CM Siddaramaiah: ಕುಮಾರಸ್ವಾಮಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತವನ್ನು ಈ ರಾಜ್ಯದ ಜನ ಎಂದೂ ಕೊಟ್ಟಿಲ್ಲ ಎಂದ ಸಿದ್ದರಾಮಯ್ಯ

ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Profile Vishwavani News Dec 5, 2024 6:47 PM
ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶದಲ್ಲಿ ಅವರು ಮಾತನಾಡಿದರು.
ಡಾ. ರಾಜ್‌ಕುಮಾರ್‌ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಶಿಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ ಎಂದು ತಿಳಿಸಿದ ಸಿಎಂ, ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನರೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು ಎಂದು ದೂರಿದರು.
ಈ ಸುದ್ದಿಯನ್ನೂ ಓದಿ | Lakshmi Hebbalkar: ʼಮುಡಾ ಹಗರಣʼ ಹೆಸರಿನಲ್ಲಿ ಸಿಎಂಗೆ ಕಳಂಕ ತರಲು ವಿಪಕ್ಷಗಳಿಂದ ಯತ್ನ; ಲಕ್ಷ್ಮಿ ಹೆಬ್ಬಾಳಕರ್ ಕಿಡಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ ಎಂದರು.
ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ
ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂಥಾ ಜನದ್ರೋಹಿ ಸರ್ಕಾರ ಬಿಜೆಪಿಯದ್ದು. ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು ಎಂದು ಹೇಳಿದರು. ಕೇಂದ್ರದಲ್ಲಿ ಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ ಎಂದು ಸವಾಲು ಹಾಕಿದರು.
ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, ʼಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿʼ ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ, ಸಹಿಸುತ್ತೀರಾ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಾಲದಲ್ಲಿ ಶೇ.58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ ಎಂದು ತಿಳಿಸಿದ ಸಿಎಂ, ರಾಜ್ಯಕ್ಕೆ, ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕುಮಾರಸ್ವಾಮಿ ಅವರಿಗೆ ಮತ್ತು ಬಿಜೆಪಿ ಸಂಸದರಿಗೆ ಮುಖ್ಯಮಂತ್ರಿಗಳು ಸವಾಲು ಹಾಕಿದರು.
ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು ಎಂದು ಆರೋಪಿಸಿದ ಸಿಎಂ ಅವರು, ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ ಎಂದರು. ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣ ಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು ಎಂದು ವಿವರಿಸಿದರು.
ಈ ಸುದ್ದಿಯನ್ನೂ ಓದಿ | Proba-3 Satellites: ಇಸ್ರೋದ ಸಾಧನೆಗೆ ಮತ್ತೊಂದು ಗರಿ-ಪ್ರೋಬಾ-3 ನೌಕೆ ಯಶಸ್ವಿ ಉಡಾವಣೆ
ಹಾಸನ ಮತ್ತೆ ಕಾಂಗ್ರೆಸ್ ತೆಕ್ಕೆಗೆ
ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿಗಳಿಸಲಿದೆ. ಇದು ಶತಸಿದ್ದ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?