ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

milk price hike: ಗ್ರಾಹಕರಿಗೆ ಗಾಯದ ಮೇಲೆ ಬರೆ; ನಂದಿನಿ ಹಾಲಿನ ನಂತರ ಕಾಫಿ ಟೀ ದರ ಏರಿಕೆ ಫಿಕ್ಸ್‌

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕಾಫಿ ಮತ್ತು ಟೀಯ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಎದುರಾಗಿದೆ. ಈ ಬಗ್ಗೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದು, ಒಂದು ಕಪ್ ಕಾಫಿ ಅಥವಾ ಟೀಯ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸುವ ತೀರ್ಮಾನಕ್ಕೆ ಬಂದಿದೆ.

ಗ್ರಾಹಕರಿಗೆ ಗಾಯದ ಮೇಲೆ ಬರೆ; ಹಾಲಿನ ನಂತರ ಕಾಫಿ ಟೀ ದರ ಏರಿಕೆ ಫಿಕ್ಸ್‌

ಹರೀಶ್‌ ಕೇರ ಹರೀಶ್‌ ಕೇರ Mar 28, 2025 6:43 AM

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ. ಹೆಚ್ಚಿಸಿ (Milk Price hike) ನಿನ್ನೆ ಸಿಎಂ ಸಿದ್ದರಾಮಯ್ಯ (CM Siddaramaiaih) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ (Cabinet meeting) ಅನುಮೋದನೆ ದೊರೆಯಿತು. ಇದೀಗ ಹಾಲಿನ ದರ ಹೆಚ್ಚಳವಾದ ಬೆನ್ನಲ್ಲೆ, ಬೆಂಗಳೂರು (Bengaluru) ಹೊಟೇಲ್ ಮಾಲೀಕರ ಸಂಘವು ಕಾಫಿ ಮತ್ತು ಟೀ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸಲು ನಿರ್ಧರಿಸಿದೆ. ಇದರೊಂದಿಗೆ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕಾಫಿ ಮತ್ತು ಟೀಯ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಎದುರಾಗಿದೆ. ಈ ಬಗ್ಗೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದು, ಒಂದು ಕಪ್ ಕಾಫಿ ಅಥವಾ ಟೀಯ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸುವ ತೀರ್ಮಾನಕ್ಕೆ ಬಂದಿದೆ.

ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ಆ ದುಡ್ಡನ್ನು ರೈತರಿಗೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದೆ. ಆದರೆ ಜನ ಸಾಮಾನ್ಯರಿಗೆ ಬೆಲೆ ಏರಿಕೆ ಹೊಡೆತ ಬಿದ್ದಿದ್ದು, ಅಲ್ಲದೇ ಇದೀಗ ಕಾಫಿ ಟೀ ಬೆಲೆ ಏರಿಕೆಯಿಂದ ಮತ್ತಷ್ಟು ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. , 'ಬಹುತೇಕ ಹೊಟೇಲ್‌ಗಳಲ್ಲಿ ಕಾಫಿ ಮತ್ತು ಟೀ ತಯಾರಿಸಲು ನಂದಿನಿ ಹಾಲನ್ನೇ ಬಳಸಲಾಗುತ್ತದೆ. ಹಾಲಿನ ದರ ಏರಿಕೆಯಿಂದಾಗಿ ಕಾಫಿ ತಯಾರಿಕೆಯ ಹೆಚ್ಚುವರಿ ವೆಚ್ಚವನ್ನು ಭರಿಸಲು ದರ ಹೆಚ್ಚಿಸುವುದು ಅನಿವಾರ್ಯವಾಗಿದೆ' ಎಂದು ಬೆಂಗಳೂರು ಹೊಟೇಲ್ ಮಾಲೀಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಇದರ ಜೊತೆಗೆ, ಕಾಫಿ ಪುಡಿಯ ದರವೂ ಇತ್ತೀಚೆಗೆ ಏರಿಕೆಯಾಗಿದೆ. 'ಕಾಫಿ ಪುಡಿಯ ರೇಟ್ ಏರಿದಾಗಲೂ ನಾವು ಸುಮ್ಮನಿದ್ದೆವು, ಆದರೆ ಈಗ ಹಾಲಿನ ದರ ಏರಿಕೆಯೊಂದಿಗೆ ಇದನ್ನು ಮುಂದುವರಿಸುವುದು ಕಷ್ಟವಾಗಿದೆ' ಎಂದು ಅವರು ಹೇಳಿದ್ದಾರೆ. ದಿನಸಿ ಸಾಮಗ್ರಿಗಳ ದರವೂ ಏರಿಕೆಯಾಗುತ್ತಿರುವುದರಿಂದ ಒಟ್ಟಾರೆ ವೆಚ್ಚದ ಒತ್ತಡ ಹೆಚ್ಚಾಗಿದೆ ಎಂದು ಸಂಘದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: Milk Price Hike: ರಾಜ್ಯದ ಜನತೆಗೆ ಬಿಗ್‌ ಶಾಕ್‌, ನಂದಿನಿ ಹಾಲಿನ ದರ ಲೀಟರ್‌ಗೆ 4 ರೂ. ಏರಿಕೆ