Budget 2025: 8ನೇ ಬಾರಿಗೆ ಬಜೆಟ್‌ ಮಂಡಿಸಲು ನಿರ್ಮಲಾ ಸೀತಾರಾಮನ್‌ ಸಜ್ಜು; ಈ ಬಾರಿಯ ಪ್ರಮುಖ ಅಂಶಗಳೇನು?

Budget 2025 : 2025 ರ ಕೇಂದ್ರ ಬಜೆಟ್‌ ಮಂಡನೆಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಅವರ ಸತತ ಎಂಟನೇ ಬಜೆಟ್ ಮತ್ತು ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ.

image-1d05fc0b-4e61-4352-80e3-777b049bd06b.jpg
Profile Vishakha Bhat January 3, 2025
ನವದೆಹಲಿ: 2025ರ ಕೇಂದ್ರ ಬಜೆಟ್‌ (Budget 2025) ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitaraman) ಅವರು ಫೆಬ್ರವರಿ 1ರಂದು ಮಂಡಿಸಲಿದ್ದಾರೆ. ಅವರ ಸತತ 8ನೇ ಬಜೆಟ್ ಮತ್ತು ಮೋದಿ ಸರ್ಕಾರದ (Central Government) ಮೂರನೇ ಅವಧಿಯ 2ನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ಬಾರಿಯ ಬಜೆಟ್‌ ದೀರ್ಘಾವಧಿಯ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುತ್ತದೆ ಎಂದು ಹೇಳಲಾಗಿದೆ. ಬಜೆಟ್‌ನ ಪ್ರಮುಖ ಅಂಶಗಳು ಆದಾಯ ತೆರಿಗೆ ವಿನಾಯಿತಿ: ವಾರ್ಷಿಕವಾಗಿ 15 ಲಕ್ಷ ರೂ.ವರೆಗೆ ಗಳಿಸುವ ವ್ಯಕ್ತಿಗಳಿಗೆ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ಕ್ರಮವು ಮಧ್ಯಮ ವರ್ಗದವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇಂಧನದ ಮೇಲಿನ ಅಬಕಾರಿ ಸುಂಕ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ, ಹೆಚ್ಚಿನ ಅಬಕಾರಿ ಸುಂಕದಿಂದಾಗಿ ಇಂಧನ ಬೆಲೆ ಕಡಿಮೆಯಾಗಿಲ್ಲ. ಈ ಸುಂಕಗಳನ್ನು ಕಡಿಮೆ ಮಾಡುವುದರಿಂದ ಹಣದುಬ್ಬರದ ಒತ್ತಡವನ್ನು ನಿವಾರಿಸಬಹುದು. ಇದರಿಂದ ಸಾರ್ವಜನಿಕರ ಮೇಲಿನ ಆರ್ಥಿಕ ಹೊರೆಯನ್ನು ಗಣನೀಯವಾಗಿ ತಗ್ಗಿಸಬಹುದು ಎನ್ನಲಾಗಿದ್ದು, ಹೀಗಾಗಿ ಈ ಬಜೆಟ್‌ನಲ್ಲಿ ಅಬಕಾರಿ ಸುಂಕ ಇಳಿಕೆ ನಿರೀಕ್ಷಿಸಬಹುದು. ಉದ್ಯೋಗ-ತೀವ್ರ ವಲಯಗಳಿಗೆ ಬೆಂಬಲ: ಈ ಬಾರಿಯ ಬಜೆಟ್‌ನಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರವಾಗುವಂತಹ ಕೆಲ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಗಾರ್ಮೆಂಟ್ಸ್, ಪಾದರಕ್ಷೆಗಳು, ಪ್ರವಾಸೋದ್ಯಮ ಮತ್ತು MSMEಗಳಂತಹ ಉದ್ಯೋಗ-ಭಾರೀ ಕೈಗಾರಿಕೆಗಳ ಮೇಲೆ ಬಜೆಟ್‌ ಗಮನ ಕೇಂದ್ರೀಕರಿಸಬಹುದು. ಈ ವಲಯಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಸರ್ಕಾರವು ಉದ್ಯೋಗಗಳನ್ನು ಸೃಷ್ಟಿಸಬಹುದು. ದೇಶೀಯ ಉತ್ಪಾದನೆಯನ್ನು ಹೆಚ್ಚಿಸಬಹುದು. ಇದು ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತವನ್ನು ಪ್ರಬಲಗೊಳಿಸಲು ಸಹಕಾರಿಯಾಗಲಿದೆ. ಆರೋಗ್ಯ ಮತ್ತು ಶಿಕ್ಷಣ: ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕೇತ್ರಕ್ಕೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆಗಳಿವೆ. ಡಿಜಿಟಲ್ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಮೇಲೆ ಯೋಜನೆಯನ್ನು ಜಾರಿಗೊಳಿಸುವ ನಿರೀಕ್ಷೆ ಇದೆ. ದೇಶದ ಹಲವು ಕಡೆ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಯೋಜನೆಯನ್ನು ಕೇಂದ್ರ ಹಾಕಿಕೊಂಡಿದೆ ಎಂದು ಹೇಳಲಾಗಿದೆ. ಸ್ಟಾರ್ಟ್‌ ಅಪ್‌ಗಳು ಮತ್ತು ಎಂಎಸ್‌ಎಂಇಗಳಲ್ಲಿ ಸುಧಾರಣೆ: ಜಾಗತಿಕ ಮಾರುಕಟ್ಟೆಯಲ್ಲಿ ಚೀನಾದ ಪ್ರಾಬಲ್ಯ ಭಾರತೀಯ ಕೈಗಾರಿಕೆಗಳಿಗೆ ಹಾನಿ ಮಾಡಿದೆ. ದೇಶೀಯ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಇನ್ನಷ್ಟು ಉತ್ತೇಜನ ದೊರಕಬಹುದು. ಆಮದನ್ನು ಕಡೆಮೆ ಮಾಡಿ ರಫ್ತು ಹೆಚ್ಚು ಮಾಡಲು ಕೆಲ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ. ಈ ಸುದ್ದಿಯನ್ನೂ ಓದಿ : Forbes Most Powerful Women: ಪ್ರಬಲ ಮಹಿಳೆಯರ ಪಟ್ಟಿ ಪ್ರಕಟ; ನಿರ್ಮಲಾ ಸೀತಾರಾಮನ್ ಸೇರಿ ಭಾರತದ ಮೂವರು ನಾರಿ ಮಣಿಯರಿಗೆ ಸ್ಥಾನ https://youtu.be/nB4SUbv0y6s?si=8IML59cXKAB6IeQ0
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ