#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Job Guide: ಬಾರ್ಡರ್‌ ರೋಡ್ಸ್‌ ಆರ್ಗನೈಸೇಷನ್‌ನಲ್ಲಿದೆ 411 ಹುದ್ದೆ; 10ನೇ ತರಗತಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಬಾರ್ಡರ್ ರೋಡ್ಸ್‌ ಆರ್ಗನೈಸೇಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 411 ಎಂಎಸ್‌ಡಬ್ಲ್ಯು ಹುದ್ದೆಗಳಿದ್ದು, ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ 10ನೇ ತರಗತಿ, ಐಟಿಐ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ನಿಮ್ಮ ಅರ್ಜಿ ಫೆ. 24ರೊಳಗೆ ತಲುಪುವಂತಿರಬೇಕು.

10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್‌ ನ್ಯೂಸ್‌; ಬಾರ್ಡರ್‌ ರೋಡ್ಸ್‌ ಆರ್ಗನೈಸೇಷನ್‌ನ  411 ಹುದ್ದೆಗೆ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ.

Profile Ramesh B Jan 27, 2025 4:47 PM

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಬಾರ್ಡರ್ ರೋಡ್ಸ್‌ ಆರ್ಗನೈಸೇಷನ್‌ (Border Roads Organisation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BRO Recruitment 2025). ಒಟ್ಟು 411 ಎಂಎಸ್‌ಡಬ್ಲ್ಯು (MSW) ಹುದ್ದೆಗಳಿದ್ದು, ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ 10ನೇ ತರಗತಿ, ಐಟಿಐ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ನಿಮ್ಮ ಅರ್ಜಿ ಫೆ. 24ರೊಳಗೆ ತಲುಪುವಂತಿರಬೇಕು (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಂಎಸ್‌ಡಬ್ಲ್ಯು (ಕುಕ್) - 153 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ ತೇರ್ಗಡೆ

ಎಂಎಸ್‌ಡಬ್ಲ್ಯು (ಮೇಸನ್) - 172 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ ತೇರ್ಗಡೆ

ಎಂಎಸ್‌ಡಬ್ಲ್ಯು (ಬ್ಲ್ಯಾಕ್‌ಸ್ಮಿತ್‌) 75 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ ತೇರ್ಗಡೆ

ಎಂಎಸ್‌ಡಬ್ಲ್ಯು (ಮೆಸ್ ವೇಟರ್) 11 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ ತೇರ್ಗಡೆ

ವಯೋಮಿತಿ

ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆ ತಿಳಿಸಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್‌ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಫಿಸಿಕಲ್‌ ಎಫಿಯ್ಶೆನ್ಸಿ ಟೆಸ್ಟ್‌, ಪ್ರಾಕ್ಟಿಕಲ್‌ ಟೆಸ್ಟ್‌, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

BRO Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ
(
https://marvels.bro.gov.in/Download/Recruitment_Activities_Against_Advt_No01_2025.pdf)

* ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ.

* ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:
GREF Centre, Dighi Camp, Pune-411015

ಗಮನಿಸಿ: ಅಪ್ಲಿಕೇಷನ್‌ ಫಾರಂ ಜತೆಗೆ ಸೆಲ್ಫ್‌ ಅಟೆಸ್ಟ್‌ ದಾಖಲೆಗಳು ಮತ್ತು ಅರ್ಜಿ ಸುಲ್ಕ ಪಾವತಿಸಿದ ಪ್ರೂಫ್‌ ಲಗತ್ತಿಸಬೇಕು. ಅಪ್ಲಿಕೇಷನ್‌ ಫಾರಂ ಅನ್ನು ರಿಜಿಸ್ಟರ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌ ಮುಂತಾದ ವಿಧಾನಗಳ ಮೂಲಕ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: RRB Recruitment 2025: ಬರೋಬ್ಬರಿ 32 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ: 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ

ಹೆಚ್ಚಿನ ಮಾಹಿತಿಗೆ ವೆನ್‌ಸೈಟ್‌ ವಿಳಾಸ: https://marvels.bro.gov.in/ಕ್ಕೆ ಭೇಟಿ ನೀಡಿ.