Murder case: ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆ; ಕಸದ ಲಾರಿಯಲ್ಲಿ ಶವ ಪತ್ತೆ!
Murder case: ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಘಟನೆ ನಡೆದಿದೆ. ಶನಿವಾರ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ.


ಬೆಂಗಳೂರು: ನಗರದಲ್ಲಿ ಮಹಿಳೆಯ ಭೀಕರ ಕೊಲೆ (Murder case) ನಡೆದಿದೆ. ಮಹಿಳೆಯನ್ನು ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ. ಶನಿವಾರ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ.
30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.
ಮಗಳ ಮೇಲೆಯೇ ತಾಯಿ ನಿರಂತರ ಲೈಂಗಿಕ ದೌರ್ಜನ್ಯ!
ಬೆಂಗಳೂರು: ಮದುವೆಯಾದ ನಂತರ ಗಂಡನ ಜತೆ ಹೇಗಿರಬೇಕು ಎಂದು ಹೇಳಿಕೊಡುತ್ತೇನೆ ಎಂದು ಮಗಳ ಮೇಲೆಯೇ ತಾಯಿಯೊಬ್ಬಳು ನಿರಂತರ ಲೈಂಗಿಕ ದೌರ್ಜನ್ಯ (Physical abuse) ಎಸಗಿರುವುದು ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಆರು ವರ್ಷಗಳಿಂದ ನಿರಂತರವಾಗಿ ತಾಯಿಯೇ ಮಗಳ ಮೇಳೆ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ಈ ವಿಚಾರವಾಗಿ ಶಿಕ್ಷಕರ ಬಳಿ ಹೇಳಿಕೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಮಕ್ಕಳ ಆಪ್ತ ಸಮಾಲೋಚಕಿಯೊಬ್ಬರು ನೀಡಿದ ದೂರು ಆಧರಿಸಿ ಬಾಲಕಿಯ ತಾಯಿ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ದಾಖಲಿಸಿ ಮಹಿಳೆಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಶಾಲೆಗೆ ಇತ್ತೀಚೆಗೆ ಆಪ್ತ ಸಮಾಲೋಚಕರು ಬಂದಿದ್ದರು. ಕೌನ್ಸೆಲಿಂಗ್ ಮಾಡುವಾಗ ಬಾಲಕಿಯು ತನ್ನ ತಾಯಿಯಿಂದ ಲೈಂಗಿಕ ದೌರ್ಜನ್ಯ ಆಗುತ್ತಿರುವ ಬಗ್ಗೆ ಹೇಳಿಕೊಂಡಿದ್ದಳು. ಮದುವೆ ಬಳಿಕ ಗಂಡನ ಜತೆ ಹೇಗಿರಬೇಕೆಂದು ಹೇಳಿ, ತನ್ನ ಅಂಗಾಂಗಗಳನ್ನು ತಾಯಿ ಮುಟ್ಟುತ್ತಿರುವುದಾಗಿ ನೋವು ತೋಡಿಕೊಂಡಿದ್ದಳು. ಈ ವಿಷಯ ಅರಿತ ಸಮಾಲೋಚಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಾಥಮಿಕ ವಿಚಾರಣೆ ನಡೆಸಿದ ಪೊಲೀಸರು, ಬಾಲಕಿ ತಾಯಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಾಲಕಿಯು ತಾಯಿ ಹಾಗೂ ಅಕ್ಕನೊಂದಿಗೆ ವಾಸವಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ತಂದೆ ಕುಟುಂಬದಿಂದ ದೂರವಾಗಿದ್ದರು. ಆರೋಪಿತ ಮಹಿಳೆ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಕೌನ್ಸೆಲಿಂಗ್ ನಡೆಸುವಾದ ಒಬ್ಬರ ಮುಂದೆ ಬಾಲಕಿಯು ತಾಯಿ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನಿರಾಕರಿಸಿದರೆ, ಇನ್ನೊಬ್ಬರ ಮುಂದೆ ತನಗೆ ಹಲ್ಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾಳೆ. ಇದು ಪೊಲೀಸರಿಗೆ ಗೊಂದಲಕ್ಕೆ ಕಾರಣವಾಗಿದೆ. ಹಾಗಾಗಿ ಬಾಲಕಿಯನ್ನು ಹೆಚ್ಚಿನ ಕೌನ್ಸೆಲಿಂಗ್ಗೆ ಒಳಪಡಿಸಿ ಅಂತಿಮ ಹೇಳಿಕೆ ನೀಡಲು ಸಮಯಾವಕಾಶ ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ | Triple Murder Case: ಕೊಲೆಯಾದ ರೌಡಿಶೀಟರ್ ಪತ್ನಿಯ ಶಪಥ ಈಡೇರಿಸಲು ತ್ರಿವಳಿ ಕೊಲೆ! 10 ಆರೋಪಿಗಳ ಸೆರೆ
ಸದ್ಯ ಪೋಕ್ಸೋ ಪ್ರಕರಣ ದಾಖಲಿಸಿದ್ದು, ಒಂದು ವೇಳೆ ಹಲ್ಲೆ ಎಂದು ಹೇಳಿಕೆ ನೀಡಿದರೆ ಹಲ್ಲೆ ಪ್ರಕರಣವನ್ನಾಗಿ ಪರಿವರ್ತಿಸಿ ಕಾನೂನು ಪ್ರಕಾರ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.