CM Siddaramaiah: ಉಪ ಚುನಾವಣೆಯಲ್ಲಿ ಸೋತ ಬಿಜೆಪಿಯಿಂದ 'ವಕ್ಫ್ ಹೋರಾಟ'ದ ನಾಟಕ; ಸಿದ್ದರಾಮಯ್ಯ ಆಕ್ರೋಶ
ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Vishwavani News
Dec 5, 2024 6:40 PM
ಹಾಸನ: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆರೋಪಿಸಿದರು. ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ, ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟೀಸುಗಳನ್ನೂ ನೀಡಿದ್ದರು. ಬಿಜೆಪಿಯವರು ರಾಜಕೀಯ ಇಬ್ಬಂದಿತನವನ್ನು ಇಬ್ಬದಿನೀತಿಯನ್ನು ಪಾಲಿಸುತ್ತಿದ್ದಾರೆ ಎಂದರು.
ಈ ಸುದ್ದಿಯನ್ನೂ ಓದಿ | PDO Exam: ಡಿ.7, 8ರಂದು ಪಿಡಿಒ ನೇಮಕಾತಿ ಪರೀಕ್ಷೆ; ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ
ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನು ಜನವರಿ 25 ಕ್ಕೆ ನಿಗದಿಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಮಾಹಿತಿ ಪಡೆದು ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.