ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ʼಈ ಸಲ ಕಪ್‌ ನಮ್ದೆʼ ಖುಷಿ ಹೊರಹಾಕಿದ ಸಿಎಂ ಸಿದ್ದರಾಮಯ್ಯ

”Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ. ಆರ್‌ಸಿಬಿ- ಪಂಜಾಬ್‌ ಕಿಂಗ್ಸ್‌ ನಡುವೆ ನಡೆದ ಇಡೀ ಫೈನಲ್ ಪಂದ್ಯವನ್ನು ವೀಕ್ಷಿಸಿದ್ದಾಗಿ ತಿಳಿಸಿದ್ದಾರೆ.

ʼಈ ಸಲ ಕಪ್‌ ನಮ್ದೆʼ ಖುಷಿ ಹೊರಹಾಕಿದ ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ Jun 4, 2025 6:46 AM

ಬೆಂಗಳೂರು : ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ (IPL 2025) ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಆರ್​ಸಿಬಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ವಿವಿಧ ರಾಜಕೀಯ ನಾಯಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ” Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

‘ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.



‘ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೊಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ’ ಎಂದಿದ್ದಾರೆ.