Champions Trophy 2025: ಉದ್ಘಾಟನಾ ಪಂದ್ಯದಲ್ಲಿ ಪಾಕ್-ಕಿವೀಸ್ ಕಾದಾಟ!
PAK vs NZ Match Preview: ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಇನ್ನು ಕ್ಷಣಗಣನೆ ಶುರುವಾಗಿದೆ. ಬುಧವಾರ ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುವ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದ ಬಗ್ಗೆ ಪ್ರಮುಖ ಸಂಗತಿಗಳನ್ನು ಇಲ್ಲಿ ವಿವರಿಸಲಾಗಿದೆ.

ಪಾಕಿಸ್ತಾನ vs ನ್ಯೂಜಿಲೆಂಡ್

ಕರಾಚಿ: ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಕಣ್ತುಂಬಿಸಿಕೊಳ್ಳುವ ಸಮಯ ಬಂದಾಗಿದೆ. ಬುಧವಾರ ಇಲ್ಲಿನ ಕರಾಚಿ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿದೆ. ಇತ್ತೀಚೆಗೆ ಅಂತ್ಯವಾಗಿದ್ದ ತ್ರಿಕೋನ ಏಕದಿನ ಸರಣಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ನ್ಯೂಜಿಲೆಂಡ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಕಿವೀಸ್ ಎದುರು ನೋಡುತ್ತಿದೆ.
ಆದರೆ, ಮೊದಲನೇ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದೆ. ಪ್ರಮುಖ ವೇಗಿ ಲಾಕಿ ಫರ್ಗ್ಯೂಸನ್ ಅವರು ಗಾಯದ ಕಾರಣ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಸಂಪೂರ್ಣವಾಗಿ ಹೊರ ಬಿದ್ದಿದ್ದಾರೆ. ಭಾನುವಾರ ಅಫಘಾನಿಸ್ತಾನ ವಿರುದ್ದ ನಡೆದಿದ್ದ ಅಭ್ಯಾಸ ಪಂದ್ಯದಲ್ಲಿ ಫರ್ಗ್ಯೂಸನ್ ಗಾಯಕ್ಕೆ ತುತ್ತಾಗಿದ್ದರು. ಫರ್ಗ್ಯೂಸನ್ ತವರಿಗೆ ಮರಳಿದ್ದು, ಅವರ ಸ್ಥಾನವನ್ನು ಕೈಲ್ ಜೇಮಿಸನ್ ತುಂಬಿದ್ದಾರೆ. ಜೇಢಮಿಸನ್ 2023ರಲ್ಲಿ ಕೊನೆಯ ಬಾರಿ ಏಕದಿನ ಪಂದ್ಯವನ್ನು ಆಡಿದ್ದರು.
ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಫರ್ಗುಸನ್: ಜೇಮಿಸನ್ ಬದಲಿ ಆಟಗಾರ
ಗಾಯದ ಕಾರಣ ಏಕದಿನ ತ್ರಿಕೋನ ಸರಣಿಯಿಂದ ಹೊರಗುಳಿದಿದ್ದ ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಅವರು ಸಂಪೂರ್ಣವಾಗಿ ಫಿಟ್‌ನೆಸ್‌ಗೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಇದು ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆಯನ್ನು ತಂದೊಡ್ಡಿದೆ. ತ್ರಿಕೋನ ಸರಣಿ ಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಪಾಕಿಸ್ತಾನ ತಂಡ ಎದುರು ನೋಡುತ್ತಿದೆ.
ಪಿಚ್ ರಿಪೋರ್ಟ್, ಹವಾಮಾನ ವರದಿ
ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ನಡೆಯುವ ಕರಾಚಿಯ ನ್ಯಾಷನಲ್ ಸ್ಟೇಡಿಯಂ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಈ ಹಿನ್ನೆಲೆಯಲ್ಲಿ ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯವಿದೆ. ಪಂದ್ಯದ ಆರಂಭದಲ್ಲಿ ಪಿಚ್ ಸೀಮರ್‌ಗಳಿಗೆ ನೆರವು ನೀಡಲಿದೆ. ಆದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ನೆರವು ನೀಡಲಿದೆ. ಅಂದ ಹಾಗೆ ಸ್ಪಿನ್ನರ್‌ಗಳಿಗೂ ಕೂಡ ಪಿಚ್ ಸಹಕಾರಿಯಾಗಲಿದೆ. ಇಲ್ಲಿನ ವಾತಾವರಣ ಪಂದ್ಯಕ್ಕೆ ಅನುಕೂಲಕರವಾಗಿದೆ. ಪಂದ್ಯದ ವೇಳೆ 20 ಡಿಗ್ರಿ ಸೆಲ್ಸಿಯಸ್ ಇದ್ದು, ಮಳೆ ಬೀಳುವ ಸಾಧ್ಯತೆ ಇಲ್ಲ.
ICC Champions Trophy: 'ಮಿನಿ ವಿಶ್ವಕಪ್' ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ
ಪಾಕಿಸ್ತಾನ ಸಂಭಾವ್ಯ ಪ್ಲೇಯಿಂಗ್ XI
ಫಖಾರ್ ಝಮಾನ್, ಬಾಭರ್ ಆಝಮ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್ (ನಾಯಕ, ವಿಕೆಟ್ ಕೀಪರ್), ಸಲ್ಮಾನ್ ಅಘಾ, ತಯಾಬ್ ತಾಹಿರ್, ಖುಷ್ದಿಲ್ ಶಾ, ಶಹೀನ್ ಶಾ ಅಫ್ರದಿ, ನಸೀಮ್ ಶಾಮ ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್
ನ್ಯೂಜಿಲೆಂಡ್ ಸಂಭಾವ್ಯ ಪ್ಲೇಯಿಂಗ್ XI
ವಿಲ್ ಯಂಘ್, ಡೆವೋನ್ ಕಾನ್ವೇ, ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚಲೆ ಸ್ಯಾಂಟ್ನರ್, ನೇಥನ್ ಲಯಾನ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್
India at ICC Champions Trophy: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಸಾಧನೆಯ ಹಿನ್ನೋಟ
ಪಂದ್ಯದ ವಿವರ
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ
ಮೊದಲನೇ ಪಂದ್ಯ
ಪಾಕಿಸ್ತಾನ vs ನ್ಯೂಜಿಲೆಂಡ್
ದಿನಾಂಕ: ಫೆಬ್ರವರಿ 19, 2025
ಸಮಯ: ಮಧ್ಯಾಹ್ನ 02: 30 ಕ್ಕೆ
ಸ್ಥಳ: ನ್ಯಾಷನಲ್ ಸ್ಟೇಡಿಯಂ, ಕರಾಚಿ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್