ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಚಿತ್ರದುರ್ಗದಲ್ಲಿ ಕಾರು- ಟ್ರ್ಯಾಕ್ಟರ್‌ ಡಿಕ್ಕಿ: 2 ವರ್ಷದ ಮಗು ಸೇರಿ ನಾಲ್ವರು ಮೃತ್ಯು

ಅರೇಹಳ್ಳಿಯ ಉದ್ಯಮಿ ಯಶವಂತ್‌ ಅವರ ಪತ್ನಿ ಕಾವ್ಯಾ (30), ಅತ್ತೆ ಗಂಗಮ್ಮ (50) ಹಾಗೂ ಪುತ್ರಿಯರಾದ ಹನ್ಸಿಕಾ (4), ಮನಸ್ವಿ (2) ಮೃತ ದುರ್ದೈವಿಗಳು. ಯಶವಂತ್‌ ಹಾಗೂ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಾರು- ಟ್ರ್ಯಾಕ್ಟರ್‌ ಡಿಕ್ಕಿ: 2 ವರ್ಷದ ಮಗು ಸೇರಿ ನಾಲ್ವರು ಮೃತ್ಯು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 17, 2025 8:51 AM

ಚಿತ್ರದುರ್ಗ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಚಿತ್ರದುರ್ಗ (Chitradurga news) ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿಯಾಗಿ (car tractor hit) ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹೊಳಲ್ಕರೆ ಮೂಲದವರು ಎಂದು ಗುರುತಿಸಲಾಗಿದ್ದು, ಈ ಪೈಕಿ ಪುಟಾಣಿ ಕಂದಮ್ಮ ಸೇರಿ ಇಬ್ಬರು ಮಕ್ಕಳು ಕೂಡ ಮೃತಪಟ್ಟಿವೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ಅರೇಹಳ್ಳಿಯ ಉದ್ಯಮಿ ಯಶವಂತ್‌ ಅವರ ಪತ್ನಿ ಕಾವ್ಯಾ (30), ಅತ್ತೆ ಗಂಗಮ್ಮ (50) ಹಾಗೂ ಪುತ್ರಿಯರಾದ ಹನ್ಸಿಕಾ (4), ಮನಸ್ವಿ (2) ಮೃತ ದುರ್ದೈವಿಗಳು. ಯಶವಂತ್‌ ಹಾಗೂ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸ್ಕಾರ್ಪಿಯೋ ಡಿಕ್ಕಿ, ಬೈಕ್‌ ಸವಾರನಿಗೆ ತೀವ್ರ ಗಾಯ

ಚಿಕ್ಕಬಳ್ಳಾಪುರ : ನಗರ ಹೊರವಲಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆಯೇ ಬೈಕ್ ಸವಾರನ ನಿರ್ಲಕ್ಷ್ಯದಿಂದ ಸ್ಕಾರ್ಪಿಯೋ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು ಬೈಕ್ ಪುಡಿಪುಡಿ ಯಾಗಿದ್ದು ಸವಾರನಿಗೆ ಕಾಲು ಮುರಿದಿದ್ದು ತಲೆ ಕೈಗೆ ತೀವ್ರತರವಾದ ಪೆಟ್ಟಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ನಾರಾಯಸ್ವಾಮಿ ಮತ್ತು ಅವರ ಧರ್ಮಪತ್ನಿ ಸ್ಕಾರ್ಪಿಯೋ ಕಾರಲ್ಲಿ ನಾಮಕರಣ ಕಾರ್ಯಕ್ರಮಕ್ಕೆಂದು ಶಿಡ್ಲಘಟ್ಟದ ಕಡೆ ಹೋಗುತ್ತಿದ್ದರು. ಇದೇ ಮಾರ್ಗದಲ್ಲಿ ಹೋಗುತ್ತಿದ್ದ ಕೆಎ 03 ಜೆಟಿ 1328 ನೋಂದಣಿ ಸಂಖ್ಯೆಯುಳ್ಳ ಹೀರೋ ಫ್ಯಾಷನ್ ಪ್ರೋ ಬೈಕ್ ಸವಾರ ಯಾವ ಸಿಗ್ನಲ್ ನೀಡದೆ ಏಕಾಏಕಿ ಎಡದಿಂದ ಬಲಕ್ಕೆ ವಾಹನವನ್ನು ತಿರುಗಿಸಿದ್ದಾರೆ. ದ್ವಿಚಕ್ರ ವಾಹನದ ಹಿಂದೆಯೇ ಇದ್ದ ಸ್ಕಾರ್ಪಿಯೋ ಕಾರು ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಿಕ್ಕಬಳ್ಳಾಪುರದತ್ತ ಬರುತ್ತಿದ್ದ ಹೋಂಡಾ ಆಕ್ಟಿವಾ ಗಾಡಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಗಾಡಿ ಜಖಂ ಆಗಿದ್ದರೆ ಬೈಕ್ ಸವಾರ ಕಾರಿನ ಕೆಳಗೆ ಸಿಕ್ಕಿಕೊಂಡಿದ್ದರಿಂದ ತೀವ್ರ ಸ್ವರೂಪದ ಗಾಯಗಳಾಗಿ ಆಸ್ಪತ್ರೆ ಪಾಲಾಗುವಂತೆ ಆಗಿದೆ.

ಇದನ್ನೂ ಓದಿ: Road Accident: ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು