Central Bank of India Recruitment 2025: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ 266 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Central Bank of India Recruitment 2025: ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶೀಯ ಮಟ್ಟದಲ್ಲಿ ಒಟ್ಟು 266 ಆಫೀಸರ್‌ ಹುದ್ದೆ ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ. 9 ಕೊನೆಯ ದಿನ.

Central Bank of India Recruitment 2025
Profile Ramesh B January 21, 2025 133

ಬೆಂಗಳೂರು: ಪದವಿ ವಿದ್ಯಾರ್ಹತೆ ಹೊಂದಿ ಬ್ಯಾಂಕ್‌ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ದೇಶಾದ್ಯಂತ ಸುಮಾರು 4,500ಕ್ಕೂ ಹೆಚ್ಚು ಶಾಖೆ ಹೊಂದಿರುವ, ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ (Central Bank of India) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Central Bank of India Recruitment 2025). ದೇಶೀಯ ಮಟ್ಟದಲ್ಲಿ ಒಟ್ಟು 266 ಆಫೀಸರ್‌ ಹುದ್ದೆ ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ. 9 ಕೊನೆಯ ದಿನ (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಝೋನ್‌ ಬೇಸ್ಡ್‌ ಆಫೀಸರ್‌ (ಅಸಿಸ್ಟಂಟ್‌ ಮ್ಯಾನೇಜರ್‌) ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶವನ್ನು ಒಳಗೊಂಡ ಹೈದರಾಬಾದ್‌ ಝೋನ್‌ನಲ್ಲೇ ಒಟ್ಟು 42 ಹುದ್ದೆಗಳಿವೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಮಹಿಳಾ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಇತರ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 850 ರೂ. ಅನ್ನು ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ

ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆಯು ಇಂಗ್ಲಿಷ್‌ ಭಾಷೆ, ಬ್ಯಾಂಕಿಂಗ್‌ ನಾಲೆಡ್ಜ್‌, ಕಂಪ್ಯೂಟರ್‌ ನಾಲೆಡ್ಜ್‌, ಪ್ರೆಸಂಟ್‌ ಎಕಾನಾಮಿಕ್‌ ಮತ್ತು ಜನರಲ್ ಎವರ್ನೆಸ್‌ ಮುಂತಾದ ವಿಷಯಗಳ ಪ್ರಶ್ನೆಗಳನ್ನು ಒಳಗೊಂಡಿದೆ. ಲಿಖಿತ ಪರೀಕ್ಷೆ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಆಯ್ಕೆಯಾದವರಿಗೆ 48,480 ರೂ. - 85,920 ರೂ. ಮಾಸಿಕ ವೇತನ ದೊರೆಯಲಿದೆ.

Central Bank of India Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(
https://ibpsonline.ibps.in/cbijan25/)

* ಹೆಸರು ನೋಂದಾಯಿಸಿ.

* ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹವಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: centralbankofindia.co.inಕ್ಕೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: BOB Recruitment 2025: ಬ್ಯಾಂಕ್‌ ಆಫ್‌ ಬರೋಡಾದ 1,267 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ