ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಐಪಿಎಲ್‌ ಇತಿಹಾಸದಲ್ಲಿ ವೇಗವಾಗಿ 200 ಸಿಕ್ಸರ್‌ ಸಿಡಿಸಿದ ಟಾಪ್‌ 5 ಬ್ಯಾಟ್ಸ್‌ಮನ್‌ಗಳು!

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಕೆಎಲ್‌ ರಾಹುಲ್‌ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200 ಸಿಕ್ಸರ್‌ ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಒಟ್ಟಾರೆ ಐಪಿಎಲ್‌ ಟೂರ್ನಿಯಲ್ಲಿ ವೇಗವಾಗಿ 200 ಸಿಕ್ಸರ್‌ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ವೆಸ್ಟ್‌ ಇಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್‌ ಅಗ್ರ ಸ್ಥಾನದಲ್ಲಿದ್ದಾರೆ. ಈ ಸಾಧನೆ ಮಾಡಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

1/7

ವಿಶೇಷ ಸಾಧನೆ ಮಾಡಿದ ಕೆಎಲ್‌ ರಾಹುಲ್‌

ಐಪಿಎಲ್‌ ಟೂರ್ನಿಯ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200 ಸಿಕ್ಸರ್‌ ಸಿಡಿಸಿದ ಭಾರತದ ಮೊದಲನೇ ಹಾಗೂ ವಿಶ್ವದ ಮೂರನೇ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಕೆಎಲ್‌ ರಾಹುಲ್‌ ಬರೆದಿದ್ದಾರೆ. ಗುಜರಾತ್‌ ಟೈಟನ್ಸ್‌ ವಿರುದ್ಧದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಒಂದು ಸಿಕ್ಸರ್‌ ಸಿಡಿಸುತ್ತಿದ್ದಂತೆ ಕನ್ನಡಿಗ ಕೆಎಲ್‌ ರಾಹುಲ್‌ ಈ ದಾಖಲೆ ಬರೆದಿದ್ದಾರೆ. 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಲು ರಾಹುಲ್‌ 129 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ.

2/7

ಟಾಪ್‌ 5 ಬ್ಯಾಟ್ಸ್‌ಮನ್‌ಗಳ ವಿವರ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅತಿ ವೇಗವಾಗಿ 200 ಸಿಕ್ಸರ್‌ಗಳನ್ನು ಸಿಡಿಸಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳ ವಿವರವನ್ನು ಇಲ್ಲಿ ವಿವರಿಸಲಾಗಿದೆ. ಈ ಪಟ್ಟಿಯಲ್ಲಿ ವೆಸ್ಟ್‌ ಇಂಡೀಸ್‌ ಆಟಗಾರರ ಪ್ರಾಬಲ್ಯ ಸಾಧಿಸಿದ್ದಾರೆ. ದಿಗ್ಗಜ ಕ್ರಿಸ್‌ ಗೇಲ್‌ ಅಗ್ರ ಸ್ಥಾನದಲ್ಲಿದ್ದರೆ, ಕೈರೊನ್‌ ಪೊಲಾರ್ಡ್‌ ಐದನೇ ಸ್ಥಾನವನ್ನು ಅಲಂಕರಿಸಿದ್ದಾರೆ.

3/7

1. ಕ್ರಿಸ್‌ ಗೇಲ್‌

ವೆಸ್ಟ್‌ ಇಂಡೀಸ್‌ ದಿಗ್ಗಜ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ಐಪಿಎಲ್‌ ಇತಿಹಾಸದಲ್ಲಿಯೇ ಅತ್ಯಂತ ವೇಗವಾಗಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ತಮ್ಮ 69ನೇ ಐಪಿಎಲ್‌ ಇನಿಂಗ್ಸ್‌ನಲ್ಲಿ ಗೇಲ್‌ ಈ ಸಾಧನೆ ಮಾಡಿದ್ದರು.

4/7

2. ಆಂಡ್ರೆ ರಸೆಲ್‌

ವೆಸ್ಟ್‌ ಇಂಡೀಸ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್ ತಂಡದ ಸ್ಟಾರ್‌ ಆಲ್‌ರೌಂಡರ್‌ ಕೈರೊನ್‌ ಪೊಲಾರ್ಡ್‌ ಅವರು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಐಪಿಎಲ್‌ ಟೂರ್ನಿಯಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಲು 97 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ. ಆಂಡ್ರೆ ರಸೆಲ್‌ ತಮ್ಮ ಐಪಿಎಲ್‌ ವೃತ್ತಿ ಜೀವನವನ್ನು ಬಹುತೇಕ ಕೆಕೆಆರ್‌ ಪರ ಹೊಂದಿದ್ದಾರೆ.

5/7

3 . ಎಬಿ ಡಿ ವಿಲಿಯರ್ಸ್‌

ದಕ್ಷಿಣ ಆಫ್ರಿಕಾ ಮಾಜಿ ನಾಯಕ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ದಿಗ್ಗಜ ಎಬಿ ಡಿವಿಲಿಯರ್ಸ್‌ ಈ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರು ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ 137 ಇನಿಂಗ್ಸ್‌ಗಳಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇವರು 2021ರಲ್ಲಿ ಐಪಿಎಲ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು.

6/7

4. ಡೇವಿಡ್‌ ವಾರ್ನರ್‌

ಆಸ್ಟ್ರೇಲಿಯಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಡೇವಿಡ್‌ ವಾರ್ನರ್‌ ಕೂಡ ಈ ಸಾಲಿನಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇವರು ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ 148 ಇನಿಂಗ್ಸ್‌ಗಳ ಮೂಲಕ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಕಳೆದ ವರ್ಷ ನಡೆದಿದ್ದ 2025ರ ಐಪಿಎಲ್‌ ಟೂರ್ನಿಯ ಮೆಗಾ ಹರಾಜಿನಲ್ಲಿ ವಾರ್ನರ್‌ ಅನ್‌ಸೋಲ್ಡ್‌ ಆಗಿದ್ದರು.

7/7

5. ಕೈರೊನ್‌ ಪೊಲಾರ್ಡ್‌

ವೆಸ್ಟ್‌ ಇಂಡೀಸ್‌ ಹಾಗೂ ಮುಂಬೈ ಇಂಡಿಯನ್ಸ್‌ ಮಾಜಿ ಆಲ್‌ರೌಂಡರ್‌ ಕೈರೊನ್‌ ಪೊಲಾರ್ಡ್‌ ಅವರು ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ 150 ಇನಿಂಗ್ಸ್‌ಗಳ ಮೂಲಕ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದರು. ಆ ಮೂಲಕ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಕಳೆದ ವರ್ಷ ಪೊಲಾರ್ಡ್‌ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.