ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾಂಪಿಯನ್ಸ್‌ ಟ್ರೋಫಿಗೆ ಸಿದ್ಧಗೊಳ್ಳದ ಪಾಕ್‌ ಕ್ರೀಡಾಂಗಣ; ಜ.30 ಅಂತಿಮ ಗಡುವು

ICC Champions Trophy: ಕ್ರೀಡಾಂಗಣಗಳ ನವೀಕರಣ ಕೆಲಸ ಪೂರ್ತಿಗೊಳಿಸಲು ಐಸಿಸಿ, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಜ.30ರ ಗುಡುವು ನೀಡಿತ್ತು. ಆದರೆ ಇನ್ನೂ ಕೆಲಸ ಬಾಕಿ ಇರುವ ಕಾರಣ ಕೆಲವು ಪಂದ್ಯವನ್ನು ದುಬೈಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Champions Trophy

ನವದೆಹಲಿ: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ(ICC Champions Trophy) ಆರಂಭಕ್ಕೆ ಇನ್ನು ಕೇವಲ 21 ದಿನಗಳು ಮಾತ್ರ ಬಾಕಿ ಉಳಿದಿವೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ 8 ತಂಡಗಳ ಪೈಕಿ 7 ರಾಷ್ಟಗಳು ಈಗಾಗಲೇ ತಂಡವನ್ನು ಪ್ರಕಟಿಸಿದೆ. ಆದರೆ ಪಾಕಿಸ್ತಾನ ಇನ್ನೂ ತನ್ನ ತಂಡವನ್ನು ಪ್ರಕಟಿಸಿಲ್ಲ. ಇದೀಗ ಪಂದ್ಯಾವಳಿ ನಡೆಯುವ ಕರಾಚಿ, ಲಹೋರ್‌ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳ ನವೀಕರಣ ಕಾರ್ಯ ಸಂಪೂರ್ಣಗೊಂಡಿಲ್ಲ.

ಕ್ರೀಡಾಂಗಣಗಳ ನವೀಕರಣ ಕೆಲಸ ಪೂರ್ತಿಗೊಳಿಸಲು ಐಸಿಸಿ, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಜ.30ರ ಗುಡುವು ನೀಡಿತ್ತು. ಆದರೆ ಇನ್ನೂ ಕೆಲಸ ಬಾಕಿ ಇರುವ ಕಾರಣ ಕೆಲವು ಪಂದ್ಯವನ್ನು ದುಬೈಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಪಾಕ್‌ ಕ್ರಿಕೆಟ್‌ ಮಂಡಳಿ ಮಾತ್ರ ಯಾವುದೇ ವರದಿಗೆ ಕಿವಿಗೊಡಬೇಡಿ ಎಂದು ಹೇಳುತ್ತಲೇ ಬಂದಿದೆ. ಇಂದಿನಿಂದ ಪಂದ್ಯಾವಳಿಗಳ ಟಿಕೆಟ್‌ ಮಾರಾಟ ಕೂಡ ಆರಂಭಗೊಳಿಸಲು ಪಿಸಿಬಿ ನಿರ್ಧರಿಸಿದೆ. ಭಾರತದ ಪಂದ್ಯಗಳು ತಟಸ್ಥ ತಾಣವಾದ ದುಬೈನಲ್ಲಿ ನಡೆಯಲಿದೆ.

ಇದನ್ನೂ ಓದಿ ಚಾಂಪಿಯನ್ಸ್‌ ಟ್ರೋಫಿಗೆ ಬುಮ್ರಾ ಅನುಮಾನ?; ಬದಲಿ ಬೌಲರ್‌ ಸಿದ್ಧಪಡಿಸಿದ ಬಿಸಿಸಿಐ!

ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಭಾರತ ಒಳಗೊಂಡ 3 ಲೀಗ್​ ಪಂದ್ಯಗಳು ಮತ್ತು ಒಂದು ಸೆಮಿಫೈನಲ್​ ಪಂದ್ಯ ದುಬೈನಲ್ಲಿ ನಿಗದಿಯಾಗಿದೆ. ಟೂರ್ನಿಯ ಉಳಿದ 9 ಲೀಗ್​ ಮತ್ತು ಇನ್ನೊಂದು ಸೆಮಿಫೈನಲ್​ ಪಂದ್ಯ ಪಾಕಿಸ್ತಾನದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್​ನಲ್ಲಿ ನಿಗದಿಯಾಗಿವೆ. 2ನೇ ಸೆಮಿಫೈನಲ್​ ಮಾರ್ಚ್​ 2ರಂದು ಲಾಹೋರ್​ನಲ್ಲಿ ನಿಗದಿಯಾಗಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್​ ರಾಬಿನ್​ ಲೀಗ್​ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್​ಗೇರಲಿವೆ.

ವೇಳಾಪಟ್ಟಿ

ಫೆ.19 ಪಾಕಿಸ್ತಾನ-ನ್ಯೂಜಿಲ್ಯಾಂಡ್‌, ಸ್ಥಳ: ಕರಾಚಿ

ಫೆ. 20 ಬಾಂಗ್ಲಾದೇಶ-ಭಾರತ, ಸ್ಥಳ: ದುಬೈ

ಫೆ. 21 ಅಫ್ಘಾನಿಸ್ತಾನ-ದ. ಆಫ್ರಿಕಾ, ಸ್ಥಳ: ಕರಾಚಿ

ಫೆ. 22 ಆಸ್ಟ್ರೆಲಿಯಾ-ಇಂಗ್ಲೆಂಡ್, ಸ್ಥಳ:​ ಲಾಹೋರ್

ಫೆ. 23 ಭಾರತ-ಪಾಕಿಸ್ತಾನ,ಸ್ಥಳ: ದುಬೈ

ಫೆ. 24 ಬಾಂಗ್ಲಾದೇಶ-ನ್ಯೂಜಿಲ್ಯಾಂಡ್‌, ಸ್ಥಳ:​ ರಾವಲ್ಪಿಂಡಿ

ಫೆ. 25 ಅಸ್ಟ್ರೆಲಿಯಾ-ದ. ಆಫ್ರಿಕಾ,ಸ್ಥಳ: ರಾವಲ್ಪಿಂಡಿ

ಫೆ. 26 ಅಫ್ಘಾನಿಸ್ತಾನ-ಇಂಗ್ಲೆಂಡ್,ಸ್ಥಳ:​ ಲಾಹೋರ್

ಫೆ. 27 ಪಾಕಿಸ್ತಾನ-ಬಾಂಗ್ಲಾದೇಶ,ಸ್ಥಳ: ರಾವಲ್ಪಿಂಡಿ

ಫೆ. 28 ಅಫ್ಘಾನಿಸ್ತಾನ-ಆಸ್ಟ್ರೆಲಿಯಾ,ಸ್ಥಳ: ಲಾಹೋರ್​

ಮಾ. 1 ದಕ್ಷಿಣ ಆಫ್ರಿಕಾ-ಇಂಗ್ಲೆಂಡ್,ಸ್ಥಳ:​ ಕರಾಚಿ

ಮಾ. 2 ಭಾರತ-ನ್ಯೂಜಿಲ್ಯಾಂಡ್‌, ಸ್ಥಳ:​ ದುಬೈ

ಮಾ. 4 ಸೆಮಿಫೈನಲ್-1, ಸ್ಥಳ: ದುಬೈ

ಮಾ. 5 ಸೆಮಿಫೈನಲ್​-2, ಸ್ಥಳ: ಲಾಹೋರ್​

ಮಾ. 9 ಫೈನಲ್​ -ಸ್ಥಳ: ದುಬೈ/ಲಾಹೋರ್