Champions Trophy 2025: ಪಾಕಿಸ್ತಾನ vs ಬಾಂಗ್ಲಾದೇಶ ಪಂದ್ಯ ಮಳೆಗೆ ಬಲಿ!
PAK vs BAN Match Abandoned: ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆಯಬೇಕಾಗಿದ್ದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯ ಮಳೆಯ ಕಾರಣ ಟಾಸ್ ಕಾಣದೆ ಅಂತ್ಯವಾಗಿದೆ. ಆ ಮೂಲಕ ಕನಿಷ್ಠ ಕೊನೆಯ ಪಂದ್ಯವನ್ನಾದರೂ ಗೆದ್ದು ಟೂರ್ನಿಯ ಅಭಿಯಾನವನ್ನು ಮುಗಿಸಲು ಎದುರು ನೋಡುತ್ತಿದ್ದ ಪಾಕ್‌ಗೆ ನಿರಾಶೆಯಾಗಿದೆ.

PAK vs BAN Match Abandoned

ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ (PAK vs BAN) ತಂಡಗಳ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ (ICC Champions Trophy 2025) ಕೊನೆಯ ಲೀಗ್ ಪಂದ್ಯ ಮಳೆಗೆ ಬಲಿಯಾಯಿತು. ಆ ಮೂಲಕ ಕನಿಷ್ಠ ಪಂದ್ಯವನ್ನು ಗೆದ್ದು ಟೂರ್ನಿಯ ಅಭಿಯಾನವನ್ನು ಮುಗಿಸಲು ಎದುರು ನೋಡುತ್ತಿದ್ದ ಆತಿಥೇಯ ಪಾಕಿಸ್ತಾನ ತಂಡಕ್ಕೆ ಭಾರಿ ನಿರಾಶೆಯಾಯಿತು.
ಆತಿಥೇಯ ಪಾಕಿಸ್ತಾನ ತಂಡ ಪ್ರಸಕ್ತ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ತಂಡವಾಗಿ ಎಂಟ್ರಿಕೊಟ್ಟಿತ್ತು. ಆದರೆ, ತನ್ನ ಮೊದಲನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳಿಂದ ಭಾರಿ ಅಂತರದಲ್ಲಿ ಸೋಲು ಅನುಭವಿಸಿತ್ತು. ನಂತರ ತನ್ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ, ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಆ ಮೂಲಕ ಸೆಮಿಫೈನಲ್ ರೇಸ್‌ನಿಂದ ಹೊರ ಬಿದ್ದಿತ್ತು. ಇದೀಗ ಕೊನೆಯ ಪಂದ್ಯದಲ್ಲಿ ಗೆಲ್ಲಲು ಎದುರು ನೋಡುತ್ತಿದ್ದ ಮೊಹಮ್ಮದ್ ರಿಝ್ವಾನ್‌ಗೆ ಪಡೆಗೆ ಬಾರಿ ನಿರಾಶೆಯಾಯಿತು.
ಪಾಕಿಸ್ತಾನ ತಂಡಕ್ಕೆ ಕೋಚ್ ಆಗಲು ಸಿದ್ದ ಎಂದ ಯುವರಾಜ್ ಸಿಂಗ್ ತಂದೆ ಯೋಗರಾಜ್!
ಅಂದ ಹಾಗೆ ಬಾಂಗ್ಲಾದೇಶ ತಂಡದ ಸಂಗತಿಗಳು ಕೂಡ ಪಾಕಿಸ್ತಾನ ತಂಡದ ರೀತಿ ನಡೆದಿದೆ. ತನ್ನ ಮೊದಲನೇ ಪಂದ್ಯದಲ್ಲಿ ಭಾರತ ತಂಡದ ಎದುರು ಆರು ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ನಂತರ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯ ಮಳೆಗೆ ಬಲಿಯಾಗಿದೆ. ಆ ಮೂಲಕ ಎರಡೂ ತಂಡಗಳು ಒಂದೊಂದು ಅಂಕವನ್ನು ಹಂಚಿಕೊಂಡಿವೆ.
ಸೆಮಿಫೈನಲ್‌ಗೆ ಅರ್ಹತೆ ಪಡೆದಿರುವ ಭಾರತ-ನ್ಯೂಜಿಲೆಂಡ್
ಪಾಕಿಸ್ತಾನ, ಬಾಂಗ್ಲಾದೇಶ ತಂಡಗಳನ್ನು ಒಳಗೊಂಡಿರುವ ಟೂರ್ನಿಯ ಗ್ರೂಪ್ ಎನಿಂದ ಬಲಿಷ್ಠ ತಂಡಗಳಾದ ಭಾರತ ಹಾಗೂ ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟಿವೆ. ಭಾರತ ತಂಡ ತನ್ನ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಅಂತಿಮ ನಾಲ್ಕಕ್ಕೆ ಲಗ್ಗೆ ಇಟ್ಟಿದ್ದರೆ, ನ್ಯೂಜಿಲೆಂಡ್ ತಂಡ ಕೂಡ ತನ್ನ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಇದೀಗ ಗ್ರೂ ಬಿ ನಲ್ಲಿ ಸೆಮಿಫೈನಲ್ ರೇಸ್‌ನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ಅಫಘಾನಿಸ್ತಾನ ತಂಡಗಳಿವೆ. ಈ ಮೂರು ತಂಡಗಳ ಪೈಕಿ ಎರಡು ತಂಡಗಳು ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶ ಮಾಡಲಿವೆ.