IND vs PAK: ಪಾಕಿಸ್ತಾನ ವಿರುದ್ಧ ಭಾರತ ತಂಡ ಸೋಲಬೇಕೆಂದ ಅತುಲ್ ವಾಸನ್!
IND vs PAK: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 23 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಗೆಲ್ಲಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ಅತುಲ್ ವಾಸನ್ ಬಯಸಿದ್ದಾರೆ.

ಪಾಕಿಸ್ತಾನ ವಿರುದ್ಧ ಭಾರತ ತಂಡ ಸೋಲಬೇಕೆಂದು ಅತುಲ್ ವಾಸನ್ ಆಗ್ರಹಿಸಿದ್ದಾರೆ.

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಭಾನುವಾರ ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಇಡೀ ಕ್ರಿಕೆಟ್ ಜಗತ್ತು ಎದುರು ನೋಡುತ್ತಿದೆ. ಭಾರತದ ಕೋಟ್ಯಾಂತರ ಅಭಮಾನಿಗಳು ಪಾಕ್ ಎದುರು ಟೀಮ್ ಇಂಡಿಯಾ ಗೆಲ್ಲಬೇಕೆಂದು ಬಯಸುತ್ತಿದೆ. ಆದರೆ, ಭಾರತ ತಂಡದ ಮಾಜಿ ವೇಗಿ ಅತುಲ್ ವಾಸನ್ ಅವರು, ಈ ಪಂದ್ಯದ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಭಾರತ ವಿರುದ್ದದ ಪಂದ್ಯವನ್ನು ಪಾಕಿಸ್ತಾನ ತಂಡ ಗೆಲ್ಲಬೇಕೆಂದು ಅವರು ಬಯಸುತ್ತಿದ್ದಾರೆ.
ಭಾರತದ ಮಾಜಿ ವೇಗಿ ಅತುಲ್ ವಾಸನ್, ಇಂಡೋ-ಪಾಕ್ ಪಂದ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಸೋತರೆ, ಟೂರ್ನಿ ಇನ್ನಷ್ಟು ರೋಮಾಂಚನಕಾರಿಯಾಗುತ್ತದೆ. ಏಕೆಂದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಬಹಳ ಕಡಿಮೆ ಪಂದ್ಯಗಳು ನಡೆಯುತ್ತವೆ. ಒಂದು ವೇಳೆ ಪಾಕಿಸ್ತಾನ ತಂಡ ಸೋತು ಟೂರ್ನಿಯಿಂದ ಹೊರ ಬಿದ್ದರೆ ಟೂರ್ನಿಯು ಆಸಕ್ತಿಯನ್ನು ಕಳೆದುಕೊಳ್ಳುತ್ತದೆ," ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.
IND vs PAK: ವರುಣ್ ಚಕ್ರವರ್ತಿ ಇನ್? ಭಾರತದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ ನಿರೀಕ್ಷೆ!
ಪಾಕ್ ಎದುರು ಭಾರತ ಸೋಲಬೇಕೆನ್ನಲು ಕಾರಣ ತಿಳಿಸಿದ ಅತುಲ್
ಪಾಕಿಸ್ತಾನ ವಿರುದ್ಧ ಭಾರತ ತಂಡದ ಸೋಲಿಗೆ ಮಾಜಿ ಕ್ರಿಕೆಟಿಗ ಅತುಲ್ ವಾಸನ್ ವಿಶೇಷ ಕಾರಣ ನೀಡಿದ್ದಾರೆ. "ಪಾಕಿಸ್ತಾನ ತಂಡ ಭಾರತಕ್ಕಿಂತ ತುಂಬಾ ದುರ್ಬಲವಾಗಿದೆ. ಒಂದು ವೇಳೆ ಟೀಮ್ ಇಂಡಿಯಾ ಆತಿಥೇಯರ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿದರೆ, ಟೂರ್ನಿಯ ರೋಮಾಂಚನ ಕೊನೆಗೊಳ್ಳುತ್ತದೆ. ಅದು ಅಮಿತಾಬ್ ಬಚ್ಚನ್ ಖಳನಾಯಕನ ವಿರುದ್ಧ ಹೊಡೆತ ತಿನ್ನದೆ ಗೆದ್ದಂತೆ ಇರುತ್ತದೆ," ಎಂದು ತಿಳಿಸಿದ್ದಾರೆ ಮಾಜಿ ವೇಗಿ.
I want Pakistan to win against India. Then there will be fun in the tournament - Atul Wassan
— Amit T (@amittalwalkar) February 22, 2025
pic.twitter.com/PM3IWBtdmM
"ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ", ಎಂದ ಅತುಲ್ ವಾಸನ್, "ಭಾರತ ವಿರುದ್ಧ ಸೋತರೆ ಪಾಕಿಸ್ತಾನ ಸೆಮಿಫೈನಲ್ ರೇಸ್‌ನಿಂದ ಹೊರಗುಳಿಯುತ್ತದೆ. ಒಂದು ವೇಳೆ ಗೆದ್ದರೆ ಅಭಿಮಾನಿಗಳು ಮತ್ತೊಮ್ಮೆ ಈ ಎರಡೂ ತಂಡಗಳ ನಡುವಿನ ಜಿದ್ದಾಜಿದ್ದಿಯನ್ನು ನೋಡುವ ಅವಕಾಶವನ್ನು ಪಡೆಯಲಿದ್ದಾರೆ. ಅದು ಕ್ರಿಕೆಟ್‌ಗೆ ಒಳ್ಳೆಯದು. ಅದಕ್ಕಾಗಿಯೇ ಫೆಬ್ರವರಿ 23 ರಂದು ನಡೆಯುವ ಪಂದ್ಯವನ್ನು ಪಾಕಿಸ್ತಾನ ಗೆಲ್ಲಬೇಕೆಂದು ನಾನು ಬಯಸುತ್ತೇನೆ," ಎಂದು ಅತುಲ್ ವಾಸನ್ ಹೇಳಿದ್ದಾರೆ.
IND vs PAK: ಇಂಡೋ-ಪಾಕ್ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಹವಾಮಾನ ವರದಿ ಹೇಗಿದೆ?
ಪಾಕಿಸ್ತಾನ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ/ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಮತ್ತು ಮೊಹಮ್ಮದ್ ಶಮಿ.
ಭಾರತ ಪಂದ್ಯಕ್ಕೆ ಪಾಕಿಸ್ತಾನ ತಂಡದ ಸಂಭಾವ್ಯ ಪ್ಲೇಯಿಂಗ್ XI
ಇಮಾಮ್ ಉಲ್ ಹಕ್, ಬಾಬರ್ ಆಝಮ್, ಕಮ್ರಾನ್ ಗುಲಾಮ್, ಮೊಹಮ್ಮದ್ ರಿಝ್ವಾನ್ (ನಾಯಕ, ವಿ.ಕೀ), ಸಲ್ಮಾನ್ ಅಘಾ, ಸೌದ್ ಶಕೀಲ್, ಖುಷ್ದಿಲ್ ಶಾ, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್