ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯಗಳಲ್ಲಿರುವ ಮಾದರಿ ಯೋಜನೆ, ಮಾರ್ಗಗಳನ್ನು ಅಧ್ಯಯನ ಮಾಡಿ ರಾಜ್ಯದ ಕೃಷಿ ಸಂಸ್ಕೃತಿ ಮತ್ತು ಬೆಳೆ ಮಾದರಿಗಳಿಗೆ ಅನುಗುಣವಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಿಎಂ ಸೂಚನೆ

ಸಿಎಂ ಡಿ.ಕೆ.ಶಿವಕುಮಾರ್‌. -

Prabhakara R
Prabhakara R Jun 15, 2026 10:42 PM

ಬೆಂಗಳೂರು: ಮುಂಗಾರಿನಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಬೇಕು. ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗುವಂತೆ ಸಿಎಂ ಡಿ.ಕೆ. ಶಿವಕುಮಾರ್ (D K Shivakumar) ಸೂಚನೆ ನೀಡಿದ್ದಾರೆ. ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ.

ಕ್ರಿಮಿನಾಶಕ ಮತ್ತಿತರ ಔಷಧ ಸಿಂಪರಣೆ ಸಲಕರಣೆಗಳ ನೆರವನ್ನು ರೈತರಿಗೆ ಒದಗಿಸಬೇಕು, ಕೃಷಿ ಹೊಂಡಗಳಿಗೆ ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಂಡಗಳಿಗೆ ಬೇಲಿ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇದಕ್ಕೆ ಹಣಕಾಸಿನ ನೆರವು ಸಂಬಂಧ ಅಗತ್ಯ ಯೋಜನೆ ರೂಪಿಸಿ, ಚರ್ಚಿಸಿ ಎಂದು ತಿಳಿಸಿದ್ದಾರೆ.

ಇತರೆ ರಾಜ್ಯಗಳಲ್ಲಿರುವ ಮಾದರಿ ಯೋಜನೆ, ಮಾರ್ಗಗಳನ್ನು ಅಧ್ಯಯನ ಮಾಡಿ ರಾಜ್ಯದ ಕೃಷಿ ಸಂಸ್ಕೃತಿ ಮತ್ತು ಬೆಳೆ ಮಾದರಿಗಳಿಗೆ ಅನುಗುಣವಾಗಿ ಕಾರ್ಯರೂಪಕ್ಕೆ ತರಬೇಕು. ಡ್ರೋನ್, AI ಮತ್ತಿತರ ಆಧುನಿಕ ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಪ್ರಕೃತಿ ವೈಪರೀತ್ಯಗಳಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕು.

ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರಾಥಮಿಕ ಕೃಷಿ ಜತೆ ಸೆಕೆಂಡರಿ ಕೃಷಿ ಸೇರಿದಂತೆ ರೈತರ ಆದಾಯ ಹೆಚ್ಚಿಸಲು ಈಗಾಗಲೇ ಸೂಚಿಸಿರುವ ಕ್ರಮಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಕೃಷಿ ಇಲಾಖೆ ಅಧೀನದಲ್ಲಿರುವ ಐದು ನಿಗಮ ಮತ್ತು ಮಂಡಳಿಗಳ ಸ್ಥಿತಿಗತಿಯ ಅಧ್ಯಯನ‌ ನಡೆಸಿ ವರದಿ ನೀಡಿ ಎಂದು ಸೂಚಿಸಿದ್ದಾರೆ.

ರೈತರಿಗೆ ನೀಡಬೇಕಾದ ಪೂರಕ ಮಾಹಿತಿಗಳನ್ನು ವರದಿಯಲ್ಲಿ ಉಲ್ಲೇಖಿಸಬೇಕು. ರಾಜ್ಯದಲ್ಲಿರುವ ಕೋಲ್ಡ್ ಸ್ಟೋರೇಜ್ ಮತ್ತು ಗೋದಾಮುಗಳು ಬಗ್ಗೆ ಪಟ್ಟಿ ಕೊಡಬೇಕು, ರೈತರಿಗೆ ಸಬ್ಸಿಡಿ ದರದಲ್ಲಿ ಕೊಟ್ಟಿರುವ ಸವಲತ್ತುಗಳು ಎಷ್ಟು ಪ್ರಯೋಜನಕಾರಿಯಾಗಿವೆ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಸಬ್ಸಿಡಿ ನೀಡಿರುವ ಉದ್ದೇಶ ಜಾರಿ ಆಗುತ್ತಿದೆಯೇ ಎಂಬುದರ ಬಗ್ಗೆ ವರದಿ ನೀಡಬೇಕು ಎಂದು ಸಿಎಂ ತಿಳಿಸಿದ್ದಾರೆ.

ಕೆಪೆಕ್ ಮೂಲಕ ರಫ್ತು ಎಷ್ಟು ಹೆಚ್ಚಾಗಿದೆ. ರಫ್ತು ಉತ್ತೇಜಿಸಲು ಏನೇನು ಕ್ರಮ ತೆಗೆದುಕೊಂಡಿದ್ದೀರಿ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಿಎಂ, ರಫ್ತು ಉತ್ತೇಜನಕ್ಕೆ ಯೋಜನೆ ರೂಪಿಸಲು ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಹಾಗೂ ಎಸಿಎಸ್ ತುಷಾರ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳು ಎಷ್ಟರ ಮಟ್ಟಿಗೆ ಜಾರಿ ಆಗುತ್ತಿದೆ ಎನ್ನುವ ಬಗ್ಗೆ ವರದಿ ನೀಡಬೇಕು, ಕೇಂದ್ರದ ಸಹಕಾರ, ಅನುದಾನಕ್ಕೆ ಬರುವಂತೆ ಒತ್ತಡ ಹೇರೋಣ ಎಂದು ತಿಳಿಸಿದ್ದಾರೆ.

ಸಹಕಾರ ಮತ್ತು ಕೃಷಿ ಮಾರುಕಟ್ಟೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸೇರಿದ ಜಾಗಗಳು ಸುರಕ್ಷಿತವಾಗಿರಬೇಕು. ಕಾಂಪೌಂಡ್ ಹಾಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದ ಸಿಎಂ, APMC ಗಳು ಸರಿಯಾಗಿ ರೈತರಿಗೆ ಬಳಕೆ ಆಗುತ್ತಿವೆಯೇ ಎನ್ನುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಸಹಕಾರ ಇಲಾಖೆ ಅಡಿಯಲ್ಲಿ ಯಾವ್ಯಾವ ಸಂಸ್ಥೆಗಳಿಗೆ ಚುನಾವಣೆ ಆಗಬೇಕಿದೆಯೋ ಎಲ್ಲದಕ್ಕೂ ಚುನಾವಣೆ ಮಾಡಬೇಕು.

ಕಾಸ್ಕಾರ್ಡ್ ಬ್ಯಾಂಕ್‌ಗಳು ಕೊಡುವ ಬಡ್ಡಿ ರಹಿತ ಸಾಲದ ಸೌಲಭ್ಯ ಅಗತ್ಯವಿರುವವರಿಗೆ ತಲುಪುತ್ತಿಲ್ಲ. ಬ್ಯಾಂಕ್ ನವರೇ ತಮಗೆ ಬೇಕಾದವರ ಹೆಸರಲ್ಲಿ ಸಾಲ‌ ಪಡೆಯುತ್ತಿದ್ದಾರೆ. ರೈತರಿಗೆ ವಂಚನೆ ಆಗಲು ಬಿಡಬಾರದು. 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ ದುರುಪಯೋಗ ಆಗುತ್ತಿರುವ ಬಗ್ಗೆ ರೈತರು ನನ್ನ ಬಳಿ ಬಂದು ದೂರುತ್ತಿದ್ದಾರೆ. ಇದಕ್ಕೆ ಕಟ್ಟು ನಿಟ್ಟಿನ‌ ಬ್ರೇಕ್ ಹಾಕಬೇಕು.

Priyank Kharge-RSS: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ; ಸಂಘದ ಕಾನೂನುಬದ್ಧ ಸ್ಥಾನಮಾನ, ಆದಾಯ ಕುರಿತು ಸ್ಪಷ್ಟನೆಗೆ ಆಗ್ರಹ

ಅಗತ್ಯ ಇರುವ ಫಲಾನುಭವಿಗಳಿಗೆ ಸಾಲ ಸವಲತ್ತು ತಲುಪುವಂತೆ ನೋಡಿಕೊಳ್ಳಿ. ಈ ವರ್ಷ 1068 ಕೋಟಿ ಮಾವು ಬೆಳೆ ನಾಶ ಆಗಿದೆ. ಈ ಪೈಕಿ 25% ಅಂದರೆ 229 ಕೋಟಿ ರೂ. ಪರಿಹಾರ ಕೊಡಬೇಕಿದೆ. ಕರ್ನಾಟಕ ಸರಕಾರ 114 ಕೋಟಿ ಹಾಗೂ ಕೇಂದ್ರ ಸರಕಾರ 115 ಕೋಟಿ ನಷ್ಟ ಪರಿಹಾರ ಭರಿಸಬೇಕಿದೆ. ಕಾನೂನು ಪ್ರಕಾರ ಮಾವು ಬೆಳೆಗಾರರಿಗೆ ನಷ್ಟ ಪರಿಹಾರ ಸಿಗುವಂತೆ ನೋಡಿಕೊಳ್ಳಿ. APMC ಆವರ್ತ ನಿಧಿ ಸದ್ಬಳಕೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.