Drowned: ಚಿಕ್ಕೋಡಿಯಲ್ಲಿ ದುರಂತ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಮುಳುಗಿ ಸಾವು
ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ (Drowned) ಮಾಹಿತಿ ಪೊಲೀಸರಿಗೆ ಸ್ಥಳೀಯರಿಂದ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸುವ ಕಾರ್ಯವನ್ನು ಪೊಲೀಸರು ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ

ಚಿಕ್ಕೋಡಿ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮೇ 3ರ ಶನಿವಾರ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಮಾಹಿತಿ ಪೊಲೀಸರಿಗೆ ಸ್ಥಳೀಯರಿಂದ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸುವ ಕಾರ್ಯವನ್ನು ಪೊಲೀಸರು ಮಾಡಿದ್ದಾರೆ.
ಕೃಷಿಹೊಂಡಗಳು ಆಳವಾಗಿದ್ದು, ವಸತಿ ಪ್ರದೇಶಗಳಿಂದ ದೂರದಲ್ಲಿರುತ್ತವೆ. ಅನೇಕ ಕೃಷಿ ಹೊಂಡಗಳಲ್ಲಿ ಕೆಸರು ಕೂಡ ತೆಗೆಯಲಾಗುತ್ತಿಲ್ಲ. ಈಜು ಸರಿಯಾಗಿ ಬಾರದೆ ಹೊಂಡಕ್ಕೆ ಧುಮುಕುವುದರಿಂದಲೂ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಕುಖ್ಯಾತ ಕಳ್ಳರ ಬಂಧನ, ಲಕ್ಷಾಂತರ ಮೌಲ್ಯದ ಆಭರಣಗಳು ಜಪ್ತಿ
ಬಾಗೇಪಲ್ಲಿ: ಪಟ್ಟಣದ ಪೊಲೀಸರು ಕಳ್ಳತನ ಪ್ರಕರಣಗಳನ್ನು ಬೇಧಿಸಿ ಸುಮಾರು 30 ಲಕ್ಷ ರೂಪಾಯಿಗಳು ಬೆಲೆಬಾಳುವಂತಹ ಚಿನ್ನಾಭರಣಗಳನ್ನು ಹಾಗೂ ೩ ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೆಯೇ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಶುಕ್ರವಾರ ಎಸ್ಪಿ ಕುಶಾಲ್ ಚೌಕ್ಸೆಯವರು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, ಪಟ್ಟಣದ ಹೊರವಲಯದಲ್ಲಿ ತಿಮಾಕಲಹಳ್ಳಿಯಲ್ಲಿ ೨೦೨೩ ರ ಏಪ್ರಿಲ್ ೨೭ ರಂದು ನರಸಿಂಹಮೂರ್ತಿ ಮತ್ತು ೨೮ ರಂದು ಸುಧಾಕರ್ ಎಂಬುವವರ ಮನೆಗಳಲ್ಲಿ ಕಳ್ಳತನಗಳಾಗಿವೆ ಎಂದು ಪೊಲೀಸರಿಗೆ ದೂರು ನೀಡಲಾಗಿರುತ್ತದೆ. ಈ ಪ್ರಕರಣಗಳನ್ನು ಭೇದಿಸಲು ಪೊಲೀಸರು ತಂಡಗಳನ್ನು ರಚನೆ ಮಾಡಿ, ಆರೋಪಿಗಳಿಗಾಗಿ ಪತ್ತೆ ಹಚ್ಚಲಾಗಿದ್ದು, ಕಳುವಾದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತರು ಉಮಾಶಂಕರ್ (೨೭), ಜಗನ್ನಾಥ (೩೩) ಎಂದು ತಿಳಿಸಿದರು.
ಇದನ್ನೂ ಓದಿ: Goa Stampede: ಗೋವಾದ ಜಾತ್ರೆಯಲ್ಲಿ ಕಾಲ್ತುಳಿತ, 7 ಜನ ಸಾವು, 50 ಮಂದಿಗೆ ಗಾಯ