BOB Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿದೆ ಬರೋಬ್ಬರಿ 518 ಹುದ್ದೆ; ಹೀಗೆ ಅಪ್ಲೈ ಮಾಡಿ
ದೇಶದ ಪ್ರತಿಷ್ಠಿತ ಬ್ಯಾಂಕ್ ಆಫ್ ಬರೋಡಾ ವಿವಿಧ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಆಫೀಸರ್ ಸೇರಿ ಒಟ್ಟು 518 ಹುದ್ದೆಗಳಿವೆ. ಸಿಎ, ಸಿಎಫ್ಎ, ಬಿಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾ. 11.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಬ್ಯಾಂಕ್ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಗುಡ್‌ನ್ಯೂಸ್ ಹೊರ ಬಿದ್ದಿದೆ. ದೇಶದ ಪ್ರತಿಷ್ಠಿತ ಬ್ಯಾಂಕ್ ಆಫ್ ಬರೋಡಾ (Bank of Baroda) ವಿವಿಧ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2025). ದೇಶಾದ್ಯಂತ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಆಫೀಸರ್ ಸೇರಿ ಒಟ್ಟು 518 ಹುದ್ದೆಗಳಿವೆ. ಸಿಎ, ಸಿಎಫ್ಎ, ಬಿಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾ. 11 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸೀನಿಯರ್ ಮ್ಯಾನೇಜರ್ - 94 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಫ್ಎ, ಬಿಇ/ಬಿ.ಟೆಕ್, ಪದವಿ, ಎಂಇ/ ಎಂ.ಟೆಕ್, ಎಂಸಿಎ, ಎಂಬಿಎ, ಪಿಜಿಡಿಎಂ, ಸ್ನಾತಕೋತ್ತರ ಪದವಿ
ಮ್ಯಾನೇಜರ್ - 319 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಫ್ಎ, ಬಿಇ/ಬಿ.ಟೆಕ್, ಪದವಿ, ಎಂಇ/ ಎಂ.ಟೆಕ್, ಎಂಸಿಎ, ಎಂಬಿಎ, ಪಿಜಿಡಿಎಂ, ಸ್ನಾತಕೋತ್ತರ ಪದವಿ
ಆಫೀಸರ್ - 100 ಹುದ್ದೆ, ವಿದ್ಯಾರ್ಹತೆ: ಬಿಇ/ಬಿ.ಟೆಕ್, ಎಂಇ/ಎಂ.ಟೆಕ್, ಎಂಸಿಎ
ಚೀಫ್ ಮ್ಯಾನೇಜರ್ - 5, ವಿದ್ಯಾರ್ಹತೆ: ಸಿಎ, ಸಿಎಫ್ಎ, ಬಿಇ/ಬಿ.ಟೆಕ್, ಪದವಿ, ಎಂಇ/ಎಂ.ಟೆಕ್, ಎಂಸಿಎ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22 ವರ್ಷದಿಂದ 40 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್ ಅಭ್ಯರ್ಥಿಗಳು 600 ರೂ. ಮತ್ತು ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ, ಮಹಿಳಾ ಅಭ್ಯರ್ಥಿಗಳು 100 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಆನ್‌ಲೈನ್ ಟೆಸ್ಟ್, ಗ್ರೂಪ್ ಡಿಸ್ಕಷನ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 48,480 ರೂ. - 1,20,940 ರೂ. ವರೆಗೂ ಮಾಸಿಕ ವೇತನ ದೊರೆಯಲಿದೆ.
BOB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://bankapps.bankofbaroda.co.in/BOBRECRUITMENT2025/?_gl=1*1fj3wlh*_gcl_au*ODI4Mjk3Njg5LjE3MzUyOTU1MTQ.)
* ಹೆಸರು ನೋಂದಾಯಿಸಿ.
* ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
* ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: bankofbaroda.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: India Post Recruitment 2025: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್; ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ