ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: 2000 ಕೋಟಿ ವೆಚ್ಚದ ಕಾಮಗಾರಿ ಹಗರಣ: ಡಿಕೆ ಶಿವಕುಮಾರ್‌ ಮೇಲೆ ಮುನಿರತ್ನ ರಾಜ್ಯಪಾಲರಿಗೆ ದೂರು

ಒಟ್ಟು 16 ವರ್ಕ್ ಆರ್ಡರ್‌ಗಳನ್ನು ಈ ಕಂಪನಿಗಳ ಗುತ್ತಿಗೆದಾರರಿಗೆ ಟೆಂಡರ್ ಕೊಟ್ಟಿದ್ದಾರೆ. ಕೆಟಿಟಿಪಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ, ದೊಡ್ಡ ದೊಡ್ಡ ಕಂಪನಿಗಳಿಂದ 400 ಕೋಟಿ ರೂ. ಕಮಿಷನ್ ಪಡೆದು ಟೆಂಡರ್ ಕೊಡಲಾಗಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ.

ಕಾಮಗಾರಿ ಗುತ್ತಿಗೆ ಕಮಿಷನ್:‌ ಡಿಕೆಶಿ‌ ಮೇಲೆ ಮುನಿರತ್ನ ರಾಜ್ಯಪಾಲರಿಗೆ ದೂರು

ಡಿಕೆ ಶಿವಕುಮಾರ್‌, ಮುನಿರತ್ನ

ಹರೀಶ್‌ ಕೇರ ಹರೀಶ್‌ ಕೇರ Apr 14, 2025 8:40 AM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ 2,000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ (Contracts) ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ಶೇ 15ರಷ್ಟು ಕಮಿಷನ್‌ (Commission) ಪಡೆದಿದ್ದಾರೆ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (BJP MLA Munirathan) ಅವರು ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ (Givernor Thawar Chand Gehlot) ಅವರಿಗೆ ದೂರು ನೀಡಿದ್ದಾರೆ. ಈ ಹಿಂದೆ ಅವರು ಸಿಬಿಐಗೂ ಈ ವಿಚಾರದಲ್ಲಿ ದೂರು ಸಲ್ಲಿಸಿದ್ದರು.

ನಿನ್ನೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದಾರೆ. ಜೊತೆಗೆ, ‘ಈ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ದೂರು ನೀಡಿದ್ದು, ಡಿ.ಕೆ.ಶಿವಕುಮಾರ್‌ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲು ಅನುಮತಿ ನೀಡಿʼ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ರಾಜಾಕಾಲುವೆ ಕಾಮಗಾರಿಗಳ ಟೆಂಡರ್‌ಗಳಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ. ವರ್ಲ್ಡ್ ಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು, ((1) ಸ್ಟಾರ್ ಇನ್ಫ್ರಾಟೆಕ್ ಅಕಾ ಸ್ಟಾರ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ (2) ಗಣಪತಿ ಸ್ಟೋನ್ ಕ್ರಷರ್ ಪ್ರೈವೇಟ್ ಲಿಮಿಟೆಡ್ (3) ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (4) ಮನು ಕನ್ಸ್ಟ್ರಕ್ಷನ್ಸ್ (5) ಡಿ.ಎಚ್. ​​ಪಟೇಲ್ (6) ಎಲ್ಐಎ ಕನ್ಸ್ಟ್ರಕ್ಷನ್ಸ್ (7) ತಿರುಮಲ ಗಿರಿ ಕನ್ಸ್ಟ್ರಕ್ಷನ್ಸ್ (8) ಓಷನ್ ಕನ್ಸ್ಟ್ರಕ್ಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ (9) ವಿಡಿಬಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ (10) ಆರ್ಎನ್ಎಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು (11) ಬಿಎಸ್ಆರ್ ಕನ್ಸ್ಟ್ರಕ್ಷನ್ಸ್ ಕಂಪನಿಗಳಿಂದ ದೊಡ್ಡ ಮೊತ್ತದ ಕಮಿಷನ್ ಪಡೆದು ಟೆಂಡರ್ ಕೊಡಲಾಗಿದೆ ಎಂದು ಆರೋಪಿಸಿದ್ದಾರೆ.

ಒಟ್ಟು 16 ವರ್ಕ್ ಆರ್ಡರ್‌ಗಳನ್ನು ಈ ಕಂಪನಿಗಳ ಗುತ್ತಿಗೆದಾರರಿಗೆ ಟೆಂಡರ್ ಕೊಟ್ಟಿದ್ದಾರೆ. ಕೆಟಿಟಿಪಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ, ದೊಡ್ಡ ದೊಡ್ಡ ಕಂಪನಿಗಳಿಂದ 400 ಕೋಟಿ ರೂ. ಕಮಿಷನ್ ಪಡೆದು ಟೆಂಡರ್ ಕೊಡಲಾಗಿದೆ. ಇದರ ಟೆಂಡರ್ ಅನ್ನು ಅನರ್ಹ ಕಂಪನಿಗಳಿಗೆ ಕೊಡುತ್ತಿದ್ದಾರೆ. ಇದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಕೈವಾಡ ಇದೆ. ಹೀಗಾಗಿ ಈ ಟೆಂಡರ್ ಅವ್ಯವಹಾರವನ್ನು ಇಡಿ ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ,

ವರ್ಲ್ಡ್ ಬ್ಯಾಂಕ್ ಲೋನ್‌ಗೆ ಸಂಬಂಧಿಸಿದಂತೆ 2 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಕಳೆದ ಫೆಬ್ರವರಿಯಲ್ಲಿ ನಾನು ಇಡಿಗೆ ದೂರು ಕೊಟ್ಟಿದ್ದೆ. ಅದಾದ ನಂತರ ಡಿಕೆಶಿ, ಡಿಕೆ ಸುರೇಶ್ ಅಧಿಕಾರಿಗಳನ್ನು, ಗುತ್ತಿಗೆದಾರರನ್ನು ಮನೆಗೆ ಕರೆದಿದ್ದಾರೆ. ಏ.15ಕ್ಕೆ ಟೆಂಡರ್ ಕರೆದಿದ್ದು, ಈ ಗುತ್ತಿಗೆದಾರರ ಕಂಪನಿಗಳಿಗೆ ಅನುಕೂಲ ಆಗುವಂತೆ ಟೆಂಡರ್ ನಿಯಮ ಬದಲಾಯಿಸಲಾಗಿದೆ. ಗುತ್ತಿಗೆದಾರರ ಜೊತೆ ಶಾಮೀಲಾಗಿ 2 ಸಾವಿರ ಕೋಟಿ ರೂ. ಅಕ್ರಮ ಮಾಡುತ್ತಿದ್ದಾರೆ. 400 ಕೋಟಿ ರೂ. ಕಮಿಷನ್ ಪಡೆಯುತ್ತಾರೆ. ಇದನ್ನು ತಡೆಗಟ್ಟಿದರೆ ಸರ್ಕಾರಕ್ಕೆ 400 ಕೋಟಿ ರೂ. ಉಳಿಯಲಿದೆ. ಮಂಗಳವಾರ ಇದರ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ (PIL) ಹಾಕುತ್ತೇವೆ. ಈ ಹಗರಣದ ನೇರ ಹೊಣೆ ಡಿಕೆಶಿ, ಡಿಕೆ ಸುರೇಶ್ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: DK Shivakumar: ಕೇಂದ್ರ ಬೆಂಬಲ ನೀಡಿದರೆ ಕರ್ನಾಟಕ ಬಲಿಷ್ಠ ರಾಜ್ಯವಾಗಲಿದೆ- ಡಿಕೆ ಶಿವಕುಮಾರ್