Self Harming: ಗೆಳೆಯ ಮೋಸ ಮಾಡಿದನೆಂದು ಬರೆದಿಟ್ಟು ಯುವತಿ ಆತ್ಮಹತ್ಯೆ
ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್. ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಬೆಂಗಳೂರು: ಗೆಳೆಯನೊಬ್ಬ ನಂಬಿಸಿ ಮೋಸ ಮಾಡಿದನೆಂದು ಆರೋಪಿಸಿ ಬೆಂಗಳೂರು ವಿಶ್ವವಿದ್ಯಾಲಯ (Bengaluru university) ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು (Student) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್. ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತ ಎಚ್.ಎನ್.ಪಾವನ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿ. ನಾನು ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಆಕೆ ಸಾವಿಗೆ ಮುನ್ನ ಡೆತ್ನೋಟ್ ಬರೆದಿಟ್ಟಿದ್ದಾಳೆ.
ಕಾರ್ಯಕ್ರಮಕ್ಕೆ ತೆರಳಿದ್ದ ಪಾವನ ಅದನ್ನು ಅರ್ಧಕ್ಕೆ ಬಿಟ್ಟು ಬಂದು ಹಾಸ್ಟೆಲ್ನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸ್ಟೆಲ್‌ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಮಾಹಿತಿ ನೀಡಿದ ಬಳಿಕ ಘಟನೆ ಗೊತ್ತಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ವಿದ್ಯಾರ್ಥಿನಿ ಪಾವನ ಶವ ಶಿಫ್ಟ್ ಮಾಡಲಾಗಿದ್ದು, ಪೋಷಕರು ಬೆಂಗಳೂರಿಗೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಕಿವಿ ಚುಚ್ಚುವಾಗ ಎಡವಟ್ಟು ಎಸಗಿದ ವೈದ್ಯರು, ಹಸುಳೆ ಸಾವು
ಚಾಮರಾಜನಗರ : ಕಿವಿ ಚುಚ್ಚಿಸುವಾಗ ವೈದ್ಯರ ಎಡವಟ್ಟಿನಿಂದಾಗಿ 5 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಹಂಗಳ ಗ್ರಾಮದ ಆನಂದ್, ಶುಭಾ ಮಾನಸಾ ಅವರ 5 ತಿಂಗಳ ಮಗುವಿಗೆ ಕಿವಿ ಚುಚ್ಚಿಸಲು ಬೊಮ್ಮಲಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯ ನಾಗರಾಜು ಮಗುವಿಗೆ ಕಿವಿ ಚುಚ್ಚುವ ಮುಂಚೆ 2 ಕಿವಿಗೂ ಅನಸ್ತೇಷಿಯಾ ನೀಡಿದ್ದಾರೆ. ಬಳಿಕ ಮಗು ನಡುಗಲು ಶುರು ಮಾಡಿದೆ. ತಕ್ಷಣ ಡಾ। ನಾಗರಾಜು ಗುಂಡ್ಲುಪೇಟೆ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ಮಾರ್ಗ ಮಧ್ಯೆಯೇ ಮಗು ಮೃತಪಟ್ಟಿದೆ ಎಂದು ಪೋಷಕರು ಹೇಳಿದ್ದಾರೆ.
ಇದನ್ನೂ ಓದಿ: Micro Finanace Torture: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಒಂದೇ ದಿನ ನಾಲ್ವರು ಬಲಿ