ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ವಿದೇಶಿ ಮಹಿಳೆ ಮೇಲೆ ಬರ್ಬರ ಅತ್ಯಾಚಾರ; ಹಂಪಿ ಕೇಸ್‌ ಬೆನ್ನಲ್ಲೇ ದೇಶವನ್ನೇ ಬೆಚ್ಚಿ ಬೀಳಿಸುವ ಮತ್ತೊಂದು ಹೀನ ಕೃತ್ಯ!

ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತನಾಗಿದ್ದ ವ್ಯಕ್ತಿಯನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದ ಬ್ರಿಟಿಷ್ ಪ್ರಜೆಯೊಬ್ಬಳ ಮೇಲೆ ಬರ್ಬರ ಅತ್ಯಾಚಾರ ನಡೆದಿದೆ. ಮಹಿಪಾಲಪುರದ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಆರೋಪಿ ಕೈಲಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಅವನ ಸ್ನೇಹಿತ ವಾಸಿಮ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ನವದೆಹಲಿ: ಹಂಪಿ ಸಮೀಪದ ಸಾನಾಪುರ ಕೆರೆ ಬಳಿ ಇತ್ತೀಚೆಗೆ ನಡೆದಿದ್ದ ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲಿನ ಬರ್ಬರ (Hampi Horror) ಅತ್ಯಾಚಾರ ಪ್ರಕರಣ (Physical Abuse) ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಕೇಸ್‌ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತನಾಗಿದ್ದ ವ್ಯಕ್ತಿಯನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದ ಬ್ರಿಟಿಷ್ ಪ್ರಜೆಯೊಬ್ಬಳ ಮೇಲೆ ಬರ್ಬರ ಅತ್ಯಾಚಾರ ನಡೆದಿದೆ. ಮಹಿಪಾಲಪುರದ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಆರೋಪಿ ಕೈಲಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಅವನ ಸ್ನೇಹಿತ ವಾಸಿಮ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಮಹಿಳೆ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ರಜೆ ಕಳೆಯಲು ಭಾರತಕ್ಕೆ ಬಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಅಲ್ಲಿಂದ ಕೈಲಾಶ್‌ಗೆ ಕರೆ ಮಾಡಿ ತನ್ನ ಪ್ರವಾಸಕ್ಕೆ ಸಾಥ್‌ ಕೊಡುವಂತೆ ಕೇಳಿಕೊಂಡಳು. ತಾನು ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಕೈಲಾಶ್ ಹೇಳಿದ್ದು, ದೆಹಲಿಗೆ ಬರಲು ಹೇಳಿದ್ದಾನೆ. ಮಹಿಳೆ ಮಂಗಳವಾರ ದೆಹಲಿ ತಲುಪಿ ಮಹಿಪಾಲಪುರದ ಹೋಟೆಲ್‌ನಲ್ಲಿ ತಂಗಿದ್ದಾಳೆ. ನಂತರ ಆಕೆ ಕೈಲಾಶ್‌ಗೆ ಕರೆ ಮಾಡಿದ್ದಾಳೆ ಮತ್ತು ಅವನು ತನ್ನ ಸ್ನೇಹಿತ ವಾಸಿಮ್‌ನೊಂದಿಗೆ ಹೋಟೆಲ್ ತಲುಪಿದ್ದಾನೆ. ಆ ರಾತ್ರಿ ಅವನು ಅವಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Hampi Horror: ಹಂಪಿ ಗ್ಯಾಂಗ್‌ರೇಪ್ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಮರುದಿನ ಬೆಳಗ್ಗೆ, ಮಹಿಳೆ ವಸಂತ್ ಕುಂಜ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ. ಮಾರ್ಗಸೂಚಿಗಳ ಪ್ರಕಾರ, ಪೊಲೀಸರು ಘಟನೆಯ ಬಗ್ಗೆ ಬ್ರಿಟಿಷ್ ಹೈಕಮಿಷನ್‌ಗೆ ಮಾಹಿತಿ ನೀಡಿದ್ದಾರೆ ಮತ್ತು ಅವರು ಯುಕೆ ಪ್ರಜೆಗೂ ಸಹಾಯ ಮಾಡುತ್ತಿದ್ದಾರೆ. ಕೈಲಾಶ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಂಗ್ಲಿಷ್ ಮಾತನಾಡಲು ಕಷ್ಟಪಡುತ್ತಿದ್ದ ಮತ್ತು ತನ್ನೊಂದಿಗೆ ಸಂವಹನ ನಡೆಸಲು ಗೂಗಲ್ ಅನುವಾದವನ್ನು ಬಳಸಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಇಂತಹದ್ದೇ ಒಂದು ಭೀಕರ ಘಟನೆ ಕಳೆದ ವಾರ ಹಂಪಿಯಲ್ಲಿ ನಡೆದಿತ್ತು.ಮಾರ್ಚ್ 6ರಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ 3 ಜನರು ಹಲ್ಲೆ ನಡೆಸಿದ್ದರು. ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಇತರೆ ಮೂರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು. ಈ ಪೈಕಿ ನಾಪತ್ತೆಯಾಗಿದ್ದ ಪ್ರವಾಸಿಯ ಶವ ನಿನ್ನೆ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿದೆ. ಈ ಪೈಶಾಚಿಕ ಕೃತ್ಯದಲ್ಲಿ ಮೂವರು ವ್ಯಕ್ತಿಗಳು ಭಾಗಿಯಾಗಿದ್ದು, ಮಾರ್ಚ್ 8ರಂದು ಇಬ್ಬರನ್ನು ಬಂಧಿಸಿದರೆ, ಮೂರನೇ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ.