijab as a "Healer" for a Bruised Vote Bank? Congress’s Desperate Appeasement Politics Exposed!
— R. Ashoka (@RAshokaBJP) May 13, 2026
The @INCKarnataka government, visibly rattled by the fallout of the Davanagere bypolls and the growing anger within its minority voter base, has once again resorted to its old,… https://t.co/uW7lEBSVOH
ಎಕ್ಸ್ ಖಾತೆಯಲ್ಲೂ ಪೋಸ್ಟ್ ಮಾಡಿ ಕಿಡಿಕಾರಿದ ಅಶೋಕ್, ದಾವಣಗೆರೆ ಉಪಚುನಾವಣೆ ಸುತ್ತ ನಡೆದ ಘಟನೆಗಳ ನಂತರ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಕಾಂಗ್ರೆಸ್ ಸರ್ಕಾರ ಬೆದರಿದೆ, ಈಗ ತನ್ನ ಮತಬ್ಯಾಂಕ್ ಉಳಿಸಿಕೊಳ್ಳಲು 'ಹಿಜಾಬ್' ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ರಾಜ್ಯದ ನೈಜ ಸಮಸ್ಯೆಗಳಾದ ಬೆಲೆ ಏರಿಕೆ, ಭ್ರಷ್ಟಾಚಾರ, ರೈತರ ಸಂಕಷ್ಟ, ಕಾನೂನು ಸುವ್ಯವಸ್ಥೆಯ ವೈಫಲ್ಯ, ಇವೆಲ್ಲದರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೌನವಾಗಿದೆ. ಮುನಿಸಿಕೊಂಡಿರುವ ಮುಸ್ಲಿಂ ಮತ ಬ್ಯಾಂಕ್ಗೆ ‘ಹಿಜಾಬ್’ ಮೂಲಕ ಮುಲಾಮು ಹಚ್ಚಲು ಹೊರಟಿದೆ" ಎಂದು ಬರೆದುಕೊಂಡಿದ್ದಾರೆ.
2022ರಲ್ಲಿ ಬಿಜೆಪಿ ಸರಕಾರ, ಶಾಲಾ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿತ್ತು. ಇದೀಗ ಈ ಆದೇಶವನ್ನು ಕಾಂಗ್ರೆಸ್ ಸರಕಾರ ವಾಪಸ್ ಪಡೆದಿದೆ.