ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆಯಲ್ಲಿ ರೋಹಿತ್‌ ಶರ್ಮ ಹಾಜರ್‌?

Champions Trophy: 'ನಮ್ಮ ಸರಕಾರದಿಂದ ಎಲ್ಲ ನಾಯಕರಿಗೂ ವೀಸಾ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಇದು ಭಾರತ ತಂಡವನ್ನು ಮುನ್ನಡೆಸುವ ಯಾವುದೇ ನಾಯಕರಿಗೂ ಅನ್ವಯಿಸುತ್ತದೆ' ಎಂದು ಪಿಸಿಬಿ ತಿಳಿಸಿದೆ.

Rohit Sharma

ಮುಂಬಯಿ: ಮುಂದಿನ ತಿಂಗಳು ನಡೆಯುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳದಿರುವ ಕಾರಣ ಟೂರ್ನಿಯನ್ನು ಹೈಬ್ರೀಡ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಭಾರತ ಪಾಕ್‌ಗೆ ತೆರಳದಿದ್ದರೂ ಪಾಕ್‌ನಲ್ಲಿ ನಡೆಯುವ ಉದ್ಘಾಟನ ಸಮಾರಂಭದಲ್ಲಿ ಭಾರತದ ನಾಯಕ ರೋಹಿತ್‌ ಶರ್ಮ ಹಾಜರಿರುತ್ತಾರೆ ಎಂದು ವರದಿಯಾಗಿದೆ. ಆದರೆ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಐಸಿಸಿ ಸಂಪ್ರದಾಯದಂತೆ ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 8 ತಂಡಗಳ ನಾಯಕರು ಹಾಜರಿದ್ದು ಫೋಟೋ ಶೂಟ್‌ ಹಾಗೂ ಪಂದ್ಯಾವಳಿಗೂ ಮೊದಲಿನ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕು. ಆದರೆ ಬಿಸಿಸಿಐ ರೋಹಿತ್‌ ಪಾಲ್ಗೊಳ್ಳುವಿಕೆಗೆ ಅವಕಾಶ ನಿಡಲಿದೆಯೇ ಎಂದು ಕಾದು ನೋಡಬೇಕಿದೆ. ಪಿಸಿಬಿ ಪ್ರಕಟನೆಯಂತೆ ಫೆ.16 ಅಥವಾ 17ರಂದು ಉದ್ಘಾಟನ ಸಮಾರಂಭ ನಡೆಯಲಿದೆ.

'ನಮ್ಮ ಸರಕಾರದಿಂದ ಎಲ್ಲ ನಾಯಕರಿಗೂ ವೀಸಾ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಇದು ಭಾರತ ತಂಡವನ್ನು ಮುನ್ನಡೆಸುವ ಯಾವುದೇ ನಾಯಕರಿಗೂ ಅನ್ವಯಿಸುತ್ತದೆ' ಎಂದು ಪಿಸಿಬಿ ತಿಳಿಸಿದೆ.

ಟೂರ್ನಿಯ ಹೈವೋಲ್ಟೇಜ್ ಪಂದ್ಯವಾದ ಭಾರತ ಮತ್ತು ಪಾಕಿಸ್ಥಾನ ನಡುವಿನ ಪಂದ್ಯವು ದುಬೈನಲ್ಲಿ ಫೆ. 23 ರಂದು ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಫೆ.20ರಂದು ಬಾಂಗ್ಲಾದೇಶ ಎದುರು ಸೆಣಸಾಡಲಿದೆ. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

ಮಾ.4 ಮತ್ತು ಮಾ.5ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆಯಲಿವೆ. ಎರಡೂ ಸೆಮಿಫೈನಲ್‌ಗಳಿಗೂ ಮೀಸಲು ದಿನ ಹೊಂದಿದ್ದು, ಮಾ.9ರಂದು ಫೈನಲ್‌ ಪಂದ್ಯ ನಿಗದಿಯಾಗಿದ್ದು, ಮೀಸಲು ದಿನವೂ ಇರಲಿದೆ. ಸೆಮಿಫೈನಲ್‌ಗೆ ಭಾರತ ಅರ್ಹತೆ ಪಡೆದರೆ ಆ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಆದರೆ, ಒಂದೊಮ್ಮೆ ಟೀಂ ಇಂಡಿಯಾ ಫೈನಲ್‌ಗೆ ಅರ್ಹತೆ ಪಡೆಯದಿದ್ದರೆ ಪಾಕಿಸ್ತಾನದ ಲಾಹೋರ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡವು ಫೈನಲ್‌ ಪ್ರವೇಶಿಸಿದರೆ ದುಬೈಯಲ್ಲಿ ನಡೆಯಲಿದೆ.