ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KSRTC Strike: ನಾಳೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಅನಿರ್ದಿಷ್ಟಾವಧಿ ಮುಷ್ಕರ, ಇಂದು ಸಿಎಂ ಸಭೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ ವಿಧಾನಸೌಧದಲ್ಲಿಂದು ಸಾರಿಗೆ ನಿಗಮಗಳ ನೌಕರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆದಿದ್ದಾರೆ.

ಬೆಂಗಳೂರು: ವೇತನ ಹೆಚ್ಚಳ (Salary increase) ಹಾಗೂ ವೇತನ ಹೆಚ್ಚಳ ಹಿಂಬಾಕಿ (arrears) ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು (KSRTC Strike) ನಾಳೆಯಿಂದ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ ವಿಧಾನಸೌಧದಲ್ಲಿಂದು ಸಾರಿಗೆ ನಿಗಮಗಳ ನೌಕರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆದಿದ್ದಾರೆ. ಮಧ್ಯಾಹ್ನ 11:45ಕ್ಕೆ ಗಂಟೆಯ ಸುಮಾರಿಗೆ ಕೆಎಸ್​ಆರ್​ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಹಾಗೂ 12:15ಕ್ಕೆ ಕೆಎಸ್​ಆರ್​ಟಿಸಿ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಜತೆ ಸಭೆ ನಡೆಯಲಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಉಪಸ್ಥಿತರಿರಲಿದ್ದು, ಮುಷ್ಕರ ಕೈಬಿಡುವಂತೆ ಸಂಧಾನಕ್ಕೆ ಪ್ರಯತ್ನ ನಡೆಸಲಿದ್ದಾರೆ.

ವೇತನ ಪರಿಷ್ಕರಣೆ, 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಬಿಎಂಟಿಸಿ (BMTC), ಕೆಎಸ್​ಆರ್​ಟಿಸಿ (KSRTC) ನೌಕರರು ಪಟ್ಟು ಹಿಡಿದಿದ್ದಾರೆ. ಸರ್ಕಾರಕ್ಕೆ ಗಡುವಿನ ಮೇಲೆ ಗಡುವು ಕೊಟ್ಟರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಆಗಸ್ಟ್ 5 ರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನ ಗಾಂಧಿನಗರದ ಎಐಟಿಯುಸಿ ಕಚೇರಿಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಭಾನುವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ 6 ಸಂಘಟನೆಗಳು ಭಾಗಿಯಾಗಿದ್ದವು.

ಸಭೆ ಬಳಿಕ ಮಾತನಾಡಿದ ಅನಂತ್ ಸುಬ್ಬರಾವ್, ನಾಳೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್​ ಸಂಚಾರ ಸ್ಥಗಿತಗೊಳಿಸಿ ಎಲ್ಲ 1.15 ಲಕ್ಷ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದಿದ್ದಾರೆ. ಕೂಡಲೇ ಸರ್ಕಾರ 38 ತಿಂಗಳ ಅರಿಯರ್ಸ್​ ಕೊಡಬೇಕು. ಶಕ್ತಿ ಯೋಜನೆಯನ್ನು ನಾವು ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇವೆ. ಆದರೆ ಸಾರಿಗೆ ಸಿಬ್ಬಂದಿಗೆ ಸಿದ್ದರಾಮಯ್ಯ ಸರ್ಕಾರ ವಿಶ್ವಾಸ ದ್ರೋಹ ಮಾಡಿದೆ ಎಂದು ಅನಂತ್ ಸುಬ್ಬರಾವ್ ಕಿಡಿಕಾರಿದರು.

ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ. ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮಿನಿ ಬಸ್, ಮ್ಯಾಕ್ಸಿಕ್ಯಾಬ್, ಆಟೋ ಮೂಲಕ ಸೇವೆ ನೀಡಲಾಗುವುದು. ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾದರೆ ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಶಾಲಾ ವಾಹನಗಳನ್ನು ಸಾರಿಗೆ ಸೇವೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ: KSRTC Strike: ಆಗಸ್ಟ್‌ 5ರಿಂದ ಸಾರಿಗೆ ನೌಕರರ ಮುಷ್ಕರ, ಮಾತುಕತೆಗೆ ಕರೆದ ರಾಜ್ಯ ಸರಕಾರ

ಹರೀಶ್‌ ಕೇರ

View all posts by this author