ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬೆಂಗಳೂರಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ, ನಾಲ್ವರಿಗೆ ಗಂಭೀರ ಗಾಯ

ಅತಿ ವೇಗವಾಗಿ ಕಾರು ಚಾಲನೆ ಮಾಡಿ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅತಿ ವೇಗವಾಗಿ ಕಾರು ಚಾಲನೆ ಮಾಡಿ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ, ನಾಲ್ವರಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 13, 2025 9:22 AM

ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ (Divider) ಡಿಕ್ಕಿ ಹೊಡೆದ ಪರಿಣಾಮ (Road Accident) ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. ಈ ಘಟನೆ ಬೆಂಗಳೂರಿನ (Bengaluru news) ರಾಜಕುಮಾರ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಕಾರು 20 ಮೀಟರ್‌ನಷ್ಟು ದೂರ ಹಾರಿ ಬಿದ್ದಿದೆ.


ಅತಿ ವೇಗವಾಗಿ ಕಾರು ಚಾಲನೆ ಮಾಡಿ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ಹಿಟ್‌ ಆಂಡ್‌ ರನ್‌, ಬೈಕ್‌ ಸವಾರ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಮೂಲೂರು ಬಳಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 29 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಪ್ರತೀಶ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಗಾಯಾಳು ನಿಹಾಲ್ ವಿಲ್ಸನ್ (29) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ರಾತ್ರಿ ಉಡುಪಿಯ ಕರಾವಳಿ ಜಿಲ್ಲೆಯ ಕಾಪುವಿನಿಂದ ಪಡುಬಿದ್ರಿಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು.

ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಿಸದೇ ಪ್ರತೀಶ್ ಸಾವನ್ನಪ್ಪಿದ್ದಾರೆ. ಮೂಳೆ ಮುರಿತ ಸೇರಿದಂತೆ ಹಲವು ಗಾಯಗಳಿಂದ ಬಳಲುತ್ತಿದ್ದ ನಿಹಾಲ್ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಟ್ ಆ್ಯಂಡ್ ರನ್ ಮಾಡಿದ ವಾಹನವನ್ನು ಗುರುತಿಸಲು ಪೊಲೀಸರು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನೂ ಯಾವುದೇ ನಿರ್ದಿಷ್ಟ ಪುರಾವೆಗಳು ಕಂಡುಬಂದಿಲ್ಲ ಎಂದು ಅವರು ಹೇಳಿದರು. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Self Harming: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ