ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

IND vs PAK: ವರುಣ್‌ ಚಕ್ರವರ್ತಿ ಇನ್‌? ಭಾರತದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ನಿರೀಕ್ಷೆ!

India Probable Playing XI For IND vs PAK: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಭಾನುವಾರ ದುಬೈ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುವ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವನೆ ಸಾಧ್ಯತೆ ಇದೆ.

ಪಾಕಿಸ್ತಾನ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ನಿರೀಕ್ಷೆ!

India's Playing XI

Profile Ramesh Kote Feb 22, 2025 6:58 PM

ದುಬೈ: ಬಾಂಗ್ಲಾದೇಶ ವಿರುದ್ಧ ತನ್ನ ಮೊದಲನೇ ಪಂದ್ಯವನ್ನು ಗೆದ್ದು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ಭಾರತ ತಂಡ, ಭಾನುವಾರ ಇಲ್ಲಿನ ದುಬೈ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುವ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಟ ನಡೆಸಲಿದೆ. ನ್ಯೂಜಿಲೆಂಡ್‌ ವಿರುದ್ಧ ಈಗಾಗಲೇ ತನ್ನ ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಪಾಕಿಸ್ತಾನ ತಂಡ, ನಾಕ್‌ಔಟ್‌ ಹಂತವನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ, ಭಾರತದ ಎದುರು ಗೆಲ್ಲಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದು ಪಾಕ್‌ ಪಾಲಿಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಹೈವೋಲ್ಟೇಜ್‌ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ವಿಶ್ವದಾದ್ಯಂತ ಕ್ರಿಕೆಟ್‌ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಇಬ್ಬರು ಸ್ಪಿನ್‌ ಆಲ್‌ರೌಂಡರ್‌ಗಳು ಹಾಗೂ ಪೂರ್ಣ ಪ್ರಮಾಣದ ಸ್ಪಿನ್ನರ್‌ ಆಗಿ ಕುಲ್ದೀಪ್‌ ಯಾದವ್‌ ಅವರನ್ನು ಆಡಿಸಲಾಗಿತ್ತು. ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಬದಲಾವಣೆಯನ್ನು ನಿರೀಕ್ಷೆ ಮಾಡಬಹುದಾಗಿದೆ.

IND vs PAK: ಪಾಕ್‌ ಪಂದ್ಯಕ್ಕೂ ಮುನ್ನ ಕೊಹ್ಲಿ ವಿಶೇಷ ಟ್ರೈನಿಂಗ್; 3 ಗಂಟೆ ಮೊದಲೇ ಅಭ್ಯಾಸ

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಮೊಹಮ್ಮದ್‌ ಶಮಿ 5 ವಿಕೆಟ್‌ ಸಾಧನೆ ಮಾಡಿದ್ದರೆ, ಬ್ಯಾಟಿಂಗ್‌ನಲ್ಲಿ ಶುಭಮನ್‌ ಗಿಲ್‌ ಶತಕ ಸಿಡಿಸಿ ಮಿಂಚಿದ್ದರು. ಆದರೆ, ಹಿರಿಯ ಬ್ಯಾಟ್ಸ್‌ಮನ್‌ಗಳಾದ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಶ್ರೇಯಸ್‌ ಅಯ್ಯರ್‌ ನಿರೀಕ್ಷಿತ ಬ್ಯಾಟಿಂಗ್‌ ಪ್ರದರ್ಶನ ತೋರಿರಲಿಲ್ಲ. ಗಿಲ್‌ ಮತ್ತು ರೋಹಿತ್‌ ಇನಿಂಗ್ಸ್‌ ಆರಂಭಿಸಿದರೆ, ವಿರಾಟ್‌ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲಿದ್ದಾರೆ. ಶ್ರೇಯಸ್‌ ಅಯ್ಯರ್‌ ನಾಲ್ಕನೇ ಕ್ರಮಾಂಕದಲ್ಲಿ ಮುಂದುವರಿಯಲಿದ್ದಾರೆ. ವಿಕೆಟಟ್‌ ಕೀಪರ್‌ ಆಗಿ ಕೆಎಲ್‌ ರಾಹುಲ್‌ ಮುಂದುವರಿಯಲಿದ್ದಾರೆ.

ಕೆಳ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್‌ ಪಾಂಡ್ಯ ಸೀಮ್‌ ಬೌಲಿಂಗ್‌ ಆಲ್‌ರೌಂಡರ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ನಂತರದ ಕ್ರಮಾಂಕಗಳಲಿ ಸ್ಪಿನ್‌ ಆಲ್‌ರೌಂಡರ್‌ಗಳಾಗಿ ರವೀಂದ್ರ ಜಡೇಜಾ ಮತ್ತು ಅಕ್ಷರ್‌ ಪಟೇಲ್‌ ಆಡಲಿದ್ದಾರೆ. ಈ ಇಬ್ಬರೂ ಆಟಗಾರರಿಂದ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಕ್ಕೆ ಡೆಪ್ತ್‌ ಸಿಗಲಿದೆ.

IND vs PAK: ಇಂಡೋ-ಪಾಕ್‌ ಪಂದ್ಯದ ಪಿಚ್‌ ರಿಪೋರ್ಟ್‌, ಸಂಭಾವ್ಯ ತಂಡ, ಹವಾಮಾನ ವರದಿ ಹೇಗಿದೆ?

ಕುಲ್ದೀಪ್‌ ಯಾದವ್‌ ಸ್ಥಾನಕ್ಕೆ ವರುಣ್‌ ಚಕ್ರವರ್ತಿ

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ನಿರೀಕ್ಷೆ ಮಾಡಬಹುದಾಗಿದೆ. ಪೂರ್ಣ ಪ್ರಮಾಣದ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಅವರ ಸ್ಥಾನಕ್ಕೆ ವರುಣ್‌ ಚಕ್ರವರ್ತಿಯನ್ನು ಆಡಿಸಬಹುದು. ಇನ್ನು ವೇಗದ ಬೌಲಿಂಗ್‌ ವಿಭಾಗದಲ್ಲಿ ಹರ್ಷಿತ್‌ ರಾಣಾ ಹಾಗೂ ಮೊಹಮ್ಮದ್‌ ಶಮಿ ಆಡಲಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಮತ್ತು ಮೊಹಮ್ಮದ್ ಶಮಿ.