Sunday, 13th October 2024

Chikkaballapur News: ಅ.17ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅದ್ದೂರಿ ಆಚರಣೆ-ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ಚಿಕ್ಕಬಳ್ಳಾಪುರ : ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅ.17 ರಂದು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸಂಭ್ರಮ ಸಡಗರದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗು ವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರಿ0ದ ಸಲಹೆಗಳನ್ನು ಸ್ವೀಕರಿಸಿದ ನಂತರ ಅವರು  ಮಾತನಾಡಿದರು.

 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.17 ರಂದು ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ಶ್ರೀರಂಗನಾಥ ಸ್ವಾಮಿ ದೇವಾಲಯದಿಂದ ಆರಂಭಿಸಿ ಬಿಬಿ ರಸ್ತೆ ಮೂಲಕ ಒಕ್ಕಲಿಗರ ಕಲ್ಯಾಣ ಮಂಟಪದವರೆಗೆ ಪಲ್ಲಕ್ಕಿ ಮತ್ತು ಸ್ತಬ್ದ ಚಿತ್ರಗಳು ಹಾಗೂ ಜಾನಪದ ಕಲಾ ತಂಡಗಳೊ0ದಿಗೆ ಬ್ರಹತ್ ಮೆರವಣಿಗೆ ನಡೆಯಲಿದೆ. ನಂತರ  ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ.ಮಹರ್ಷಿ ವಾಲ್ಮೀಕಿ ಅವರ ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಮುದಾಯದ ಸಾಧಕರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಸಮುದಾಯದ  ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಬೇಕು ಜೊತೆಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೈಗೊಳ್ಳುವ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ0ದು ಬೆಳಿಗ್ಗೆ ೯ಗಂಟೆಗೆ ಕಡ್ಡಾಯವಾಗಿ ಆಚರಿಸಿ, ನಂತರ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿ ಸೂಚನಾ ಫಲಕಗಳಲ್ಲಿ ಪ್ರರ್ದಶಿಸ ಬೇಕು.

ಈ  ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ಧತೆ ಮತ್ತು ಅಲಂಕಾರ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ, ಪೋಲೀಸ್ ಬಿಗಿ ಭದ್ರತೆ,ಮಧ್ಯಾಹ್ನದ ಉಪಹಾರ, ನಗರದ ಸ್ವಚ್ಚತೆ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಕಲಾತಂಡಗಳೊAದಿಗೆ ಮೆರವಣಿಗೆ, ಸಾಧಕರ ಆಯ್ಕೆ  ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಮಿತಿಗಳನ್ನು ರಚಿಸಿ ಸಮುದಾಯದ ಮುಖಂಡರಿಗೆ ಮತ್ತು  ಅಧಿಕಾರಿಗಳಿಗೆ ಇಲಾಖಾವಾರು ಕಾರ್ಯಭಾರವನ್ನು ಹಂಚಿಕೆ ಮಾಡಿ  ಸಮರ್ಪಕವಾಗಿ ನಿರ್ವಹಿಸಿ ಯಶಸ್ವಿಗೊಳಿಸಲು  ತಿಳಿಸಿದರು . ಜಯಂತ್ಯೋತ್ಸವಕ್ಕೆ ಯಾವುದೇ ಲೋಪದೋಷವಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಂಬAಧ ಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ನೀಡಿದರು.

ಜಿಲ್ಲೆಯ ಸಮಸ್ತ ನಾಗರಿಕರು, ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ರೈತಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು  ಈ ವೇಳೆ ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಈಶ್ವರಪ್ಪ,ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಪಾಟೀಲ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಶ್ರೀನಿವಾಸ್,` ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ, ಜಿಲ್ಲಾ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಸುಬ್ಬರಾಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗವಿರಾಯಪ್ಪ, ಕಾರ್ಯಾಧ್ಯಕ್ಷರಾದ ಕೆ.ಟಿ ನಾರಾಯಣಸ್ವಾಮಿ, ಕೆ. ಆವಲಕೊಂಡರಾಯಪ್ಪ, ಎಸ್.ಎನ್ ಅಶ್ವತ್ ನಾರಾಯಣ, ಪಿ. ಮುನಿವೆಂಕಟಸ್ವಾಮಿ, ಕೆ. ಎನ್ .ಎಸ್ ನಾರಾಯಣಸ್ವಾಮಿ, ಡಾ.ಬಿ.ಆರ್ ಅಂಬೇಡ್ಕರ್  ರಾಜ್ಯ ಸಂಘಟನಾ ಸಂಚಾಲಕರಾದ ಬಿ. ಎನ್ ಗಂಗಾಧರಪ್ಪ, ಜಾಗೃತಿ ಸಮಿತಿ ಸದಸ್ಯರಾದ ರಾಮಕೃಷ್ಣ, ರತ್ನಮ್ಮ, ಎಂ ವೇಣು, ಸಮುದಾಯದ ಮುಖಂಡರಾದ ಮಠಮಪ್ಪ, ಆರ್. ಮಂಜುಳಮ್ಮ, ಅರುಣ್ ಕುಮಾರ್, ಎಸ್. ರಾಮಕೃಷ್ಣಪ್ಪ, ಜಿ.ಎ ಮೂರ್ತಿ, ಪ್ರಸನ್ನ ಕುಮಾರ್, ಕೆ .ಎ.ಎನ್ ಮೂರ್ತಿ, ಕೆ.ವಿ  ಶ್ರೀನಿವಾಸ, ಎನ್. ನರಸಿಂಹರಾಜು, ಮುನಿಕೃಷ್ಣ, ಎಂ.ಸಿ ಮಂಜುನಾಥ್, ರಘು, ಮೂರ್ತಿ, ವಿ.ಶ್ರೀನಿವಾಸ್ ,ಶ್ರೀನಿವಾಸ ಮೂರ್ತಿ, ನಾರಾಯಣ್, ನೇತ್ರಾವತಿ, ವಾಲ್ಮೀಕಿ ಸಂಘದ  ಪದಾಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: Chikkaballapur News: ಬಾರದ ಮಳೆಯಿಂದಾಗಿ ಬೆಳೆ ನಷ್ಟ, ಬರಪೀಡಿತ ತಾಲೂಕು ಎಂದು ಘೋಷಿಸಲು ಮನವಿ