ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಇವರೇ ಹೊಣೆ: ಬೆಟ್ಟು ಮಾಡಿದ ನ್ಯಾ.ಡಿಕುನ್ಹಾ ಆಯೋಗ

Bengaluru Stampede: ಈ ಪ್ರಕರಣದಲ್ಲಿ ಈ ಎಲ್ಲರ ಕರ್ತವ್ಯ ಲೋಪ, ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ. ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ. ಅಷ್ಟು ದೊಡ್ಡ ಕಾರ್ಯಕ್ರಮ ಆಯೋಜಿಸಿದರೂ ಕ್ರೀಡಾಂಗಣದ ಒಳಗೆ ಕೇವಲ 79 ಪೊಲೀಸರು ಮಾತ್ರ ಇದ್ದರು. ಹೊರಗೆ ಯಾವ ಪೊಲೀಸರೂ ಇರಲಿಲ್ಲ. ಆಂಬ್ಯುಲೆನ್ಸ್ ವ್ಯವಸ್ಥೆಯೂ ಮಾಡಿರಲಿಲ್ಲ ಎನ್ನಲಾಗಿದೆ.

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಇವರೇ ಹೊಣೆ: ಬೆಟ್ಟು ಮಾಡಿದ ಡಿಕುನ್ಹಾ ಆಯೋಗ

ಹರೀಶ್‌ ಕೇರ ಹರೀಶ್‌ ಕೇರ Jul 12, 2025 11:47 AM

ಬೆಂಗಳೂರು: ಆರ್​ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆದ ಕಾಲ್ತುಳಿತಕ್ಕೆ (Bengaluru Stampede) ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ವರದಿ ಸಲ್ಲಿಸಿದ್ದು, ವರದಿಯಲ್ಲಿರುವ ಪ್ರಮುಖ ಅಂಶಗಳು ರಿವೀಲ್‌ ಆಗಿವೆ. ವರದಿಯಲ್ಲಿ ಕಾಲ್ತುಳಿತಕ್ಕೆ ಕಾರಣವಾದ ಅಂಶಗಳನ್ನು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಹಲವು ಅಧಿಕಾರಿಗಳ ಕರ್ತವ್ಯ ಲೋಪ, ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ ಎಂದು ಏಕ‌ಸದಸ್ಯ ತನಿಖಾ ಆಯೋಗದ ವರದಿಯಲ್ಲಿ ತಿಳಿಸಲಾಗಿದೆ

ಜೂನ್ 4ರಂದು ಆರ್​ಸಿಬಿ ವಿಜಯೋತ್ಸವದ (RCB Victory Celebration) ಸಂದರ್ಭದಲ್ಲಿ 11 ಮಂದಿ ಅಭಿಮಾನಿಗಳನ್ನು ಬಲಿ ಪಡೆದ ದುರಂತ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ನಿವೃತ್ತ ನ್ಯಾ.ಮೈಕೆಲ್ ಡಿ‌ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗ ರಚಿಸಿತ್ತು. ತನಿಖಾ ಆಯೋಗದ ವರದಿಯಲ್ಲಿ ಕೆಲವು ಪ್ರಮುಖ ಅಂಶಗಳನ್ನು ಪಟ್ಟಿ ಮಾಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಕೆಎಸ್‌ಸಿಎ, ಡಿಎನ್​ಎ, ಆರ್​ಸಿಬಿ ಹಾಗೂ ಪೊಲೀಸರು ನೇರ ಹೊಣೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂದು ತಿಳಿದಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಈ ಎಲ್ಲರ ಕರ್ತವ್ಯ ಲೋಪ, ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ. ಕಾರ್ಯಕ್ರಮ ಆಯೋಜಿಸಿದ ಬಳಿಕವೂ ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ. ಅಷ್ಟು ದೊಡ್ಡ ಕಾರ್ಯಕ್ರಮ ಆಯೋಜಿಸಿದರೂ ಕ್ರೀಡಾಂಗಣದ ಒಳಗೆ ಕೇವಲ 79 ಪೊಲೀಸರು ಮಾತ್ರ ಇದ್ದರು. ಹೊರಗೆ ಯಾವ ಪೊಲೀಸರೂ ಇರಲಿಲ್ಲ. ಆಂಬ್ಯುಲೆನ್ಸ್ ವ್ಯವಸ್ಥೆಯೂ ಮಾಡಿರಲಿಲ್ಲ ಎನ್ನಲಾಗಿದೆ.

ಆರ್​ಸಿಬಿ ವಿಜಯೋತ್ಸವಕ್ಕೆ ಜನಸಾಗರವೇ ಹರಿದು ಬಂದಿತ್ತು. ಚಿನ್ನಸ್ವಾಮಿ ಸ್ಟೇಡಿಯಂಗೆ ಉಚಿತ ಎಂಟ್ರಿ ಎಂದು ತಿಳಿಸಿ ದೊಡ್ಡ ಪ್ರಮಾದವನ್ನೇ ಸೃಷ್ಟಿಸಿದರು. 3.25ಕ್ಕೆ ಕಾಲ್ತುಳಿತ ಸಂಭವಿಸಿದರೂ, 5.30ರವರೆಗೆ ಪೊಲೀಸ್ ಕಮಿಷನರ್​ಗೆ ಈ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲದೇ ಜಂಟಿ ಪೊಲೀಸ್ ಅಯುಕ್ತರು ಕ್ರೀಡಾಂಗಣಕ್ಕೆ ಬಂದಿದ್ದು 4 ಗಂಟೆಗೆ ಏಂದು ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.

ತನಿಖೆ ಪೂರ್ಣಗೊಳಿಸಿರುವ ಆಯೋಗ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ತನಿಖಾ ವರದಿ ಸಲ್ಲಿಸಿದೆ. ಈ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Bengaluru Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ವರದಿ ಸಿಎಂಗೆ ಸಲ್ಲಿಕೆ